ರಾಜಕೀಯವಾಗಿ ಮುಗಿಸಲು ದೊಡ್ಡ ಷಡ್ಯಂತ್ರ ನಡೆಯುತ್ತಿದೆ – ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಬೆಂಗಳೂರು: ಕೇರಳ ಮೂಲದ ಜೈಹಿಂದ್ ಕಮ್ಯುನಿಕೇಷನ್ಸ್ ಪ್ರೈವೇಟ್ ಲಿಮಿಟೆಡ್ ಚಾನೆಲ್‌ಗೆ ಕೇಂದ್ರ ತನಿಖಾ ದಳ (ಸಿಬಿಐ) ನೋಟಿಸ್ ನೀಡಿದ್ದು, ತಮ್ಮನ್ನು ರಾಜಕೀಯವಾಗಿ ಮುಗಿಸಲು ದೊಡ್ಡ ಷಡ್ಯಂತ್ರ ನಡೆಯುತ್ತಿದೆ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೋಮವಾರ ಆರೋಪಿಸಿದ್ದಾರೆ. ಜೈ ಹಿಂದ್ ಚಾನೆಲ್‌ನಲ್ಲಿ ಡಿಕೆಶಿ ಅವರ ಹೂಡಿಕೆ ಇದೆ.

ಅವರ ವಿರುದ್ಧದ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಅವರು ಚಾನಲ್‌ನಲ್ಲಿ ಮಾಡಿದ ಹೂಡಿಕೆಯ ವಿವರಗಳನ್ನು ಕೋರಿ ಸಿಬಿಐ ಭಾನುವಾರ ಸಂಸ್ಥೆಗೆ ನೋಟಿಸ್ ನೀಡಿದೆ. ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಜನವರಿ 11ರಂದು ತನ್ನ ಮುಂದೆ ಹಾಜರಾಗಬೇಕು ಎಂದು ಜೈಹಿಂದ್ ಕಮ್ಯುನಿಕೇಷನ್ಸ್ ಪ್ರೈ.ಲಿ.ನ ವ್ಯವಸ್ಥಾಪಕ ನಿರ್ದೇಶಕರನ್ನು ಡಿಕೆ ಶಿವಕುಮಾರ್ ಅವರ ವಿರುದ್ಧದ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಬೆಂಗಳೂರು ಘಟಕವು ಕೇಳಿದೆ.

ಇದನ್ನೂ ಓದಿ: ಬಿಜೆಪಿ ನಾಯಕನ ಭೂ ಕಬಳಿಕೆ ವಿರುದ್ಧ ಪ್ರಕರಣ ದಾಖಲಿಸಿದ್ದ ವೃದ್ಧ ದಲಿತ ರೈತರಿಬ್ಬರಿಗೆ ಇಡಿ ಸಮನ್ಸ್!

ಇತ್ತೀಚಿನ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ, ಸಿಬಿಐ ತನ್ನನ್ನು ಬಂಧಿಸುವುದಾದರೆ ಬಂಧಿಸಲಿ, ತಾನು ಅದಕ್ಕೆ ಸಿದ್ಧನಾಗಿರುವುದಾಗಿ ಹೇಳಿದ್ದಾರೆ. “ಜೈ ಹಿಂದ್‌ ಸಂಸ್ಥೆಯ ಎಲ್ಲಾ ದಾಖಲೆ ಸಿಬಿಐ ಬಳಿ ಇದ್ದರೂ ನೋಟಿಸ್ ಜಾರಿ ಮಾಡುತ್ತಿದೆ” ಎಂದು ಅವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

“ಅವರು ಯಾವ ಕಾರಣಕ್ಕೆ ನೋಟಿಸ್ ನೀಡುತ್ತಿದ್ದಾರೆಂದು ನನಗೆ ತಿಳಿದಿಲ್ಲ, ಅವರ ಬಳಿ ಎಲ್ಲಾ ದಾಖಲೆಗಳಿವೆ. ಅವರ ಬಳಿ ಯಾವುದೇ ದಾಖಲೆಗಳಿಲ್ಲ ಎಂಬ ಕಾರಣಕ್ಕಾಗಿ ಇದು ಅಲ್ಲ. ನನಗೆ ಕಿರುಕುಳ ನೀಡುವುದರ ಹಿಂದೆ ದೊಡ್ಡ ವ್ಯಕ್ತಿಗಳು ಇದ್ದಾರೆ. ಅದು ನನಗೆ ಎಲ್ಲಾ ತಿಳಿದಿದೆ. ಇದು ನನಗೆ ಗೊತ್ತಿಲ್ಲದ ಸಂಗತಿಯಲ್ಲ. ನನ್ನನ್ನು ರಾಜಕೀಯವಾಗಿ ಮುಗಿಸಲು ಅವರು ಏನು ಬೇಕಾದರೂ ಮಾಡಲಿ” ಎಂದು ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ದೊಡ್ಡ ಷಡ್ಯಂತ್ರ ನಡೆಯುತ್ತಿದೆ, ಬಿಜೆಪಿಯ ಕೆಲ ನಾಯಕರು ನನ್ನನ್ನು ಜೈಲಿಗೆ ಕಳುಹಿಸುವುದಾಗಿ ಈ ಹಿಂದೆಯೇ ಹೇಳಿದ್ದರು. ಅವರು ತಮ್ಮ ಸಂದೇಶವನ್ನು ಸಂಬಂಧಪಟ್ಟ ಇಲಾಖೆಗೆ ತಲುಪಿಸಿದ್ದಾರೆ. ನನ್ನ ಬಗ್ಗೆ ಮಾತನಾಡಿದವರನ್ನು ಚರ್ಚೆಗೆ ಬರುವಂತೆ ಹೇಳಿದ್ದೇನೆ. ದೊಡ್ಡ ಸಂಚು ರೂಪಿಸಲಾಗುತ್ತಿದೆ. ನಾನು ಯಾವುದೇ ತಪ್ಪು ಮಾಡಿಲ್ಲ. ಸಿಬಿಐ ತನಿಖೆ ನಡೆಸಲಿ, ನನಗೆ ನ್ಯಾಯ ಸಿಗುತ್ತದೆ” ಎಂದು ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ | ಮಾಧ್ಯಮಗಳ ವಿರುದ್ಧ ಪ್ರಕರಣ ದಾಖಲಿಸಲು ಜೆಡಿಯು ಮಾಜಿ ಅಧ್ಯಕ್ಷ ಲಲನ್ ಸಿಂಗ್ ಪ್ರತಿಜ್ಞೆ

ಈ ಬಗ್ಗೆ ಅವರಿಗೆ ನೋಟಿಸ್ ಬಂದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ನಾನು ಮುಖ್ಯಸ್ಥನಾಗಿರುವ ನನ್ನ ಪಾಲುದಾರಿಕೆ ಸಂಸ್ಥೆಗೆ ನೋಟಿಸ್ ನೀಡಲಾಗಿದೆ. ಅವರು ನನ್ನ ಮಕ್ಕಳು, ನನ್ನ ಹೆಂಡತಿ ಮತ್ತು ಸಂಬಂಧಿಕರನ್ನು ಪ್ರಶ್ನಿಸುತ್ತಿದ್ದಾರೆ. ಸಿಬಿಐ ನಮ್ಮ ಕುಟುಂಬ ಸದಸ್ಯರು ಮತ್ತು ನಮ್ಮ ಹಳ್ಳಿಯ ಸೊಸೈಟಿಯ ನಿರ್ದೇಶಕರನ್ನು ಪ್ರಶ್ನಿಸುತ್ತಿದೆ” ಎಂದು ಶಿವಕುಮಾರ್ ಆರೋಪಿಸಿದ್ದಾರೆ.

ಅವರ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿಯನ್ನು ಸರ್ಕಾರ ಹಿಂಪಡೆದು ಲೋಕಾಯುಕ್ತಕ್ಕೆ ಹಸ್ತಾಂತರಿಸಿದೆ. ಶಿವಕುಮಾರ್ ಅವರು ಮನವಿ ಅಥವಾ ಒತ್ತಾಯ ಮಾಡದಿದ್ದರೂ ರಾಜ್ಯ ಸರ್ಕಾರ ಅದನ್ನು ಲೋಕಾಯುಕ್ತಕ್ಕೆ ಒಪ್ಪಿಸಿದೆ ಎಂದು ಸರ್ಕಾರ ಹೇಳಿದೆ.

ವಿಡಿಯೊ ನೋಡಿ: ಶೋಷಿತರ ಧ್ವನಿಗೆ ಪ್ರತಿಧ್ವನಿಯಾಗಿ ಮೊಳಗಿದ ಸಪ್ದರ್ ಹಾಶ್ಮಿ Janashakthi Media

Donate Janashakthi Media

Leave a Reply

Your email address will not be published. Required fields are marked *