ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ಬಿಜೆಪಿ ನಗರ ಘಟಕದ ಮುಖಂಡನನ್ನು ಎನ್.ಐ.ಎ. ವಿಚಾರಣೆಗೆ ಒಳಪಡಿಸಿದೆ ಎನ್ನಲಾಗಿದೆ.
ಕೆಲವು ದಿನಗಳ ಹಿಂದೆ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಎಐ ಕೆಲವು ಮನೆ ಹಾಗೂ ಅಂಗಡಿಗಳಲ್ಲಿ ತಪಾಸಣೆ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿತ್ತು.
ಈ ಹಿಂದೆ ಮೊಬೈಲ್ ಅಂಗಡಿಯ ಇಬ್ಬರು ಯುವಕರನ್ನು ಎಎನ್ಐ ವಿಚಾರಣೆಗೆ ಒಳಪಡಿಸಿದ್ದಾಗ ಅಂಗಡಿಯ ಹುಡುಗರ ಜೊತೆ ಬಿಜೆಪಿ ನಗರ ಘಟಕದ ಮುಖಂಡನಿಗೆ ಸಂಪರ್ಕ ಇದ್ದ ಕಾರಣ ಆತನನ್ನು ವಿಚಾರಣೆಗೆ ಒಳಪಡಿಸಿರಬಹುದು ಎನ್ನಲಾಗಿದೆ. ಶಿವಮೊಗ್ಗ ತೀರ್ಥಹಳ್ಳಿಯ ಬಿಜೆಪಿಯ ನಗರದ ಘಟಕದ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದೆ ಎಂದು ಮಾಹಿತಿಯೊಂದು ಹೊರಬಿದ್ದಿದೆ.
ರಾಮೇಶ್ವರಂ ಕೆಫೆ ಸ್ಫೋಟ ಮತ್ತು ಹಿಂದಿನ ಕೆಲವು ಸ್ಫೋಟ ಪ್ರಕರಣಗಳ ನಡುವೆ ಸಾಮ್ಯತೆ ಇರುವುದರಿಂದ ಹಳೇ ಸ್ಫೋಟ ಪ್ರಕರಣಗಳಲ್ಲಿ ಶಾಮೀಲಾದ ಹಲವರ ಮೇಲೆ ಎನ್ಐ ನಿಗಾ ಇರಿಸಿದೆ. ಈಗಾಗಲೇ ಜೈಲಿನಲ್ಲಿರುವ ಹಲವರನ್ನು ವಿಚಾರಣೆಗೆ ಒಳಪಡಿಸಿದ್ದ ಎನ್ಐಎ, ತಲೆಮರೆಸಿಕೊಂಡಿರುವ ಇನ್ನೂ ಹಲವರ ಮೇಲೆ ಕಣ್ಣಿಟ್ಟಿದೆ. ಶಂಕಿತರಿಗೆ ಪ್ರತ್ಯಕ್ಷ, ಪರೋಕ್ಷವಾಗಿ ನೆರವು ನೀಡಿದವರ ಮೇಲೂ ನಿಗಾ ಇಟ್ಟಿದೆ.