ಬೆಳಗಾವಿ :ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೊಗನಿಹಾಳ ಗ್ರಾಮದ ಘಟಪ್ರಭಾ ನದಿ ಬಳಿ ಸೇತುವೆಯ ಮೇಲೆ ಬೈಕ್ ಸ್ಕಿಡ್ ಆಗಿ ನದಿಗೆ ಬಿದ್ದು ದಂಪತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಘೋಡಗೇರಿ ಗ್ರಾಮದಿಂದ ಪೊಗತ್ಯಾನಟ್ಟಿ ಗ್ರಾಮಕ್ಕೆ ದಂಪತಿ ಬೈಕ್ ಮೇಲೆ ತೆರಳುವಾಗ ನೊಗನಿಹಾಳ ಗ್ರಾಮದ ಬಳಿ ಸೇತುವೆ ದಾಟುವಾಗ ಬೈಕ್ ಸ್ಕಿಡ್ ಆಗಿ ನದಿಗೆ ಬಿದ್ದು ದಂಪತಿ ಸಾವನ್ನಪ್ಪಿದ್ದಾರೆ.ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದ ಸುರೇಶ ಬಡಿಗೇರ (53), ಜಯಶ್ರೀ ಬಡಿಗೇರ(45) ಮೃತ ದಂಪತಿ ಎಂದು ತಿಳಿದುಬಂದಿದೆ.
ಇದನ್ನು ಓದಿ : ದಲಿತ ಯುವಕನಿಗೆ ಜಾತಿ ನಿಂದನೆ; ಮಾರಣಾಂತಿಕ ಹಲ್ಲೆ ನಡೆಸಿದ ಗ್ರಾಮದ ಯುವಕರು
ಘಟಪ್ರಭಾ ನದಿಯಿಂದ ಜಯಶ್ರೀ ಶವ ಹೊರ ತೆಗೆದ ಅಗ್ನಿಶಾಮಕ ದಳ ಸಿಬ್ಬಂದಿ ಜಯಶ್ರೀ ಪತಿ ಸುರೇಶ್ ಗಾಗಿ ನದಿಯಲ್ಲಿ ಶೋಧಕಾರ್ಯ ಮುಂದುವರೆದಿದೆ. ಅಲ್ಲದೆ ಸೇತುವೆ ತಡೆಗೋಡೆ ನಿರ್ಮಾಣ ಮಾಡಿ ಎಂದು ಅಧಿಕಾರಿಗಳಿಗೆ ಹಲವು ಬಾರಿ ಸ್ಥಳೀಯರಿಂದ ಹಾಗೂ ಪೊಲೀಸ್ ಇಲಾಖೆಯಿಂದಲೂ ಕೂಡ ಒತ್ತಾಯ ಕೇಳಿಬಂದಿತ್ತು.
ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ನಿರ್ಲಕ್ಷಕ್ಕೆ ಇದೀಗ ದಂಪತಿಗಳು ಬಲಿಯಾಗಿದ್ದಾರೆ. ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ನೋಡಿ : ಕಿರುಕುಳ ಆರೋಪ: ತರಗತಿಯಲ್ಲೇ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಉಪನ್ಯಾಸಕಿ Janashakthi Media