ಸುಳ್ಳು ಹೇಳಿದ ಬಿಜೆಪಿ ನಾಯಕರು; ಅದನ್ನು ಹರಡಿದ ಪ್ರಜಾವಾಣಿ ಸಹಿತ ಕನ್ನಡದ ಮಾಧ್ಯಮಗಳು!

ಬೆಂಗಳೂರು: ಕರ್ನಾಟಕದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮೂರು ಮತ್ತು ಬಿಜೆಪಿ ಒಂದು ಸ್ಥಾನಗಳಲ್ಲಿ ಗೆದ್ದುಕೊಂಡಿದೆ. ಈ ನಡುವೆ ರಾಜ್ಯಸಭೆಗೆ ಆಯ್ಕೆಯಾದ ಕಾಂಗ್ರೆಸ್ ಮುಂಖಡ ನಾಸಿರ್ ಹುಸೇನ್ ಅವರ ಗೆಲುವಿನ ಸಂಭ್ರಮಾಚರಣೆ ವೇಳೆ ಬೆಂಬಲಿಗರು ‘ನಾಸಿರ್ ಸಾಬ್ ಜಿಂದಾಬಾದ್’ ಎಂದು ಕೂಗಿದ್ದನ್ನು, ಬಿಜೆಪಿ ನಾಯಕರು ಮತ್ತು ಕನ್ನಡದ ಹಲವು ಮಾಧ್ಯಮಗಳು ತಪ್ಪಾಗಿ ವರದಿ ಮಾಡಿ, ”ನಾಸಿರ್ ಹುಸೇನ್ ಅವರ ಬೆಂಬಲಿಗರು ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗಿದ್ದಾರೆ” ಎಂದು ಸುಳ್ಳು ಹರಡುತ್ತಿದ್ದಾರೆ.

ಈ ಸುಳ್ಳನ್ನೆ ಸತ್ಯ ಎಂದು ಬಿಜೆಪಿ ಬಿಂಬಿಸಲು ಪ್ರಯತ್ನಿಸಿದ್ದು, ನೂತನ ಸಂಸದ ನಾಸಿರ್ ಹುಸೇನ್ ಮತ್ತು ಅವರ ಬೆಂಬಲಿಗರ ವಿರುದ್ಧ ಬಿಜೆಪಿ ವಿಧಾನಸೌಧ ಪೊಲೀಸರಿಗೆ ದೂರು ನೀಡಿದ್ದು, ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಜೊತೆಗೆ, ಬಿಜೆಪಿ ಇಂದು ಉಭಯ ಸದನಗಳಲ್ಲಿ ‘ಪಾಕ್ ಘೋಷಣೆ’ ವಿಷಯವನ್ನು ಕೈಗೆತ್ತಿಕೊಳ್ಳಲಿದೆ ಎಂದು ವರದಿಯಾಗಿದೆ. ಅದಾಗ್ಯೂ, ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ ಎಂದು ಹೇಳಲಾಗಿರುವ ವಿಡಿಯೊದಲ್ಲಿ ಸ್ಪಷ್ಟವಾಗಿ ‘ನಾಸಿರ್ ಸಾಬ್ ಜಿಂದಾಬಾದ್’ ಎಂದು ಕೂಗಿರುವುದು ಕೇಳಿಸುತ್ತದೆ. ಅದಾಗ್ಯೂ, ಬಿಜೆಪಿ ಮತ್ತು ಕನ್ನಡದ ಮಾಧ್ಯಮಗಳು ಸುಳ್ಳು ಹರಡುತ್ತಿದೆ.

ಇದನ್ನೂ ಓದಿ: ಅಂತಿಮ ವರದಿ ಬಂದ ನಂತರ ಹಳೆ ಪಿಂಚಣಿ ವ್ಯವಸ್ಥೆಯ ಜಾರಿಗೆ ತೀರ್ಮಾನ; ಸಿದ್ದರಾಮಯ್ಯ

ಈ ಬಗ್ಗೆ ಹಲವಾರು ಮಾಧ್ಯಮಗಳು ಫ್ಯಾಕ್ಟ್‌ಚೆಕ್ ಮಾಡಿದ್ದು, ನಾಸಿರ್ ಹುಸೇನ್ ಅವರ ಬೆಂಬಲಿಗರು ಕೂಗಿದ್ದು, “ನಾಸಿರ್ ಸಾಬ್ ಜಿಂದಾಬಾದ್” ಎಂದು ಹೇಳಿದ್ದಾರೆ ಎಂದು ನಿರೂಪಿಸಿದ್ದಾರೆ.

