ಬಿಜೆಪಿ, ಎನ್‌ಸಿಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

ಬಸವಕಲ್ಯಾಣ: ಬಿಜೆಪಿ ಅಭ್ಯರ್ಥಿ ಶರಣು ಸಲಗರ ಅವರೂ ಪಕ್ಷದ ಮುಖಂಡ ರೊಂದಿಗೆ ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಸಚಿವ ಪ್ರಭು ಚವಾಣ್‌ ಮತ್ತು ಸಂಸದ ಭಗವಂತ ಖೂಬಾ ಜೊತೆಯಾಗಿದ್ದರು.

ನಾಮಪತ್ರ ಸಲ್ಲಿಕೆಗೂ ಮೊದಲು ರೋಡ್‌‌ಶ ೋನಡೆಸಿದರು. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್, ವಸತಿ ಸಚಿವ ವಿ.ಸೋಮಣ್ಣ, ಸಂಸದ ಭಗವಂತ ಖೂಬಾ ಸೇರಿದಂತೆ ಬಿಜೆಪಿ ಪ್ರಮುಖರು ಭಾಗವಹಿಸಿದ್ದರು.

ಇದನ್ನು ಓದಿ : ಉಪಚುನಾವಣೆ – ಲೆಕ್ಕಾಚಾರ ಹೇಗಿದೆ? ‘ಸಿಡಿ’ಯುತ್ತಾ ಅಸ್ತ್ರ, ಜಾತಿ, ಹಣದ್ದೆ ಕಾರ್ಬಾರು

ಬಸವಕಲ್ಯಾಣದ ಶಾಂತಿನಿಕೇತನ ಸಂಸ್ಥೆಯ ಮೈದಾನದಲ್ಲಿ ಬಹಿರಂಗ ಸಮಾವೇಶದಲ್ಲಿ ಬಿಜೆಪಿ ಪ್ರಮುಖ ಮಾತನಾಡಿದರು.

ಎನ್‌ಸಿಪಿಯಿಂದ ಎಂ.ಜಿ.ಮುಳೆ ನಾಮಪತ್ರ ಸಲ್ಲಿಕೆ

ಮಾಜಿ ಶಾಸಕ ಎಂ.ಜಿ.ಮುಳೆ ಅವರು ಜೆಡಿಎಸ್‌ ತೊರೆದು ನೆನ್ನೆ ರಾಷ್ಟ್ರೀಯವಾದಿ ಕಾಂಗ್ರೆಸ್‌ ಪಕ್ಷಕ್ಕೆ (ಎನ್‌ಸಿಪಿ) ಸೇರ್ಪಡೆಯಾಗಿ ಇಂದು ತಮ್ಮ ಬೆಂಬಲಿಗರ ಸಭೆ ನಡೆಸಿ, ಬಳಿಕ ನಾಮಪತ್ರ ಸಲ್ಲಿಸಿದರು.

ಜೆಡಿಎಸ್ ಪಕ್ಷದಲ್ಲಿದ್ದ ಎಂ.ಜಿ ಮುಳೆ ಆ ಪಕ್ಷದ ಟಿಕೆಟ್ ಸಿಗದ ಕಾರಣ ರಾಜೀನಾಮೆ ನೀಡಿ ಎನ್‌ಸಿಪಿ ಸೇರಿ ಎನ್‌ಸಿಪಿಯಿಂದ ಉಪಚುನಾವಣಾ ಅಭ್ಯರ್ಥಿಯಾಗಿದ್ದಾರೆ.

ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಕೆ

ಹಡಪದ ಸಮಾಜದ ಕಲಬುರ್ಗಿ ವಿಭಾಗೀಯ ಘಟಕದ ಅಧ್ಯಕ್ಷ ಈರಣ್ಣ ಹಡಪದ ತಂಗಡಿ ಅನ್ನದಾನಿ ಅಪ್ಪಣ್ಣ ಸ್ವಾಮೀಜಿ ಅವರ ನೇತೃತ್ವದಲ್ಲಿ ಮುಖ್ಯ ರಸ್ತೆಯಲ್ಲಿ ಬೆಳಿಗ್ಗೆ 10ಕ್ಕೆ ಮೆರವಣಿಗೆ ಆಯೋಜಿಸಿ ನಾಮಪತ್ರ ಸಲ್ಲಿಸಿದ್ದಾರೆ. ತಾಲ್ಲೂಕಿನ ರಾಜೋಳಾದ ಯುವಕ ಅಲ್ತಾಫ್ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *