ಮೈಸೂರು: ಧರ್ಮಾಂಧರು ಮಾತ್ರ ಬಾನು ಮುಷ್ತಾಕ್ ಹೆಸರನ್ನು ವಿರೋಧಿಸುತ್ತಾರೆ ಎಂದು ನಗರದ ವಿಮಾನ ನಿಲ್ದಾಣದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ದಸರಾ ಉದ್ಘಾಟಕರಾಗಿ ಬಾನು ಮುಷ್ಕಾಕ್ ಅವರ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಕನ್ನಡಾಂಬೆಯ ಬಗ್ಗೆ ಬಾನು ಮುಷ್ತಾಕ್ ನೀಡಿರುವ ಹಳೆಯ ಹೇಳಿಕೆಗೂ ಇದಕ್ಕೂ ಏನು ಸಂಬಂಧ? ಬೆಜೆಪಿ ಕುಂಟು ನೆಪ ಹುಡುಕುತ್ತಿದ್ದಾರೆ ಅಷ್ಟೇ. ಯಾವತ್ತೋ ಏನೋ ಹೇಳಿದ್ದಾರೆ ಎಂದು ಅದನ್ನುಇಲ್ಲಿಗೆ ಲಿಂಕ್ ಮಾಡುವುದು ಎಷ್ಟು ಸರಿ? ಧರ್ಮಾಂಧರು ಮಾತ್ರ ಬಾನು ಮುಷ್ತಾಕ್ ಆಯ್ಕೆಯನ್ನ ವಿರೋಧಿಸುತ್ತಾರೆ ಎಂದು ಹೇಳಿದ್ದಾರೆ.
ಬೆರಳಣಿಕೆಯ ಮಂದಿಗೆ ಮಾತ್ರ ಬೂಕರ್ ಪ್ರಶಸ್ತಿ ಬಂದಿದೆ. ನಾನೇ ಅವರ ಹೆಸರನ್ನು ಆಯ್ಕೆ ಮಾಡಿದ್ದೇನೆ. ಉದ್ಘಾಟಕರು ದನ ತಿನ್ನುವುದನ್ನು ಬಿಜೆಪಿಯವರು ನೋಡಿದ್ದಾರಾ? ಅವರನ್ನು ವಿರೋಧಿಸಲೇಬೇಕೆಂದು ವಿರೋಧ ಮಾಡುತ್ತಿದ್ದಾರೆ. ದಸರಾ ಒಂದು ಸಾಂಸ್ಕೃತಿಕ ಹಬ್ಬ. ಇದು ಧರ್ಮಾತೀತವಾದ ಹಬ್ಬ. ಇದು ಎಲ್ಲಾ ಜಾತಿ, ಧರ್ಮಕ್ಕೆ ಸೇರಿದ್ದು. ನಿಸಾರ್ ಅಹಮದ್ ಕೂಡ ದಸರಾ ಉದ್ಘಾಟನೆ ಮಾಡಿದ್ದಾರೆ. ಟಿಪ್ಪು ಹೈದಾರಲಿ ಕೂಡ ದಸರಾ ನಡೆಸಿದ್ದಾರೆ. ದಿವಾನ್ ಮಿರ್ಜಾ ಇಸ್ಮಾಯಿಲ್ ಕೂಡ ದಸರಾ ನಡೆಸಿದ್ದಾರೆ. ಇದಕ್ಕೆ ಧರ್ಮದ ಲೇಪನ ಬಳಿಯುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಕೆನರಾ ಬ್ಯಾಂಕ್ ಕ್ಯಾಂಟೀನ್ನಲ್ಲಿ ಮಾಂಸ ನಿಷೇಧ; ಗೋಮಾಂಸ ತಿಂದು ಪ್ರತಿಭಟನೆ
ಇನ್ನು, ಇದೇ ವೇಳೆ ಧರ್ಮಸ್ಥಳ ತನಿಖಾ ವಿಚಾರವಾಗಿ ಪ್ರತಿಕ್ರಿಯಿಸಿ, ಉನ್ನತಮಟ್ಟದ ತನಿಖೆ ಅಗತ್ಯತೆ ಇಲ್ಲ. ಧರ್ಮಸ್ಥಳದ ಮೇಲೆ ಅನುಮಾನ ತೂಗುಗತ್ತಿ ಇದೆ. ಅದನ್ನು ನಿವಾರಿಸಲು ತನಿಖೆ ಮಾಡುತ್ತಿದ್ದೇವೆ. ಎಸ್‌ಐಟಿ ತನಿಖೆಯನ್ನು ಧರ್ಮಾಧಿಕಾರಿಗಳೇ ಸ್ವಾಗತ ಮಾಡಿದ್ದಾರೆ. ಬಿಜೆಪಿ ಕೂಡ ಸ್ವಾಗತ ಮಾಡಿತ್ತು. ತನಿಖೆ ನಡೆಯುವ ಈ ಹಂತದಲ್ಲಿ ಧರ್ಮದ ರ‍್ಯಾಲಿ ಮಾಡಿದರೆ ಅದರಲ್ಲಿ ಅರ್ಥ ಇದ್ಯಾ? ಬಿಜೆಪಿ ರಾಜಕೀಯಕ್ಕಾಗಿ ಈ ರ‍್ಯಾಲಿ ಮಾಡುತ್ತಿದೆ.
ಬಿಜೆಪಿಯವರು ಡೋಂಗಿಗಳು. ಡೋಂಗಿಗಳು ಮಾತ್ರ ತಮಗೆ ಬೇಕಾದಾಗ ಬೇಕಾದ ರೀತಿ ಮಾತನಾಡುತ್ತಾರೆ. ನಾವು ಎಸ್‌ಐಟಿ ತನಿಖೆಯಲ್ಲಿ ಮಧ್ಯ ಪ್ರವೇಶ ಮಾಡುವುದಿಲ್ಲ. ಯಾವ ಒತ್ತಡವನ್ನು ಸಹ ನಾವು ತನಿಖೆ ಮೇಲೆ ಹೇರಿಲ್ಲ, ತನಿಖೆಗೆ ಸಮಯ ನಿಗದಿ ಮಾಡಿಲ್ಲ. ಯಾರು ಏನು ಬೇಕಾದರೂ ರ‍್ಯಾಲಿ ಮಾಡಿಕೊಳ್ಳಲಿ. ನಮಗೂ ಅದಕ್ಕೂ ಸಂಬಂಧ ಇಲ್ಲ. ಬಿಜೆಪಿಯವರಿಗೆ ಧರ್ಮವೂ ಗೊತ್ತಿಲ್ಲ, ಜಾತಿಯೂ ಗೊತ್ತಿಲ್ಲ. ಬರೀ ರಾಜಕಾರಣ ಮಾಡುತ್ತಿದ್ದಾರೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.
ಇನ್ನು, ಆಸ್ತಿ ಮುದ್ರಾಂಕ ಶುಲ್ಕ ಹೆಚ್ಚಳ ವಿಚಾರ ಕುರಿತು ಮಾತನಾಡಿ, 1% ಮುದ್ರಾಂಕ ಶುಲ್ಕ ಹೆಚ್ಚು ಮಾಡಿದ್ದೇವೆ. ಬೇರೆ ರಾಜ್ಯಗಳಲ್ಲಿ ಈ ತೆರಿಗೆ ಈಗಾಗಲೇ ಇದೆ. ಅದರ ಅನುಸಾರ ಹೆಚ್ಚಳ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
50 ಆಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ರಾಷ್ಟ್ರಪತಿಗಳಿಗೆ ಪತ್ರ ಬರೆಯುವ ಮೂಲಕ ಮೈಸೂರು ಅರಮನೆಗೆ ಭೇಟಿ ನೀಡುವಂತೆ ಕೋರಿದ್ದರು. ಅವರ ಆಹ್ವಾನದ ಬೆನ್ನಲ್ಲೇ ಸೆಪ್ಟೆಂಬರ್ 1 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸುತ್ತಿದ್ದಾರೆ.
ಆ ಹಿನ್ನಲೆ ಇತ್ತ ನಗರದಲ್ಲಿ ಪಾಲಿಕೆ ಸಿಬ್ಬಂದಿ ಜೆಸಿಬಿ ಮೂಲಕ ಅಂಗಡಿಗಳನ್ನು ತೆರವುಗೊಳಿಸುತ್ತಿದ್ದಾರೆ. ಏಕಾಏಕಿ ತೆರವು ಹಿನ್ನಲೆ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ನೋಡಿ: ‘ಷಡ್ಯಂತ್ರ’ ಯಾರದ್ದು??ದೂರುದಾರನನ್ನು ಬಂಧಿಸಿದ್ದುಯಾಕೆ??? Janashakthi Media
