ಬಸವಕಲ್ಯಾಣ : ಬಿಜೆಪಿಯಲ್ಲಿ ಬಂಡಾಯದ ಬಿಸಿ ಮಲ್ಲಿಕಾರ್ಜುನ ಸಿದ್ರಾಮಪ್ಪ ಖೂಬಾ ನಾಮಪತ್ರ ಸಲ್ಲಿಕೆ

ಬೀದರ್‌: ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಉಪಚುನಾವಣೆ ಟಿಕೆಟ್ ವಿಚಾರದಲ್ಲಿ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಈ ಬಗ್ಗೆ ಸ್ವತಃ ಚುನಾವಣಾ ಉಸ್ತುವಾರಿ ಹಾಗೂ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಒಪ್ಪಿಕೊಂಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸವದಿ, ಅದನ್ನು ಮುಂದಿನ ದಿನಗಳಲ್ಲಿ ಸರಿಪಡಿಸಲಾಗುವುದು ಎಂದ ಅವರು ಬಸವಕಲ್ಯಾಣ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಅವರಿಗೆ ಟಿಕೆಟ್‌ ನೀಡಿದ್ದಕ್ಕೆ ಪಕ್ಷದಲ್ಲಿ ಸ್ವಲ್ಪ ಮಟ್ಟಿಗೆ ಅಸಮಾಧಾನ ಮೂಡಿದೆ. ಕೆಲವು ಅಕಾಂಕ್ಷಿಗಳು ಹಾಗೂ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದರು.

ಇದನ್ನು ಓದಿ : ಕೇಂದ್ರ ಸರಕಾರದಿಂದ ಅತಿಕ್ರಮಣ ಎಂದ ಸಚಿವ ಮಾಧುಸ್ವಾಮಿ, ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾರಾಯಣರಾವ್ ಅಕಾಲಿಕ ಮರಣದಿಂದ ಉಪ ಚುನಾವಣೆ ಎದುರಾಗಿದೆ. ಆದರೆ ಬಿಜೆಪಿ ಅಭ್ಯರ್ಥಿಯನ್ನು ಬದಲಾವಣೆ ಮಾಡಿದ್ದು, ಶರಣು ಸಲಗಾರ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಇದರಿಂದಾಗಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಲ್ಲಿಕಾರ್ಜುನ ಸಿದ್ರಾಮಪ್ಪ ಖೂಬಾ ಅಸಮಾಧಾನಗೊಂಡಿದ್ದಾರೆ.

2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ ಮಲ್ಲಿಕಾರ್ಜುನ ಸಿದ್ರಾಮಪ್ಪ ಖೂಬಾ 44,153 ಮತ ಪಡೆದಿದ್ದರು. ಕಾಂಗ್ರೆಸ್‌ನ ಬಿ. ನಾರಾಯಣರಾವ್ ವಿರುದ್ಧ ಸೋಲು ಕಂಡಿದ್ದರು.

ಇದನ್ನು ಓದಿ : ಉಪಚುನಾವಣೆ – ಲೆಕ್ಕಾಚಾರ ಹೇಗಿದೆ? ‘ಸಿಡಿ’ಯುತ್ತಾ ಅಸ್ತ್ರ, ಜಾತಿ, ಹಣದ್ದೆ ಕಾರ್ಬಾರು

ವಸತಿ ಸಚಿವ ವಿ. ಸೋಮಣ್ಣ ಮಲ್ಲಿಕಾರ್ಜುನ ಸಿದ್ರಾಮಪ್ಪ ಖೂಬಾ ನಿವಾಸಕ್ಕೆ ತೆರಳಿ ಅವರ ಜೊತೆ ಮಾತುಕತೆ ನಡೆಸಿದರು. ಆದರೆ ಸಂಧಾನ ಮುರಿದುಬಿದ್ದಿದ್ದು, ಬಿಜೆಪಿ ವಿರುದ್ಧ ಬಂಡಾಯ ಎದ್ದಿರುವ ಮಲ್ಲಿಕಾರ್ಜುನ ಸಿದ್ರಾಮಪ್ಪ ಖೂಬಾ. ಪಕ್ಷೇತರ ಅಭ್ಯರ್ಥಿಯಾಗಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮೊದಲು ಬಸವಕಲ್ಯಾಣ ಸ್ವಾಭಿಮಾನಿ ಬಳಗದ ಸಭೆ ನಡೆಸಿದ್ದರು. ಇದು ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ.

ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ರಾಮಪ್ಪ ಖೂಬಾ ‘ಟಿಕೆಟ್ ವಿಷಯದಲ್ಲಿ ಬಿಜೆಪಿ ಹೈಕಮಾಂಡ್ ನಲ್ಲಿ ಲೋಪವಾಗಿದೆ. ಅಲ್ಲಿ ಸೂಟ್ ಕೇಸ್ ಕೆಲಸ ಮಾಡಿದೆ. ಜೆಡಿಎಸ್ ನಿಂದ ಎರಡು ಬಾರಿ ಶಾಸಕರಾಗಿ ಅಭಿವೃದ್ಧಿ ಕೆಲಸ ಮಾಡಿದ್ದೆ. ಆದರೆ, 2018ರಲ್ಲಿ ಯಡಿಯೂರಪ್ಪ ಅವರ ಕೈ ಬಲಪಡಿಸಬೇಕೆಂಬ ಉದ್ದೇಶದಿಂದ ಬಿಜೆಪಿಗೆ ಸೇರಿದೆ. ಆದರೆ, ಉಪ ಚುನಾವಣೆಯಲ್ಲಿ ಟಿಕೆಟ್ ನೀಡದೆ ಬಿಎಸ್ ವೈ ಮತ್ತು ಬಿಜೆಪಿ ನನಗೆ ದ್ರೋಹ ಮಾಡಿದೆ. ಆದರೂ ಬಸವಕಲ್ಯಾಣದ ಸ್ವಾಭಿಮಾನಿ ಜನರು ನನ್ನನ್ನು ಕೈಹಿಡಿಯಲಿದ್ದಾರೆʼʼ ಎಂದು ಹೇಳಿದರು.

ಉಪಚುನಾವಣೆಗೆ ನಾಮಪತ್ರವನ್ನು ಸಲ್ಲಿಕೆ ಮಾಡಲು ಕೊನೆ ದಿನ. ಏಪ್ರಿಲ್ 17ರಂದು ಉಪಚುನಾವಣೆ ನಡೆಯಲಿದ್ದು, ಮೇ 2ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

Donate Janashakthi Media

Leave a Reply

Your email address will not be published. Required fields are marked *