ಬೆಂಗಳೂರು : ವಿಧಾನಸಭೆ ಚುನಾವಣೆಯು ಹತ್ತಿರವಾಗುತ್ತಿದ್ದು, ಚುನಾವಣಾ ನೀತಿ ಸಂಹಿತೆಯೂ ಜಾರಿಯಲ್ಲಿದ್ದು ಚುನಾವಣಾ ಅಕ್ರಮಗಳಿಗೆ ಆಯೋ ಗವು ಸಾಕಷ್ಟು ಕಣ್ಣಿಟ್ಟಿದ್ದು, ಈ ಸಂಬಂಧ ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ₹ 47.43 ಕೋಟಿ ಮೌಲ್ಯದ ನಗದು, ಮದ್ಯ, ಮತದಾರರಿಗೆ ಆಮಿಷ ಒಡ್ಡಲು ಬಳಸುವ ವಸ್ತುಗಳು, ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ತಿಳಿಸಿದ್ದರು. ಇದೀಗ ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಅವರು ಬಿಜೆಪಿಯ ವಿರುದ್ಧ ಆರೋಪವೊಂದನ್ನು ಮಾಡಿದ್ದಾರೆ.
ಹೌದು, ‘ಬಿಜೆಪಿಯವರು ತಮ್ಮ ಒಬ್ಬೊಬ್ಬ ಅಭ್ಯರ್ಥಿಗೆ ₹ 10 ಕೋಟಿ ಕೊಡುತ್ತಿದ್ದಾರೆ. ಅವರು ಈ ಹಣ ಸಾಗಿಸಲು ಐಟಿ, ಇ.ಡಿ ರಕ್ಷಣೆ ಪಡೆಯುತ್ತಾರೆ’ ಎಂದು ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಇದನ್ನೂ ಓದಿ : ಚುನಾವಣಾ ಅಕ್ರಮ: ₹ 47.43 ಕೋಟಿ ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳ ವಶ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಯವರು ಪೊಲೀಸ್ ವಾಹನದಲ್ಲೇ ಹಣ ಸಾಗಿಸಬಹುದು’ ಎಂದು ಅವರು ಹೇಳಿದರು.’ಕಳೆದ ಚುನಾವಣೆ ವೇಳೆ ಯಾರ ಮೇಲೆ ಐಟಿ, ಇಡಿ ದಾಳಿ ನಡೆದಿದೆ ಎನ್ನುವುದನ್ನು ನೋಡಿದ್ದೇವೆ. ಐಟಿ, ಇ.ಡಿ ದಾಳಿ ಕೇವಲ ಕಾಂಗ್ರೆಸ್, ಜೆಡಿಎಸ್ ನಾಯಕರ ಮೇಲೆ ಮಾತ್ರ ನಡೆಯುತ್ತದೆ’ ಎಂದು ದೂರಿದ ಅವರು, ‘ಬಿಜೆಪಿ ಅಭ್ಯರ್ಥಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದು ಎಲ್ಲೂ ಕಾಣಿಸಲೇ ಇಲ್ಲ’ ಎಂದರು ‘ಐಟಿ, ಇ.ಡಿ ಬಿಜೆಪಿ ಪ್ರೈವೇಟ್ ಡಿಪಾರ್ಟ್‌ಮೆಂಟ್ ಆಗಿದೆ. ಸೋಲುವ ಭೀತಿಯಿಂದ ವಿರೋಧ ಪಕ್ಷಗಳ ಅಭ್ಯರ್ಥಿಗಳ ಮೇಲೆ ದಾಳಿ ನಡೆಸಿ ಕೆಟ್ಟ ಹೆಸರು ಬರುವಂತೆ ಬಿಜೆಪಿಯವರು ಮಾಡುತ್ತಾರೆ. ಆ ಮೂಲಕ, ಅಭ್ಯರ್ಥಿಗಳನ್ನು ಮಾನಸಿಕವಾಗಿ ಕುಗ್ಗು ವಂತೆ ಮಾಡುತ್ತಾರೆ’ ಎಂದೂ ಹೇಳಿದರು.