ಚಿತ್ತಾಪುರ: ಬಿಜೆಪಿ ವಿಧಾನಸಭಾ ಅಭ್ಯರ್ಥಿ ಮಣಿಕಂಠ ರಾಠೋಡ್‌ ಅರೆಸ್ಟ್‌

ರಾಜಕೀಯ ದ್ವೇಷದ ಕಾರಣಕ್ಕಾಗಿ ಕಿರುಕುಳ ನೀಡಲಾಗಿದೆ ಎಂದು ಮಣಿಕಂಠ ರಾಠೋಡ್‌ ಹೇಳಿದ್ದಾರೆ

ಕಲಬುರಗಿ: ವಿಧಾನಸಭಾ ಚುನಾವಣೆಯಲ್ಲಿ ಚಿತ್ರಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ, ರೌಡಿ ಶೀಟರ್‌ ಮಣಿಕಂಠ ರಾಠೋಡ್‌ನನ್ನು ಶುಕ್ರವಾರ ತಡರಾತ್ರಿ ಪೊಲೀಸರು ಬಂಧಿಸಿರುವುದು ವರದಿಯಾಗಿದೆ. ಆದರೆ ಅವರನ್ನು ರಾತ್ರಿಯೇ ಸ್ವೇಶನ್‌ ಜಾಮೀನು ಮೇಲೆ ಬಿಡುಗಡೆ ಮಾಡಲಾಗಿದೆ ಎನ್ನಲಾಗಿದೆ.

ವಿಧಾನಸಭಾ ಚುನಾವಣೆ ಸಮಯದಲ್ಲಿ ಮಲ್ಲಿಕಾರ್ಜುನ ಖರ್ಗೆ ಕುಟುಂಬವನ್ನು ಹತ್ಯೆ ಮಾಡುವುದಾಗಿ  ರೌಡಿ ಶೀಟರ್‌ ಮಣಿಕಂಠ ಹೇಳಿದ್ದ ಆಡಿಯೊ ತೀವ್ರ ಸಂಚಲನ ಮೂಡಿಸಿತ್ತು. ಅಷ್ಟೆ ಅಲ್ಲದೆ, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಸೇರಿದಂತೆ ಅನೇಕ ಕಡೆಗಳಲ್ಲಿ ಕೂಲೆಯತ್ನ, ಕೂಲೆ ಬೆದರಿಕೆ, ಅಪಹರಣ, ಹಲ್ಲೆ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಕ್ರಿಮಿನಲ್‌ ಪ್ರಕರಣಗಳಲ್ಲಿ ಮಣಿಕ೦ಠ ರಾಠೋಡ್‌ ಹೆಸರು ಇದೆ.

ಖರ್ಗೆ ಕುಟುಂಬಕ್ಕೆ ಜೀವಬೇದರಿಕೆ ಹಾಕಿರುವ ಆಡಿಯೋ ಪ್ರಕರಣದ ತನಿಖೆ ಚುರುಕುಗೊಳಿಸಿದ್ದ ಚಿತ್ತಾಪುರ ಪೊಲೀಸರು ಮಣಿಕಂಠ ರಾಠೋಡನನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮಣಿಕಂಠ ರಾಠೋಡ ವಿರುದ್ದ ಎಫ್‌ಐಆರ್‌ ದಾಖಲು

ತನ್ನ ಬಂಧನದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಣಿಕಂಠ ರಾಠೋಡ್, ”ರಾಜಕೀಯ ದ್ವೇಷದ ಕಾರಣಕ್ಕಾಗಿ ಕಿರುಕುಳ ನೀಡಲಾಗಿದೆ. ಇದರ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಪೊಲೀಸ್ ಅಧಿಕಾರಿಗಳು ಶಾಮೀಲಾಗಿದ್ದಾರೆ, ಇವರೆಲ್ಲರ ವಿರುದ್ಧ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದೇನೆ” ಎಂದು ಹೇಳಿದ್ದಾಗಿ ವರದಿಯಾಗಿದೆ.

ಅಕ್ಕಿ ಅಕ್ರಮ ಸಾಗಾಣಿಕೆಯ ಆರೋಪ ಸೇರಿದಂದತೆ ಯಾದಗಿರಿ, ವಿಜಯಪುರ, ಕಲಬುರಗಿ ಮೂರು ಜಿಲ್ಲೆಗಳ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳನ್ನು ಎದುರಿಸುತ್ತಿರುವ ಮಣಿಕಂಠ ರಾಠೋಡ ಒಂದು ವರ್ಷಗಳ ಕಾಲ ಗಡಿಪಾರು ಮಾಡಿ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ವೈ. ಎಸ್. ರವಿಕುಮಾರ ಆದೇಶ ಹೊರಡಿಸಿದ್ದರು. ಆದರೆ ಹೈಕೋರ್ಟ್‍ನಲ್ಲಿ ಮಣಿಕಂಠ ಗಡಿಪಾರು ಆದೇಶಕ್ಕೆ ತಡೆಯಾಜ್ಞೆ ಪಡೆದಿದ್ದರು.

ಅಂಗನವಾಡಿ ಮಕ್ಕಳಿಗೆ ಪೂರೈಸಬೇಕಿದ್ದ ಹಾಲಿನ ಪೌಡರ್‌ನ ಅಕ್ರಮ ಸಾಗಾಟ ಮತ್ತು ಖರೀದಿ ಪ್ರಕರಣದಲ್ಲಿ ಮಣಿಕಂಠ ರಾಥೋಡ್ ಸೇರಿ‌ದಂತೆ ಮೂವರಿಗೆ ಯಾದಗಿರಿ ಜಿಲ್ಲಾ ನ್ಯಾಯಾಲಯ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿತ್ತು. ನಂದಿನಿ ಹಾಲಿನ ಪೌಡರ್‌ 500 ಗ್ರಾಂ.ನ ಒಟ್ಟು 340 ಪ್ಯಾಕೆಟ್​ ಅಕ್ರಮ ಸಾಗಾಟದ ಆರೋಪದಡಿ 2015 ರಲ್ಲಿ ಯಾದಗಿರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿ: ಹಾಲಿನ ಪೌಡರ್ ಅಕ್ರಮ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸೇರಿ ಮೂವರಿಗೆ ಜೈಲು

ಈ ನಡುವೆ ವಿಧಾನಸಭೆ ಚುನಾವಣೆಯಲ್ಲಿ ಚಿತ್ತಾಪುರ ಕ್ಷೇತ್ರದಲ್ಲಿ ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಪರ್ಧಿಸಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಜೀವಬೇದರಿಕೆ ಹಾಕಿರುವ ಆಡಿಯೋ ವೈರಲ್ ಆಗಿತ್ತು. ಈ ವಿಡಿಯೊವನ್ನು ಕಾಂಗ್ರೆಸ್ ಉಸ್ತುವಾರಿ ರಣದೀಪಸಿಂಗ್ ಸುರ್ಜೆವಾಲಾ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡು ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದರು. ಇದರ ನಂತರ ಚುನಾವಣಾಧಿಕಾರಿಗಳ ಸೂಚನೆಯಂತೆ ಚಿತ್ತಾಪುರದ ಫ್ಲೈಯಿಂಗ್ ಸ್ಕ್ವಾಡ್ ತಂಡದ ಅಧಿಕಾರಿ ಕರಣಕುಮಾರ ಅವರು ಪೊಲೀಸರಿಗೆ ದೂರು ನೀಡಿದ್ದು ಎಫ್‌ಐಆರ್ ದಾಖಲಾಗಿತ್ತು.

Donate Janashakthi Media

Leave a Reply

Your email address will not be published. Required fields are marked *