ಬಿಹಾರ: ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗಳು ಪೋಷಕರಿಗೆ ಮಗನ ಶವ ನೀಡಲು 50,000 ರೂ.ಗೆ ಬೇಡಿಕೆ ಇಟ್ಟಿದ್ದಾರೆ. ಇಷ್ಟು ಹಣ ತಮ್ಮ ಬಳಿ ಇಲ್ಲದ ಕಾರಣ ಊರೂರು ಸುತ್ತಿ ಭಿಕ್ಷೆ ಬೇಡುತ್ತಿರುವ ಮನಕಲುಕುವ ದೃಶ್ಯ ಕಂಡು ಬಂದಿದೆ.
ಬಿಹಾರದ ಸಮಸ್ತೀಪುರದಲ್ಲಿ ಈ ಘಟನೆ ನಡೆದಿದ್ದು, ಮಗನ ಮೃತದೇಹ ನೀಡಲು ಸದರ್ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಯೊಬ್ಬ 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ. ಇಷ್ಟೊಂದು ಹಣ ಇಲ್ಲದ ಕಾರಣ ಬಡ ದಂಪತಿ ಮನೆ ಮನೆಗೆ ತೆರಳಿ, ಭಿಕ್ಷೆ ಬೇಡುತ್ತಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಏನಿದು ಘಟನೆ? ಕಳೆದ ಕೆಲ ದಿನಗಳ ಹಿಂದೆ ಬಡ ದಂಪತಿ ಮಗ ಮನೆಯಿಂದ ಕಾಣೆಯಾಗಿದ್ದನು. ಇದಾದ ಬಳಿಕ ಆತನ ಮೃತದೇಹ ಸಮಸ್ತೀಪುರ ಸದರ್ ಆಸ್ಪತ್ರೆಯಲ್ಲಿದೆ ಎಂದು ದಂಪತಿಗೆ ಕರೆ ಬಂದಿದೆ. ಶವ ಪಡೆದುಕೊಳ್ಳಲು ಅಲ್ಲಿಗೆ ಹೋದಾಗ 50 ಸಾವಿರ ರೂಪಾಯಿ ಲಂಚ ಕೇಳಿದ್ದಾರೆ. ನಾವು ಬಡವರಾಗಿದ್ದು, ಅಷ್ಟೊಂದು ಹಣ ನೀಡಲು ಸಾಧ್ಯವಿಲ್ಲ ಎಂದು ಕೇಳಿಕೊಂಡಿರುವ ಹೊರತಾಗಿ ಕೂಡ ಇವರ ಮಾತನ್ನು ಸಿಬ್ಬಂದಿ ಕೇಳಿಲ್ಲ. ಹೀಗಾಗಿ, ಹಣ ಹೊಂದಿಸಲು ಮನೆ ಮನೆಗೆ ತೆರಳಿ ಭಿಕ್ಷೆ ಕೇಳುತ್ತಿದ್ದಾರೆ.
ಈ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಬಹುತೇಕ ಸಿಬ್ಬಂದಿ ಗುತ್ತಿಗೆ ಆದಾರದ ಮೇಲೆ ದುಡಿಯುತ್ತಿದ್ದು, ತಿಂಗಳಿಗೆ ಸರಿಯಾಗಿ ಸಂಬಳ ಸಿಗುವುದಿಲ್ಲ. ಹೀಗಾಗಿ, ಇಲ್ಲಿಗೆ ಚಿಕಿತ್ಸೆಗೆ ಬರುವ ರೋಗಿಗಳ ಸಿಬ್ಬಂದಿ ಬಳಿ ಹಣ ಕೀಳುವ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಹೆಚ್ಚು ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಹೇಳಿಕೊಂಡಿದ್ದಾರೆ.
ಬಡತನದ ಬೇಗೆಯಲ್ಲಿರುವ ದಂಪತಿಗಳ ಬಳಿ ಇಷ್ಟೊಂದು ಹಣ ಇಲ್ಲದ್ದರಿಂದ ಮನೆ ಮನೆಗೆ ಅಲೆದು ಹಣವನ್ನು ಸಂಗ್ರಹಿಸಲು ಮುಂದಾಗಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
समस्तीपुर- जवान बेटे का पोस्टमार्टम के लिए माता पिता कर रहा है भिक्षाटन,पोस्टमार्टम कर्मी ने कहा 50 हज़ार लाओ और बेटे का शव ले जाओ।
यहां जीना भी मुश्किल और मरना भी मुश्किल।#बिहार pic.twitter.com/SZew1K1rwL
— Mukesh singh (@Mukesh_Journo) June 8, 2022