ಅದಾಗ್ಯೂ, ಕನ್ನಡ ಖ್ಯಾತ ಪತ್ರಿಕೆಯಾದ ಪ್ರಜಾವಾಣಿ ಸಹಿತ ಹಲವಾರು ಮಾಧ್ಯಮಗಳು ಬಿಜೆಪಿಯ ನಿರೂಪಣೆಯನ್ನಷ್ಟೆ ವರದಿ ಮಾಡಿ ಸುಳ್ಳು ಹರಡಲು ನೆರವಾಗಿದೆ.

ಕರ್ನಾಟಕದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮಂಗಳವಾರ ವಿಧಾನಸೌದದಲ್ಲಿ ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಮೂರು ಸ್ಥಾನಗಳನ್ನು ಮತ್ತು ಬಿಜೆಪಿ ಒಂದು ಸ್ಥಾನವನ್ನು ಪಡೆದುಕೊಂಡಿದೆ. ಮಾಜಿ ಕೇಂದ್ರ ಸಚಿವ ಮತ್ತು ಎಐಸಿಸಿ ಖಜಾಂಚಿ ಅಜಯ್ ಮಾಕನ್, ಸೈಯದ್ ನಾಸೀರ್ ಹುಸೇನ್ ಮತ್ತು ಕಾಂಗ್ರೆಸ್‌ನ ಜಿಸಿ ಚಂದ್ರಶೇಖರ್, ಬಿಜೆಪಿಯ ನಾರಾಯಣಸಾ ಕೆ ಭಾಂಡಗೆ ಅವರು ಆರು ವರ್ಷಗಳ ಅವಧಿಗೆ ರಾಜ್ಯಸಭಾ ಸಂಸದರಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಗಿದೆ. ಮತದಾನ ಮತ್ತು ಮತ ಎಣಿಕೆ ನಡೆಯಿತು. ಈ ನಡುವೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಮತ್ತೊಬ್ಬ ಅಭ್ಯರ್ಥಿ ಜೆಡಿಎಸ್‌ನ ಡಿ ಕುಪೇಂದ್ರ ರೆಡ್ಡಿ ಅವರು 36 ಮತಗಳನ್ನು ಪಡೆದು ಸೋತಿದ್ದಾರೆ.

ಇದನ್ನೂ ಓದಿ: ಈ ಹಿಂದೆ ಗುಹೆಗೆ, ಈಗ ನೀರಿಗೆ, ಮುಂದಿನ ಬಾರಿ ಚಂದ್ರನಲ್ಲಿಗೆ – ಪ್ರಕಾಶ ರೈ

224 ಚುನಾಯಿತ ಶಾಸಕರ ಪೈಕಿ 222 ಮಂದಿ ತಮ್ಮ ಹಕ್ಕು ಚಲಾಯಿಸಿದ್ದು, ಎಲ್ಲಾ ಮತಗಳು ಮಾನ್ಯವಾಗಿವೆ. ಯಲ್ಲಾಪುರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಅವರು ಗೈರು ಹಾಜರಾಗಿದ್ದರೆ, ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯ್ಕ್ ಭಾನುವಾರ ನಿಧನರಾದರು. ಇಬ್ಬರು ಬಂಡಾಯ ಬಿಜೆಪಿ ಶಾಸಕರು ಪಕ್ಷದ ವಿಪ್ ಅನ್ನು ಧಿಕ್ಕರಿಸಿ ಕಾಂಗ್ರೆಸ್‌ ಪರವಾಗಿ ಮತ ನೀಡಲಿದ್ದಾರೆ ಎನ್ನಲಾಗಿತ್ತು. ಅದರಲ್ಲೂ, ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್‌ ಅವರು ಅಡ್ಡ ಮತದಾನ ಮಾಡಿದ್ದಾರೆ ಎಂದು ವರದಿಯಾಗಿದೆ. ಅದಾಗ್ಯೂ ಈ ಮತಗಳು ಫಲಿತಾಂಶಗಳ ಮೇಲೆ ಯಾವುದೆ ಪರಿಣಾಮ ಬೀರಿಲ್ಲ.

