ಮುಂಬೈ: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇದ್ದರೂ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸುವ ಬಗ್ಗೆ ಕಾಂಗ್ರೆಸ್ “ಗಂಭೀರವಾಗಿ” ವರ್ತಿಸುತ್ತಿಲ್ಲ ಎಂದು ಮಹಾರಾಷ್ಟ್ರದ ವಂಚಿತ್ ಬಹುಜನ ಅಘಾಡಿ (ವಿಬಿಎ) ನಾಯಕ ಪ್ರಕಾಶ್ ಅಂಬೇಡ್ಕರ್ ಅವರು ಟೀಕಿಸಿದ್ದಾರೆ. ಸೀಟು ಹಂಚಿಕೆ ಕುರಿತು ನಿರ್ಧರಿಸಲು ಕಾಂಗ್ರೆಸ್ ಹೆಚ್ಚು ಸಮಯ ತೆಗೆದುಕೊಂಡರೆ ಅದು ಬಿಜೆಪಿ ಮತ್ತು ನರೇಂದ್ರ ಮೋದಿಗೆ ಸಹಾಯ ಮಾಡುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಇಂಡಿಯಾ
ವಿರೋಧ ಪಕ್ಷದ ಮಿತ್ರಪಕ್ಷಗಳ ನಡುವೆ ಸೀಟು ಹಂಚಿಕೆ ಆರಂಭಿಸುವ ಬದಲು ರಾಹುಲ್ ಗಾಂಧಿ ಅವರ ಭಾರತ್ ನ್ಯಾಯ್ ಯಾತ್ರೆಗೆ ಕಾಂಗ್ರೆಸ್ ತಯಾರಿ ನಡೆಸುತ್ತಿರುವುದು ಆಶ್ಚರ್ಯ ತಂದಿದೆ ಎಂದು ಹೇಳಿರುವ ಪ್ರಕಾಶ್ ಅಂಬೇಡ್ಕರ್ ಅವರು, “2024ರ ಚುನಾವಣೆಯಲ್ಲಿ ಮೈತ್ರಿಯೊಂದಿಗೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಕಾಂಗ್ರೆಸ್ ಗಂಭೀರವಾಗಿದೆಯೇ ಎಂದು ಸ್ಪಷ್ಟಪಡಿಸಬೇಕು” ಎಂದು ಹೇಳಿದ್ದಾರೆ. ಇಂಡಿಯಾ
“ಕೇವಲ ಮೈತ್ರಿ ಬಗ್ಗೆ ಮಾತನಾಡುವುದರಿಂದ ಕೆಲಸ ಆಗುವುದಿಲ್ಲ, ಹೋರಾಟ ಮಾಡಬೇಕೆ ಎಂಬ ನಿಮ್ಮ ಉದ್ದೇಶವನ್ನು ಸ್ಪಷ್ಟಪಡಿಸಬೇಕು” ಎಂದು ಪ್ರಶಾಶ್ ಅಂಬೇಡ್ಕರ್ ಹೇಳಿದ್ದಾರೆ. ಪ್ರಕಾಶ್ ಅಂಬೇಡ್ಕರ್ ಅವರ ವಿಬಿಎ ಇನ್ನೂ ವಿರೋಧ ಪಕ್ಷದ ಒಕ್ಕೂಟ ಇಂಡಿಯಾದಲ್ಲಿ ಸೇರ್ಪಡೆಗೊಂಡಿಲ್ಲ. ಈ ಇಂಡಿಯಾ ಒಕ್ಕೂಟದಲ್ಲಿ ಈ ವರೆಗೆ 26 ಪಕ್ಷಗಳು ಮೈತ್ರಿ ಮಾಡಿಕೊಂಡಿವೆ.
ಇದನ್ನೂ ಓದಿ: ಉಳ್ಳಾಲ | ಕಲ್ಲಡ್ಕ ಭಟ್ ವಿರುದ್ಧ ಪ್ರತಿಭಟಿಸಿದವರ ಮೇಲೆ ಸ್ವಯಂ ಪ್ರೇರಿತ ಎಫ್‌ಐಆರ್ ದಾಖಲಿಸಿದ ಕಾಂಗ್ರೆಸ್ ಸರ್ಕಾರ!
ಎಲ್ಲಾ ವಿರೋಧ ಪಕ್ಷಗಳನ್ನು ಒಟ್ಟಿಗೆ ತಂದದ್ದು ನಿತೀಶ್ ಕುಮಾರ್ ಆಗಿದ್ದು ಆದರೆ ಈಗ ಕಾಂಗ್ರೆಸ್ ಮೇಲುಗೈ ಸಾಧಿಸಿದೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ ಬೇಗ ಮಾತುಕತೆಯನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಮುನ್ನಡೆಸಬೇಕು ಎಂದು ಅವರು ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ಸೀಟು ಹಂಚಿಕೆ ಕಾರ್ಯರೂಪಕ್ಕೆ ಬರದಿದ್ದಲ್ಲಿ ತಾವು ಮತ್ತು ಶಿವಸೇನೆಯ ಉದ್ಧವ್ ಠಾಕ್ರೆ ಅವರು ಯಾವ ಸ್ಥಾನಗಳಲ್ಲಿ ಹೋರಾಡಬೇಕು ಎಂದು ಈಗಾಗಲೇ ನಿರ್ಧರಿಸಿದ್ದೇವೆ ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ. “ಪ್ರಾದೇಶಿಕ ಪಕ್ಷಗಳು ಚುನಾವಣೆಯಲ್ಲಿ ಹೋರಾಡಲು ಗಂಭೀರವಾಗಿವೆ. ಆದರೆ ರಾಷ್ಟ್ರೀಯ ಪಕ್ಷಗಳು ಎಂದು ಕರೆಯಲ್ಪಡುವವರು ಇನ್ನೂ ತಯಾಗಿಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ.
ಯಾವುದಾದರೂ ಪಕ್ಷಗಳಿಗೆ ಅಭ್ಯರ್ಥಿಗಳಿದ್ದಾರೆಯೇ ಅಥವಾ ಇಲ್ಲವೇ ಅಥವಾ ಅವರಿಗೆ ಮತ ಹಂಚಿಕೆ ಇದೆಯೇ ಅಥವಾ ಇಲ್ಲವೇ ಎಂಬುದನ್ನು ಕಣದಲ್ಲಿ ನಿರ್ಧರಿಸಬಹುದು, ಆದರೆ ಅವರು ಅದರ ಬಗ್ಗೆ ಮಾತನಾಡುತ್ತಿಲ್ಲ ಎಂದು ಪ್ರಕಾಶ್ ಅಂಬೇಡ್ಕರ್ ಟೀಕಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಮೈತ್ರಿ ಸರ್ಕಾರದ ಪತನದ ನಂತರವೂ ಪಕ್ಷಗಳು ಸೀಟು ಹಂಚಿಕೆ ಮತ್ತು ಮೈತ್ರಿ ಬಗ್ಗೆ ನಿರ್ಧರಿಸಲು ಸಾಧ್ಯವಾಗದಿರುವುದು ದುಃಖದ ಪರಿಸ್ಥಿತಿ ಎಂದು ಅವರು ಹೇಳಿದ್ದಾರೆ.
ವಿಡಿಯೊ ನೋಡಿ: ಶೋಷಿತರ ಧ್ವನಿಗೆ ಪ್ರತಿಧ್ವನಿಯಾಗಿ ಮೊಳಗಿದ ಸಪ್ದರ್ ಹಾಶ್ಮಿ Janashakthi Media