ಲೋಕಸಭೆಯಲ್ಲಿ ವಿವಾದಿತ ಕೃಷಿ ಕಾನೂನುಗಳ ರದ್ದತಿ ಮಸೂದೆ 2021ರ ಅಂಗೀಕಾರ

ನವದೆಹಲಿ: ಲೋಕಸಭೆಯಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಕೃಷಿ ಕಾನೂನುಗಳ ರದ್ದತಿ ಮಸೂದೆ 2021 ಮಂಡಿಸಿದರು. ಮಸೂದೆಯು ಲೋಕಸಭೆಯಲ್ಲಿ ಮಂಡಿಸಿದ ನಂತರ ಕೃಷಿ ಕಾನೂನುಗಳ ರದ್ದತಿ ಮಸೂದೆ ವಿರೋಧ ಪಕ್ಷದ ಸಂಸದರ ಗದ್ದಲದ ನಡುವೆಯೇ ಅಂಗೀಕರಿಸಲಾಗಿದೆ.

ಕೃಷಿ ಕಾನೂನುಗಳ ರದ್ದತಿ ಮಸೂದೆಯನ್ನು ಅಂಗೀಕರಿಸುವ ಮೊದಲು ಯಾವುದೇ ಚರ್ಚೆಗೆ ಅವಕಾಶ ಮಾಡಿಕೊಡಲು ಸ್ಪೀಕರ್ ಓಂ ಬಿರ್ಲಾ ಅವರು ವಿರೋಧ ಪಕ್ಷದ ಸಂಸದರಿಗೆ ಮನವಿ ಮಾಡಿದ್ದರು. ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಮಸೂದೆಯನ್ನು ಸದನದಲ್ಲಿ ಚರ್ಚಿಸಬೇಕೆಂದು ಒತ್ತಾಯಿಸಿದರು.

ಕೃಷಿ ಕಾನೂನುಗಳನ್ನು ರದ್ದತಿ ಮಸೂದೆಯನ್ನು ಲೋಕಸಭೆಯಲ್ಲಿ ಕೇವಲ ನಾಲ್ಕು ನಿಮಿಷಗಳಲ್ಲಿ ಅಂಗೀಕರಿಸಲಾಯಿತು. ಮಧ್ಯಾಹ್ನ 12:06 ಕ್ಕೆ ಮಂಡಿಸಲಾಯಿತು. ಮತ್ತು 12:10 ಕ್ಕೆ ಅಂಗೀಕರಿಸಲಾಯಿತು. ಪ್ರತಿಪಕ್ಷಗಳು ಚರ್ಚೆಗೆ ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿದ್ದರು ಮತ್ತು ಗದ್ದಲವನ್ನು ಎಬ್ಬಿಸಿದರು.

ಕೃಷಿ ಕಾನೂನುಗಳ ರದ್ದತಿ ಮಸೂದೆ, 2021 ಅನ್ನು ಇಂದು ಮಧ್ಯಾಹ್ನ 2 ಗಂಟೆಗೆ ರಾಜ್ಯಸಭೆಯಲ್ಲಿ ಮಂಡಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಕೃಷಿ ಕಾನೂನು  ರದ್ದತಿ ಮಸೂದೆ, 2021 ಲೋಕಸಭೆಯಿಂದ ಅಂಗೀಕರಿಸಲ್ಪಟ್ಟಿದ್ದು ಇದು ರೈತ ಚಳುವಳಿಯಲ್ಲಿ ಪ್ರಾಣ ಕಳೆದುಕೊಂಡ ಎಲ್ಲಾ 750 ರೈತರಿಗೆ ಗೌರವವಾಗಿದೆ. ಎಂಎಸ್‌ಪಿ ಸೇರಿದಂತೆ ಇತರೆ ಸಮಸ್ಯೆಗಳು ಬಾಕಿ ಉಳಿದಿರುವುದರಿಂದ ಪ್ರತಿಭಟನೆ ಮುಂದುವರಿಯಲಿದೆ ಎಂದು  ಸಂಯುಕ್ತ ಕಿಸಾನ್‌ ಮೋರ್ಚಾ ತಿಳಿಸಿದೆ.

ಸದನದಲ್ಲಿ ಮಸೂದೆಯನ್ನು ಚರ್ಚಿಸಲು ಕಾಂಗ್ರೆಸ್ ಒತ್ತಾಯಿಸಿದವು. ಈ ಸಂದರ್ಭದಲ್ಲಿ ಗದ್ದಲ ನಿರ್ಮಾಣವಾದ ಕಾರಣದಿಂದಾಗಿ ಲೋಕಸಭೆ ಕಲಾಪವನ್ನು ಮಧ್ಯಾಹ್ನ 2 ಗಂಟೆವರೆಗೆ ಮುಂದೂಡಲಾಗಿದೆ.

ಸಂಸತ್ತಿನ ಅಧಿವೇಶನ ಆರಂಭಕ್ಕೂ ಮುನ್ನ ಕೃಷಿ ಕಾನೂನುಗಳ ರದ್ದತಿ ಮಸೂದೆಯನ್ನು ಚರ್ಚಿಸಲು ಒತ್ತಾಯಿಸಿ ತೃಣಮೂಲ ಕಾಂಗ್ರೆಸ್ ಸಂಸದರು ಮಹಾತ್ಮ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಿದರು.

Donate Janashakthi Media

Leave a Reply

Your email address will not be published. Required fields are marked *