ನೈಸ್ ರಸ್ತೆಯಲ್ಲಿ ಬೈಕ್‌ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ನೈಸ್ ರಸ್ತೆಯಲ್ಲಿ ಸೋಮವಾರ ಬೆಳಗ್ಗೆ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಪ್ರಯಾಣಿಕ ಗಾಯಗೊಂಡಿರುವ ಘಟನೆ ನಡೆದಿದೆ. ಬೈಕ್‌

ವಿನಾಯಕ್ (20) ಮತ್ತು ಗಿರೀಶ್ (22) ಜಿಗಣಿಯಲ್ಲಿ ಮನೆಯಿಂದ ತುಮಕೂರಿಗೆ ತೆರಳುತ್ತಿದ್ದಾಗ ಮಂಗನಹಳ್ಳಿ ಬಳಿ ವಾಹನ ಡಿಕ್ಕಿ ಹೊಡೆದು ವೇಗವಾಗಿ ಹೋಗಿದೆ. ಇದರಿಂದ ವಿನಾಯಕ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಿರೀಶ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಇದನ್ನು ಓದಿ : ಪತಂಜಲಿಯ ‘ಸೋನ್ ಪಾಪ್ಡಿ’ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ: ಪತಂಜಲಿ ಅಧಿಕಾರಿಗೆ ಜೈಲುಶಿಕ್ಷೆ

ಇಬ್ಬರೂ ನಗರದ ಹೊರವಲಯದಲ್ಲಿರುವ ತಾಂತ್ರಿಕ ಸಂಸ್ಥೆಯಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದರು ಎಂದು ಜ್ಞಾನಭಾರತಿ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳಿದ್ದರೆ ಪರಿಶೀಲಿಸಲಾಗುವುದು, ಯಾವುದೇ ಪ್ರತ್ಯಕ್ಷದರ್ಶಿಗಳಿಂದ ವಿವರ ಪಡೆಯಲಾಗುವುದು ಎಂದು ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಅಪಘಾತ ಹೇಗೆ ಸಂಭವಿಸಿತು ಎಂಬುದು ಖಚಿತವಾಗಿಲ್ಲ. ಅವರ ಕೂಡಾ ವೇಗವಾಗಿ ಚಲಿಸುತ್ತಿದ್ದರೆಂಬ ಅನುಮಾನವಿದೆ ಎಂದರು.

ಇದನ್ನು ನೋಡಿ : ಮಂಗಳ ಸೂತ್ರ ಮತ್ತು ಮತ ರಾಜಕಾರಣ – ಡಾ. ಮೀನಾಕ್ಷಿ ಬಾಳಿ, ಕೆಎಸ್‌ ವಿಮಲಾ ಮಾತುಕತೆ Janashakthi Media

Donate Janashakthi Media

Leave a Reply

Your email address will not be published. Required fields are marked *