ಬೆಂಗಳೂರು: ಕೊರೊನಾ ಎರಡನೇ ಅಲೆ ಮಿತಿ ಮೀರಿ ಹರಡುತ್ತಿರುವುದರಿಂದ ಅದರ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಮೇ 10 ರಿಂದ 24ರವರೆಗೆ ಹದಿನಾಲ್ಕು ದಿನಗಳ ಕಾಲ ಲಾಕ್‌ಡೌನ್ ಘೋಷಿಸಲಾಗಿದೆ.
ಬಿಗ್ ಬಾಸ್ ಕನ್ನಡ ಸೀಸನ್ 8 ಆವೃತ್ತಿಯನ್ನು ಅರ್ಧಕ್ಕೆ ಸ್ಥಗಿತಗೊಳಿಸಲಾಗುತ್ತಿರುವುದಾಗಿ ಕಲರ್ಸ್ ಕನ್ನಡ ವಾಹಿನಿ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಅಧಿಕೃತವಾಗಿ ಹೇಳಿದ್ದಾರೆ.
ಫೇಸ್ ಬುಕ್ ನಲ್ಲಿ ವಿವರವನ್ನು ಹಂಚಿಕೊಂಡಿರುವ ಪರಮೇಶ್ವರ ಗುಂಡ್ಕಲ್ ಅವರು ಬಿಗ್ ಬಾಸ್ ಶುರುವಾಗಿ ಇವತ್ತಿಗೆ ಎಪ್ಪತ್ತೊಂದನೇ ದಿನ. ಆದರೆ ಅರ್ಧಕ್ಕೆ ಶೋವನ್ನು ನಿಲ್ಲಿಸಬೇಕಾಗಿದೆ. ಟಿವಿ ಅಸೋಸಿಯೇಷನ್ ಅಧ್ಯಕ್ಷ ಎಸ್ ವಿ ಶಿವಕುಮಾರ್ ರಿಯಾಲಿಟಿ ಶೋ ಹಾಗೂ ಧಾರಾವಾಹಿ ಶೂಟಿಂಗ್ ನಿಲ್ಲಿಸಬೇಕು ಎಂದು ಸುತ್ತೋಲೆ ಹೊರಡಿಸಿದ್ದಾರೆ. ಹೀಗಾಗಿ ನಾವು ನಮ್ಮ ಶೋವನ್ನು ನಿಲ್ಲಿಸುತ್ತಿರುವುದಾಗಿ ಹೇಳಿದ್ದಾರೆ.
https://www.facebook.com/parameshwar.gundkal/posts/10224223913966731
ಹೊರಗಡೆ ಎದುರಾಗಿರುವ ಕಷ್ಟದ ಸವಾಲು ಗೊತ್ತಿಲ್ಲದೇ ಒಳಗಡೆ ಇರುವವರೆಲ್ಲಾ ಖುಷಿಯಾಗಿದ್ದಾರೆ. ಐಸೋಲೇಷನ್ನಿನಲ್ಲಿ ಇರುವುದರಿಂದ ಸುರಕ್ಷಿತವಾಗಿಯೂ ಇದ್ದಾರೆ. ಎಲ್ಲರಿಗೂ ಹೊರಗಡೆ ಆಗಿರುವ ಬೆಳವಣಿಗೆ ತಿಳಿಸಿ ನಾಳೆ ಹೊರಗಡೆ ಕರೆಯುತ್ತಿದ್ದೇವೆ. ಅನಂತರ ಅವರನ್ನು ಮತ್ತು ತಂಡವನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಲು ವ್ಯವಸ್ಥೆ ಮಾಡಲಾಗುವುದು ಎಂದು ತಮ್ಮ ಫೇಸ್‌ಬುಕ್ ಪುಟದಲ್ಲಿ ಗುಂಡ್ಕಲ್ ಬರೆದುಕೊಂಡಿದ್ದಾರೆ.
ಇದನ್ನು ಓದಿ: ಮುಂಬಯಿ ಮಾದರಿಯಲ್ಲಿ ಕಾರ್ಯಚರಣೆ ಮಾಡಲು ಕ್ರಮ: ಲಿಂಬಾವಳಿ
ನೂರಾರು ದಿನಗಳ ಕೆಲಸ. ನೂರಾರು ಜನರ ಕೆಲಸ. ಎಲ್ಲವನ್ನೂ ಪಕ್ಕಕ್ಕಿಟ್ಟು ಶ್ರದ್ಧೆಯಿಂದ ಕೆಲಸ ಮಾಡಿದ ಒಂದು ತಂಡದ ಕನಸು ಅರ್ಧಕ್ಕೇ ನಿಂತಿದೆ. ಕಷ್ಟದ ತೀರ್ಮಾನವಾದರೂ ಸಮಾಧಾನ ಕೊಟ್ಟ ತೀರ್ಮಾನ. ಮನಸ್ಸು ಭಾರವಾಗಿದೆ. ಎಲ್ಲರಿಗೂ ಈ ಕಳವಳಕ್ಕೊಂದು ಉತ್ತರ ಬೇಗ ಸಿಗಲಿ ಸುರಕ್ಷಿತವಾಗಿರಿ ಎಂದು ಸಂದೇಶವನ್ನು ರವಾನಿಸಿದ್ದಾರೆ.
ಇದನ್ನು ಓದಿ: 14 ದಿನ ಲಾಕ್‌ಡೌನ್ ವಿಸ್ತರಣೆ : ಏನಿರುತ್ತೆ? ಏನಿರಲ್ಲ
ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಟ ಸುದೀಪ್ ವಾರದ ಕೊನೆ ದಿನಗಳಲ್ಲಿ ನಡೆಸಿಕೊಡುವ ಎರಡು ಸಂಚಿಕೆಗಳಲ್ಲಿ ಭಾಗವಹಿಸಲಿಲ್ಲ. ನಂತರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡರೂ ಸಹ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣದಿಂದಾಗಿ ಕಳೆದ ವಾರದ ಸಂಚಿಕೆಯಲ್ಲಿಯೂ ಅವರು ಭಾಗವಹಿಸಲಿಲ್ಲ.
‘ಕೋವಿಡ್ –19ನ ಎರಡನೇ ಅಲೆಯ ಹಾವಳಿಯಿಂದಾಗಿ ಚಿತ್ರರಂಗವು ಹಲವಾರನ್ನು ಕಳೆದುಕೊಂಡಿದ್ದೇವೆ. ರಾಜ್ಯ ಸರ್ಕಾರ ಲಾಕ್‌ಡೌನ್ ಘೋಷಣೆ ಮಾಡಿರುವ ಕಾರಣ ಧಾರಾವಾಹಿ, ರಿಯಾಲಿಟಿ ಷೋ ಚಿತ್ರೀಕರಣ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ’ ಎಂದು ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಅಧ್ಯಕ್ಷ ಎಸ್.ವಿ. ಶಿವಕುಮಾರ್ ತಿಳಿಸಿದ್ದಾರೆ.