ನವದೆಹಲಿ: ಕೋವಿಡ್ ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕೆ ಪರಿಣಾಮಕಾರಿಯಾದ ಕ್ರಮಗಳನ್ನು ಕೈಗೊಂಡಿರುವ ದೆಹಲಿ ಸರಕಾರವು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಎದುರಾಗಿರುವ ಬಗ್ಗೆ ಪ್ರಧಾನಿ ಗಮನ ಸೆಳೆದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್.
ಇಂದು ಪ್ರಧಾನಿ ನರೇಂದ್ರ ಮೋದಿ ಕರೆದಿದ್ದ ವಿಡಿಯೋ ಸಂವಾದದ ಸಭೆಯಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಾತನಾಡಿ ಆಕ್ಸಿಜನ್ ಟ್ಯಾಂಕರ್‌ಗಳನ್ನು ಬಿಜೆಪಿ ಆಡಳಿತವಿರುವ ರಾಜ್ಯಗಳು ತಡೆಯುತ್ತಿರುವ ಬಗ್ಗೆ ವಿಷಯ ಪ್ರಸ್ತಾಪಿಸಿದರು.
ಇದನ್ನು ಓದಿ: ಮಹಾರಾಷ್ಟ್ರದ ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; ಐಸಿಯುನಲ್ಲಿದ್ದ 13 ರೋಗಿಗಳು ಸಾವು
ಈ ಬಗ್ಗೆ ರಾಜಕೀಯ ಆರೋಪ–ಪ್ರತ್ಯಾರೋಪಕ್ಕೆ ಸಭೆ ಎದುರಾಯಿತು. ದೆಹಲಿಯಲ್ಲಿ ಆಕ್ಸಿಜನ್ ಪ್ಲಾಂಟ್ ಇಲ್ಲವೆಂಬ ಕಾರಣಕ್ಕೆ ದೆಹಲಿಯ ಎರಡು ಕೋಟಿ ಜನ ಆಮ್ಲಜನಕ ಪಡೆಯಬಾರದೇ? ರಾಷ್ಟ್ರದ 130 ಕೋಟಿ ಜನರಿಗೆ ರಾಷ್ಟ್ರದ ಸಂಪನ್ಮೂಲಗಳ ಮೇಲೆ ಸಮಾನವಾದ ಹಕ್ಕು ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಕೇಜ್ರಿವಾಲ್ ಅವರು ‘ದೆಹಲಿ ಸಿಎಂ ಆಗಿರುವುದು ಅವಮಾನ’ ಎಂದು ಬಿಜೆಪಿ ಟೀಕಿಸಿದೆ ಮತ್ತು “ಅವರು ಇಷ್ಟು ಕೆಳಮಟ್ಟಕ್ಕೆ ಇಳಿಯಬಾರದಿತ್ತು” ಎಂದು ಹೇಳಿದೆ.
ಇದನ್ನು ಓದಿ: ವೀಕೆಂಡ್ ಕರ್ಫ್ಯೂನಲ್ಲಿ ಏನಿರುತ್ತೆ? ಏನಿರಲ್ಲ?
ಪ್ರಧಾನಿಯೊಂದಿಗಿನ ಮಾತುಕತೆ ಮುಗಿದ ಕೂಡಲೇ ಟಿವಿಗಳಲ್ಲಿ ವಿಡಿಯೊ ಪ್ರಸಾರವಾಯಿತು. ಕೈಮುಗಿದು ಪ್ರಧಾನಿ ಮೋದಿಗೆ ಮನವಿ ಮಾಡಿದ ಅರವಿಂದ್ ಕೇಜ್ರಿವಾಲ್, ಆಕ್ಸಿಜನ್ ಸಿಗದೆ ದೆಹಲಿಯ ಜನ ತೀವ್ರ ನೋವಿನಲ್ಲಿದ್ದಾರೆ. ಆಕ್ಸಿಜನ್ ಟ್ಯಾಂಕರ್‌ಗಳ ಸರಾಗ ಸಂಚಾರಕ್ಕೆ ಅನುವುಮಾಡಿಕೊಡಲು ಮುಖ್ಯಮಂತ್ರಿಗಳಿಗೆ ನಿರ್ದೇಶನ ನೀಡುವಂತೆ ಕೋರಿದರು.
ಬಿಜೆಪಿ ಆಡಳಿತಲ್ಲಿರುವ ಉತ್ತರ ಪ್ರದೇಶ ಮತ್ತು ಹರಿಯಾಣ ರಾಜ್ಯಗಳು ದೆಹಲಿಗೆ ಆಮ್ಲಜನಕ ಪೂರೈಕೆಯಾಗದಂತೆ ನಿರ್ಬಂಧ ಹೇರಲಾಗುತ್ತಿದೆ ಎಂದು ಈ ಹಿಂದೆಯೂ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಹೇಳಿದ್ದರು. ದೆಹಲಿಗೆ ಆಮ್ಲಜನಕ ಪೂರೈಸಲು ಕೇಂದ್ರವು ಅರೆಸೈನಿಕ ಪಡೆಗಳನ್ನು ನಿಯೋಜಿಸಬೇಕು ಎಂದು ಹೇಳಿದ್ದರು.
ದೇಶದ ಎಲ್ಲಾ ಆಮ್ಲಜನಕ ಘಟಕಗಳನ್ನು ಕೇಂದ್ರ ಸರ್ಕಾರವು ಸೇನೆ ಬಳಸಿ ಸ್ವಾಧೀನಪಡಿಸಿಕೊಳ್ಳಬೇಕು ಮತ್ತು ಪ್ರತಿ ಟ್ರಕ್‌ನಲ್ಲೂ ಸೇನೆಯ ಬೆಂಗಾವಲು ವಾಹನಗಳಿರಬೇಕು ಎಂದು ಸಭೆಯಲ್ಲಿ ಕೇಜ್ರಿವಾಲ್ ಒತ್ತಾಯಿಸಿದರು.