ನವದೆಹಲಿ: ಬಿಹಾರ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟವಾಗಿದ್ದು, ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ ಎಂದು ಪ್ರತಿಕಾಗೋಷ್ಟಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಿಳಿಸಿದ್ದಾರೆ. ವಿಧಾನಸಭಾ
ಬಿಹಾರ ವಿಧಾನಸಭೆಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 6 ರಂದು ಮೊದಲ ಹಂತದ ಮತದಾನ ಮತ್ತು ನವೆಂಬರ್ 11ರಂದು ಎರಡನೇ ಹಂತದ ಮತದಾನ ನಡೆಯಲಿದೆ. ನವೆಂಬರ್ 14ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಬೀಜಿಂಗ್ | ತೀವ್ರ ಹಿಮಪಾತ : ಮೌಂಟ್ ಎವರೆಸ್ಟ್‌ನಲ್ಲಿ ಸಿಲುಕಿರುವ ಒಂದು ಸಾವಿರ ಪರ್ವತಾರೋಹಿಗಳು
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ನಂತರ ಮೊದಲ ಬಾರಿಗೆ ಬಿಹಾರ ಚುನಾವಣೆ ನಡೆಯುತ್ತಿದೆ. ಈ ಪರಿಷ್ಕರಣೆಯಲ್ಲಿ 68.5 ಲಕ್ಷ ಮತದಾರರ ಹೆಸರನ್ನು ಡಿಲಿಟ್ ಮಾಡಲಾಗಿದೆ ಮತ್ತು 21.5 ಲಕ್ಷ ಹೊಸ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದೆ.
ಬಿಹಾರ ರಾಜ್ಯದಲ್ಲಿ 243 ಕ್ಷೇತ್ರಗಳಿವೆ. ಅವುಗಳಲ್ಲಿ 38 ಪರಿಶಿಷ್ಟ ಜಾತಿ ಮತ್ತು ಎರಡು ಪರಿಶಿಷ್ಟ ಪಂಗಡ ಕ್ಷೇತ್ರಗಳು ಸೇರಿವೆ. ಬಿಹಾರ ವಿಧಾನಸಭೆಯ ಅವಧಿ ನವೆಂಬರ್ 22, 2025ರಂದು ಕೊನೆಗೊಳ್ಳಲಿದೆ.
ಇದನ್ನೂ ನೋಡಿ: ಜಿಎಸ್ ಟಿ 1.O: ಲೂಟಿ ಉತ್ಸವ್, ಜಿಎಸ್ ಟಿ 2.O: ಜುಮ್ಲಾ ಉತ್ಸವ್ Janashakthi Media