ಎಸ್‌ಟಿ ಸೋಮಶೇಖರ್ ಅವರ ಮತ ಬಿಜೆಪಿ-ಜೆಡಿಎಸ್ ಮೈತ್ರಿ ವಿರುದ್ಧ: ಡಿಕೆ ಶಿವಕುಮಾರ್

ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಅಡ್ಡ ಮತದಾನ ಮಾಡಿರುವ ಬಿಜೆಪಿ ಶಾಕಸ ಎಸ್‌ಟಿ ಸೋಮಶೇಖರ್ ಅವರು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪರವಾಗಿ ಕಳೆದ ಚುನಾವಣೆಯಲ್ಲಿ ಮತ ಚಲಾಯಿಸಲಾಗಿತ್ತು, ಆದರೆ ಅವರು ಅಭಿವೃದ್ಧಿಗೆ ಅನುದಾನ ನೀಡಲಿಲ್ಲ ಅಥವಾ ಅವರನ್ನು ಭೇಟಿ ಮಾಡಲು ಅಪಾಯಿಂಟ್‌ಮೆಂಟ್ ನೀಡಲಿಲ್ಲ ಎಂದು ಆರೋಪಿಸಿದ್ದಾರೆ. “ನಾನು ನನ್ನ ಆತ್ಮಸಾಕ್ಷಿಯಂತೆ ನನ್ನ ಫ್ರಾಂಚೈಸಿಯನ್ನು ಚಲಾಯಿಸಿದ್ದೇನೆ ಮತ್ತು ಅದನ್ನು ಅಧಿಕೃತ ನಾಯಕನಿಗೆ (ಬಿಜೆಪಿ ಏಜೆಂಟ್) ತೋರಿಸಿದ್ದೇನೆ” ಎಂದು ಅವರು ಮತ ಚಲಾಯಿಸಿದ ನಂತರ ಹೇಳಿದ್ದಾರೆ.

ರಾಜ್ಯಸಭಾ ಚುನಾವಣೆಯಿಂದ ಜೆಡಿಎಸ್-ಬಿಜೆಪಿ ಮೈತ್ರಿ ಮತ್ತಷ್ಟು ಬಲಗೊಂಡಿದೆ. ಕಾಂಗ್ರೆಸ್‌ನಿಂದ ಬಿಜೆಪಿಗೆ ಜಿಗಿದು ಅಧಿಕಾರ ಅನುಭವಿಸಿದ ದೇಶದ್ರೋಹಿ (ಸೋಮಶೇಖರ್) ಈಗ ಅಡ್ಡ ಮತದಾನದ ಮೂಲಕ ಬಿಜೆಪಿಗೆ ದ್ರೋಹ ಬಗೆದಿದ್ದಾರೆ. ಬಿಜೆಪಿಗಾಗಲಿ, ನನಗಾಗಲಿ ಆಘಾತವಾಗಿಲ್ಲ. ಲೋಕಸಭೆ ಚುನಾವಣೆಯಲ್ಲಿ ನಿಜವಾದ ಆಟವಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ವಿಡಿಯೊ ನೋಡಿ: ನಿರುದ್ಯೋಗ ಸಮಸ್ಯೆಗೂ ಕೋಮುವಾದಕ್ಕೂ ಲಿಂಕ್ ಇದೆ: ಜಸ್ಟೀಸ್ ಎಚ್.ಎನ್ ನಾಗಮೋಹನದಾಸ್ Janashakthi Media

Donate Janashakthi Media

Leave a Reply

Your email address will not be published. Required fields are marked *