ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ದಂಗೆ ಏಳಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿ ವರದಿ ಮಾಡಿದ್ದ ಮಾಧ್ಯಮ ಸಂಸ್ಥೆಗಳ ವಿರುದ್ಧ ಮೊಕದ್ದಮೆ ಹೂಡುವುದಾಗಿ ಜನತಾ ದಳ (ಯುನೈಟೆಡ್) ಮಾಜಿ ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ‘ಲಲನ್’ ಶನಿವಾರ ಪ್ರತಿಜ್ಞೆ ಹೇಳಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಒಂದು ದಿನದ ನಂತರ ಲಲನ್ ಅವರು ಈ ಕುರಿತು ಹೇಳಿಕೆಯನ್ನು ನೀಡಿದ್ದಾರೆ. ಅವರು ರಾಜೀನಾಮೆ ನಂತರ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ನಿತೀಶ್ ಕುಮಾರ್ ಅವರ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
“ಒಂದು ಪ್ರಮುಖ ಪತ್ರಿಕೆ ಮತ್ತು ಕೆಲವು ಸುದ್ದಿ ವಾಹಿನಿಗಳ ವರದಿಗಳಲ್ಲಿ ಸಂಪೂರ್ಣವಾಗಿ ತಪ್ಪಾಗಿ ಬಿಂಬಿಸಲಾಗಿದೆ. ಸುಳ್ಳಿನ ಮೂಲಕ ನನ್ನ ಖ್ಯಾತಿಗೆ ಕಳಂಕ ತರುವ ಗುರಿಯನ್ನು ಈ ವರದಿಗಳು ಹೊಂದಿವೆ” ಎಂದು ಅವರು ಹೇಳಿಕೆ ನೀಡಿದ್ದಾರೆ. ಅದರ ನಂತರ ಕುಮಾರ್ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಅವರ ಪ್ರಸ್ತಾಪವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು. ಬಿಹಾರ
ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ 40 ಸಾವಿರ ಕೋಟಿ ರೂ. ಅಕ್ರಮ; ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ
ಡಿಸೆಂಬರ್ 20 ರಂದು ಬಿಹಾರದ ಸಚಿವರೊಬ್ಬರ ನಿವಾಸದಲ್ಲಿ ಬೆರಳೆಣಿಕೆಯಷ್ಟು ಜೆಡಿಯು ಶಾಸಕರ ಸಭೆಯಲ್ಲಿ ಅವರು ಭಾಗವಹಿಸಿದ್ದರು ಎಂದು ವರದಿಗಳಲ್ಲಿ ಉಲ್ಲೇಖಿಸಲಾಗಿತ್ತು. ಇದನ್ನೆ ಪತ್ರಿಕೆಗಳು ಲಲನ್ ಸಿಂಗ್ ಅವರು ದಂಗೆ ಏಳಲಿದ್ದಾರೆ ಎಂಬಂತೆ ವರದಿ ಮಾಡಿದ್ದವು.
ವರದಿಗಳ ಬಗ್ಗೆ ಹೇಳಿಕೆ ನೀಡಿರುವ ಅವರು, “ನಾನು ಇಂಡಿಯಾ ಒಕ್ಕೂಟದ ಸಭೆಯಲ್ಲಿ ಭಾಗವಹಿಸಲು ಅಂದು ಸಿಎಂ ಜೊತೆಗೆ ದೆಹಲಿಯಲ್ಲಿದ್ದೆ. ಸಂಜೆಯ ನಂತರ ನಾನು ದೆಹಲಿಯ ಅವರ ನಿವಾಸದಲ್ಲಿ ಪಕ್ಷದ ಸಂಸದರ ಸಭೆಯಲ್ಲಿ ಭಾಗವಹಿಸಿದ್ದೆ. ನಿತೀಶ್ ಕುಮಾರ್ ಅವರೊಂದಿಗಿನ ಸ್ನೇಹವು ಇಲ್ಲಿನ ರಾಜಕೀಯ ವಲಯಗಳಲ್ಲಿ ಎಲ್ಲರಿಗೂ ಚಿರಪರಿಚಿತವಾಗಿರುವುದೆ ಆಗಿದೆ. ಆದರೆ ನನ್ನ ಪ್ರತಿಷ್ಠೆಗೆ ಹಾನಿ ಮಾಡಲು ಮತ್ತು ಕಳೆದ 37 ವರ್ಷಗಳಿಂದ ನಮ್ಮ ಸಂಬಂಧದಕ್ಕೆ ಹುಳಿ ಹಿಂಡಲು ಪ್ರಯತ್ನಿಸಲಾಗಿದೆ” ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: ಉಳ್ಳಾಲ | ಕಲ್ಲಡ್ಕ ಭಟ್ ವಿರುದ್ಧ ಪ್ರತಿಭಟಿಸಿದವರ ಮೇಲೆ ಸ್ವಯಂ ಪ್ರೇರಿತ ಎಫ್‌ಐಆರ್ ದಾಖಲಿಸಿದ ಕಾಂಗ್ರೆಸ್ ಸರ್ಕಾರ!
“ವಾಸ್ತವವೆಂದರೆ, ನನ್ನ ಸ್ವಂತ ಲೋಕಸಭಾ ಕ್ಷೇತ್ರದಲ್ಲಿ ನನ್ನ ಹೆಚ್ಚಿದ ಕೆಲಸದ ಕಾರಣಕ್ಕೆ ನಾನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ನಿತೀಶ್ ಕುಮಾರ್ ಅವರ ನಾಯಕತ್ವದಲ್ಲಿ ಜೆಡಿಯು ಗಟ್ಟಿಯಾಗಿ ನಿಂತಿದೆ ಮತ್ತು ನಮ್ಮ ವಿರೋಧಿಗಳೆಲ್ಲರೂ ನೆಲ ಕಚ್ಚುತ್ತಾರೆ” ಎಂದು ಮುಂಗೇರ್ ಸಂಸದರೂ ಆಗಿರುವ ಅವರು ಪ್ರತಿಪಾದಿಸಿದ್ದಾರೆ.
ಶುಕ್ರವಾರ ಜೆಡಿಯು ತನ್ನ ರಾಷ್ಟ್ರೀಯ ಕಾರ್ಯಕಾರಿಣಿ ಮತ್ತು ರಾಷ್ಟ್ರೀಯ ಮಂಡಳಿಯ ಸಭೆಗಳನ್ನು ನಡೆಸಿ ದೆಹಲಿಯಿಂದ ಹಿಂದಿರುಗಿದ ನಂತರ, “ನಾನು ಅಂತಹ ಎಲ್ಲಾ ಮಾಧ್ಯಮಗಳಿಗೆ ಕಾನೂನು ನೋಟಿಸ್ ಕಳುಹಿಸುತ್ತೇನೆ ಮತ್ತು ಇವುಗಳ ವಿರುದ್ಧ ಮಾನನಷ್ಟ ಮೊಕದ್ದಮೆಗಳನ್ನು ಹೂಡುತ್ತೇನೆ” ಎಂದು ಅವರು ಹೇಳಿದ್ದಾರೆ. ಬಿಹಾರ
ವಿಡಿಯೊ ನೋಡಿ: ಕರಾವಳಿ ನಾಡು ಇದೀಗ ಕಾರ್ಪೊರೇಟ್ ಬಿಳಿಯಾನೆಗಳ ಬಟ್ಟಲಾಗಿದೆ – ರಾಜಾರಾಂ ತಲ್ಲೂರು Janashakthi Media