ಬಾಗಲಕೋಟೆ: ಸಂಸದ ಪ್ರಜ್ವಲ್ ರೇವಣ್ಣ ಪೆನ್‍ಡ್ರೈವ್ ಪ್ರಕರಣದಲ್ಲಿ ಎಸ್‍ಐಟಿ ತನಿಖೆಗೆ ಬಿಜೆಪಿ ಸಂಪೂರ್ಣ ಸಹಕಾರ ಕೊಡುತ್ತೇವೆ. ಈಗ ಎಸ್‌ಐಟಿ ಕೆಲಸ ಮಾಡಿ ತೋರಿಸಬೇಕು ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.
ಜಮಖಂಡಿಯಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅಣ್ಣಾಮಲೈ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈಗಾಗಲೇ ಎಸ್‍ಐಟಿ ಏನು ಬೇಕಾದರೂ ಕ್ರಮಕೈಗೊಳ್ಳಲಿ ಎಂದಿದ್ದಾರೆ. ಬಿಜೆಪಿ ಏನಾದರು ಈ ಪ್ರಕರಣವನ್ನು ಮುಚ್ಚಿಹಾಕಲು ಮುಂದಾಗಿಯೇ? ಅಥವಾ ಪ್ರಕರಣದ ತನಿಖೆಗೆ ತಡೆಯೊಡ್ಡಲು ಯತ್ನಿಸಿಲ್ಲ. ಈ ಪ್ರಕರಣದ ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು ಎಂದರು.
ಇದನ್ನೂ ಓದಿ: ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ಚುನಾವಣೆ ಘೋಷಣೆ: ಜೂನ್.3 ರಂದು ಮತದಾನ, ಜೂನ್.6 ರಂದು ಫಲಿತಾಂಶ ಪ್ರಕಟ
ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಕೈವಾಡದ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪದ ವಿಚಾರವಾಗಿ, ಏನನ್ನೂ ಪ್ರತಿಕ್ರಿಯಿಸುವುದಿಲ್ಕ. ಈಗ ತನಿಖೆ ನಡೆಯುತ್ತಿದೆ. ತನಿಖೆಯ ಬಳಿಕ ಎಲ್ಲಾ ವಿಚಾರ ಹೊರಬರಲಿದೆ ಎಂದು ಅಣ್ಣಾಮಲೈ ಹೇಳಿದರು.
ಇದನ್ನೂ ನೋಡಿ: ಜೀವನೋಪಾಯದ ಸಮಸ್ಯೆಗಳಿಗಿಂತ ರಾಮಮಂದಿರದಂತಹ ಭಾವನಾತ್ಮಕ ಸಮಸ್ಯೆಗೆ ಯಾಕಿಷ್ಟು ಪ್ರಾಮುಖ್ಯತೆ – ಎಂ.ಎ. ಬೇಬಿ