ಬಿಲ್ಕಿಸ್ ಬಾನೊ ಪ್ರಕರಣ | ಸುಪ್ರೀಂನಲ್ಲಿ ಶರಣಾಗತಿಗೆ ಸಮಯ ಕೋರಿದ 3 ಅಪರಾಧಿಗಳು

ಹೊಸದಿಲ್ಲಿ: ಗುಜರಾತ್‌ನಲ್ಲಿ 2002ರಲ್ಲಿ ನಡೆದ ಹಿಂಸಾಚಾರದ ವೇಳೆ ಬಿಲ್ಕಿಸ್ ಬಾನೊ ಅವರ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಅವರ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈದ ಪ್ರಕರಣದ ಮೂವರು ಅಪರಾಧಿಗಳು ಶರಣಾಗಲು ಸಮಯಾವಕಾಶವನ್ನು ವಿಸ್ತರಿಸುವಂತೆ ಕೋರಿ ಗುರುವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ 11 ಅಪರಾಧಿಗಳಿಗೆ ವಿನಾಯಿತಿ ನೀಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಜನವರಿ 8 ರಂದು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು.

ತನ್ನ ವಿರುದ್ಧ ದೌರ್ಜನ್ಯ ನಡೆಸಿದ ಆರೋಪಿಗಳ ಬಗ್ಗೆ ಗುಜರಾತ್‌ನ ಬಿಜೆಪಿ ಸರ್ಕಾರ ತೆಗೆದುಕೊಂಡಿದ್ದ ನಿರ್ಧಾರದ ವಿರುದ್ಧ ಬಿಲ್ಕೀಸ್ ಬಾನೋ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ಆದೇಶದಲ್ಲಿ ಎಲ್ಲಾ 11 ಅತ್ಯಾಚಾರ ಅಪರಾಧಿಗಳು ಎರಡು ವಾರಗಳಲ್ಲಿ ಮತ್ತೆ ಜೈಲಿಗೆ ಶರಣಾಗುವಂತೆ ಸೂಚಿಸಿತ್ತು.

ಇದನ್ನೂ ಓದಿ: ತತ್ವಜ್ಞಾನಿ ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ | ರಾಜ್ಯ ಸರ್ಕಾರ ಘೋಷಣೆ

ಗುರುವಾರದಂದು ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಸಂಜಯ್ ಕರೋಲ್ ಅವರ ಪೀಠದ ಮುಂದೆ ಸಮಯ ವಿಸ್ತರಣೆ ಕೋರುವ ಅರ್ಜಿಯನ್ನು ಉಲ್ಲೇಖಿಸಲಾಗಿದ್ದು, ಸಿಜೆಐ ಮುಂದೆ ಮನವಿಯನ್ನು ಸಲ್ಲಿಸುವಂತೆ ರಿಜಿಸ್ಟ್ರಾರ್ ಕೇಳಿದೆ. “ಶರಣಾಗತಿ ಮತ್ತು ಜೈಲಿಗೆ ಹಾಜರಾಗುವ ಸಮಯ ವಿಸ್ತರಣೆಗಾಗಿ ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಮೂವರು ಪ್ರತಿವಾದಿಗಳು ಹೇಳಿದ್ದಾರೆ. ಪೀಠವನ್ನು ಪುನರ್ರಚಿಸಬೇಕಾಗಿರುವುದರಿಂದ, ಪೀಠವನ್ನು ಪುನರ್ರಚಿಸಲು ಸಿಜೆಐ ಅವರಿಂದ ಆದೇಶವನ್ನು ಪಡೆಯುವ ನೋಂದಾವಣೆ ಭಾನುವಾರದಂದು ಮುಕ್ತಾಯಗೊಳ್ಳುತ್ತದೆ” ಪೀಠ ಹೇಳಿದೆ.

2002ರ ಗೋಧ್ರಾ ನಂತರದ ಗಲಭೆಯಲ್ಲಿ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈದ ಪ್ರಕರಣದ ಎಲ್ಲಾ 11 ಅಪರಾಧಿಗಳಿಗೆ ಕ್ಷಮಾಪಣೆ ನೀಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಜನವರಿ 8 ರಂದು ರದ್ದುಗೊಳಿಸಿತ್ತು. ಪ್ರಕರಣದ 11 ಅಪರಾಧಿಗಳಿಗಳ ಶಿಕ್ಷೆಯ ಅವಧಿ ಪೂರ್ಣಗೊಳ್ಳುವ ಮುನ್ನವೇ ಅವರನ್ನು ಬಿಡುಗಡೆ ಮಾಡಿದ ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (ಪಿಐಎಲ್) ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠವು, ಗುಜರಾತ್ ಸರ್ಕಾರವು ಅಪರಾಧಿಗಳಿಗೆ ಕ್ಷಮಾಪಣೆ ನೀಡಿರುವುದು ಸೂಕ್ತ ಸರ್ಕಾರವಲ್ಲ ಎಂದು ಹೇಳಿತ್ತು.

