ಬಿಹಾರ | ರೈಲ್ವೇ ಭೂಮಿ ಹಗರಣ ಮೊದಲ ಚಾರ್ಜ್ ಶೀಟ್‌ನಲ್ಲಿ ರಾಬ್ರಿ ದೇವಿ ಮತ್ತು ಮಗಳ ಹೆಸರು!

ಹೊಸದಿಲ್ಲಿ: ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮತ್ತು ಅವರ ಪುತ್ರಿ, ಸಂಸದೆ ಮಿಸಾ ಭಾರ್ತಿ ಅವರನ್ನು ಹೆಸರಿಸಿರುವ ರೈಲ್ವೇ ಭೂಮಿ, ಉದ್ಯೋಗ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಮಂಗಳವಾರ ತನ್ನ ಮೊದಲ ಚಾರ್ಜ್ ಶೀಟ್ ಸಲ್ಲಿಸಿದೆ. ಕಾಂಗ್ರೆಸ್ ನೇತೃತ್ವದ ಯುಪಿಎ-1 ಸರಕಾರದಲ್ಲಿ ಲಾಲು ಅವರು ರೈಲ್ವೇ ಸಚಿವರಾಗಿದ್ದ ಅವಧಿಗೆ ಸಂಬಂಧಿಸಿದ ಹಗರಣ ಇದಾಗಿದೆ.

ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಕುಟುಂಬದ ಆಪ್ತ ಸಹವರ್ತಿ ಅಮಿತ್ ಕತ್ಯಾಲ್ ಸೇರಿದಂತೆ ಇತರ ಕೆಲವು ವ್ಯಕ್ತಿಗಳು ಮತ್ತು ಕಂಪನಿಗಳನ್ನು ಪ್ರಾಸಿಕ್ಯೂಷನ್ ದೂರಿನಲ್ಲಿ (ಚಾರ್ಜ್ ಶೀಟ್) ಹೆಸರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಬಿಹಾರ

ಇದನ್ನೂ ಓದಿ: ‘ಮತ್ತೆ ಉಸಿರಾಡುವಂತಾಯಿತು’ | ಸುಪ್ರೀಂ ತೀರ್ಪಿಗೆ ಬಿಲ್ಕಿಸ್ ಬಾನೋ ಪ್ರತಿಕ್ರಿಯೆ

ಚಾರ್ಜ್ ಶೀಟ್ ಅನ್ನು ದೆಹಲಿಯ ವಿಶೇಷ ಪ್ರಿವೆನ್ಷನ್ ಆಫ್ ಮನಿ ಲಾಂಡರಿಂಗ್ ಆಕ್ಟ್ (ಪಿಎಂಎಲ್‌ಎ) ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಮತ್ತು ನ್ಯಾಯಾಲಯವು ಜನವರಿ 16 ರಂದು ವಿಚಾರಣೆ ನಡೆಸುವಂತೆ ಪಟ್ಟಿ ಮಾಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. ಬಿಹಾರ

ಕಳೆದ ವರ್ಷ ನವೆಂಬರ್‌ನಲ್ಲಿ ಈ ಪ್ರಕರಣದಲ್ಲಿ ಇಡಿಯಿಂದ ಲಾಲು ಯಾದವ್ ಅವರ ಆಪ್ತ ಕತ್ಯಾಲ್ ಅವರನ್ನು ಬಂಧಿಸಲಾಗಿತ್ತು. ಈ ವೇಳೆ ಲಾಲು ಮತ್ತು ಅವರ ಪುತ್ರ ಮತ್ತು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ಸಮನ್ಸ್‌ ನೀಡಿ ಕರೆಸಿಕೊಂಡಿತ್ತು.

2004 ರಿಂದ 2009 ರವರೆಗೆ, ಭಾರತೀಯ ರೈಲ್ವೆಯ ವಿವಿಧ ವಲಯಗಳಲ್ಲಿ ಗ್ರೂಪ್ “ಡಿ” ಹುದ್ದೆಗಳಿಗೆ ಹಲವಾರು ಜನರನ್ನು ನೇಮಿಸಲಾಯಿತ್ತು. ಜೊತೆಗೆ ಈ ವೇಳೆ ಜನರು ತಮ್ಮ ಭೂಮಿಯನ್ನು ಆಗಿನ ರೈಲ್ವೆ ಸಚಿವ ಲಾಲು ಪ್ರಸಾದ್ ಅವರ ಕುಟುಂಬ ಸದಸ್ಯರಿಗೆ ಮತ್ತು ಅವರ ಹೆಸರಿನ ಎಕೆ ಇನ್ಫೋಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ವರ್ಗಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ವಿಡಿಯೊ ನೋಡಿ: ಕಲಾಸಕ್ತರ ಕಣ್ಮನ ತಣಿಸಿದ ಚಿತ್ರಸಂತೆ : ಹರಿದು ಬಂದ ಕಲಾ ಪ್ರೇಮಿಗಳ ಸಾಗರ Janashakthi Media

Donate Janashakthi Media

Leave a Reply

Your email address will not be published. Required fields are marked *