ಇದನ್ನೂ ಓದಿ: ಕನ್ನಡಿಗರಿಗೆ ಆದ ಅನ್ಯಾಯದ ಬಗ್ಗೆ ಮೋದಿ ಉತ್ತರಿಸಬೇಕೆ ವಿನಃ ಬಿಜೆಪಿ ಐಟಿ ಸೆಲ್ ಅಲ್ಲ – ಸಿದ್ದರಾಮಯ್ಯ

ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ, ಗುಜರಾತ್ ರಾಜ್ಯವು ಈ ರೀತಿಯ ಆದೇಶಗಳನ್ನು ನೀಡಲು ಸಮರ್ಥವಾಗಿಲ್ಲ. ಅಲ್ಲದೆ, “ಸಂತ್ರಸ್ತೆಯ ಹಕ್ಕುಗಳೂ ಮುಖ್ಯ, ಮಹಿಳೆ ಗೌರವಕ್ಕೆ ಅರ್ಹಳು. ಮಹಿಳೆಯರ ವಿರುದ್ಧ ನಡೆಸಲಾಗುವ ಬರ್ಬರ ಅಪರಾಧಗಳಲ್ಲಿ ಅಪರಾಧಿಗಳ ಶಿಕ್ಷೆ ಕಡಿತಗೊಳಿಸಲು ಸಾಧ್ಯವೇ? ಅಪರಾಧಿಗಳಿಗೆ ಶಿಕ್ಷೆ ಯಾವ ರಾಜ್ಯದ ನ್ಯಾಯಾಲಯದಲ್ಲಿ ವಿಧಿಸಲಾಗಿತ್ತೋ ಆ ರಾಜ್ಯದ ಸರ್ಕಾರಗಳು ಶಿಕ್ಷೆ ಕಡಿತಗೊಳಿಸುವ ಬಗ್ಗೆ ನಿರ್ಧರಿಸಬಹುದೇ ವಿನಹ ಅಪರಾಧ ನಡೆದ ರಾಜ್ಯದ ಸರ್ಕಾರಗಳಲ್ಲ” ಎಂದು ಸುಪ್ರೀಂ ಕೋರ್ಟ್‌ ಹೇಳಿತ್ತು.

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಕುಟುಂಬದ ಸದಸ್ಯರ ಹತ್ಯೆ ಪ್ರಕರಣದ ಆರೋಪಿಗಳನ್ನು ಬಿಡುಗಡೆ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಬಿಲ್ಕಿಸ್‌ ಬಾನು, ತೃಣಮೂಲ ಕಾಂಗ್ರೆಸ್‌ ಪಕ್ಷದ ಮಹುವಾ ಮೊಯಿತ್ರಾ, ಸಿಪಿಐ(ಎಂ) ಪಾಲಿಟ್‌ ಬ್ಯುರೋ ಸದಸ್ಯೆ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲೌಲ್‌ ಹಾಗೂ ಲಕ್ನೋ ವಿವಿಯ ಮಾಜಿ ಉಪಕುಲಪತಿ ರೂಪ್‌ ರೇಖಾ ವರ್ಮಾ ಸಹಿತ ಹಲವರು ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಸುಪ್ರೀಂ ಕೋರ್ಟ್‌ 11 ದಿನಗಳ ಕಾಲ ಅರ್ಜಿ ವಿಚಾರಣೆ ನಡೆಸಿ, ಅಕ್ಟೋಬರ್‌ನಲ್ಲಿ ತೀರ್ಪು ಕಾಯ್ದಿರಿಸಿತ್ತು.

ವಿಡಿಯೊ ನೋಡಿ: ಜಾತಿವಾದಿ ವ್ಯವಸ್ಥೆಯ ಸಂಚಿನಿಂದ ಹತ್ಯೆಯಾದ ರೋಹಿತ್ ವೇಮುಲ Janashakthi Media

Donate Janashakthi Media

Leave a Reply

Your email address will not be published. Required fields are marked *