ವಿಧಾನ ಪರಿಷತ್ ಸದಸ್ಯೆ ಹತ್ಯೆಗೆ ಯತ್ನಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಂಧನ

ಹೈದರಾಬಾದ್: ತೆಲಂಗಾಣದ ವಿಧಾನ ಪರಿಷತ್ ಸದಸ್ಯೆ ಕವಿತಾ ಅವರ ಹತ್ಯೆಗೆ ಯತ್ನಿಸಿದ  ಆರೋಪದಡಿ ಬಿಜೆಪಿ ಅಧ್ಯಕ್ಷ ಬಂಡೀರ್ ಸಂಜಯ್‍ಕುಮಾರ್ ಅವರನ್ನು ಜಂಗೋನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ದೆಹಲಿಯಲ್ಲಿನ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಅಬಕಾರಿ ನೀತಿಯಲ್ಲಿ ಲಾಭ ಪಡೆಯಲು ತೆಲಂಗಾಣದ ಪ್ರಭಾವಿಗಳು, ಗುತ್ತಿಗೆದಾರರು ಬಂಡವಾಳ ಹೂಡಿಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದನ್ನು ವಿರೋಧಿಸಿ ಬಿಜೆಪಿ ಯುವ ಮೋರ್ಚ ಮತ್ತು ಮಹಿಳಾ ಮೋರ್ಚ ಕಾರ್ಯಕರ್ತರು ಕವಿತಾ ಅವರ ಮನೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದರು.

ಈ ಸಂದರ್ಭದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಅದನ್ನು ತಡೆಯಲು ಮಧ್ಯಪ್ರವೇಶಿಸಿದ ಪೊಲೀಸರು ಕೆಲವರನ್ನು ವಶಕ್ಕೆ ಪಡೆದರು. ಪರಿಸ್ಥಿತಿ ನಿಯಂತ್ರಿಸುವ ಹಂತದಲ್ಲಿ ಯುವ ಮೋರ್ಚಾದ ಕಾರ್ಯಕರ್ತರನ್ನು ಥಳಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ಬಿಜೆಪಿ ಕಾರ್ಯಕರ್ತರು ಬಲವಂತವಾಗಿ ಮನೆಗೆ ನುಗ್ಗಿ ತೆಲುಗು ರಾಷ್ಟ್ರಂ ಪಕ್ಷದ ವಿಧಾನ ಪರಿಷತ್‌ ಸದಸ್ಯೆ ಕವಿತಾ ಅವರನ್ನು ಹತ್ಯೆ ಮಾಡಲು ಯತ್ನಿಸಿದ್ದಾರೆ ಎಂಬ ದೂರು ದಾಖಲಾಗಿದೆ. ಪೊಲೀಸರು ಇದನ್ನು ಆಧರಿಸಿ ಬಿಜೆಪಿಯ ರಾಜ್ಯಾಧ್ಯಕ್ಷ ಬಂಡೀರ್‌ ಸಂಜಯ್‌ಕುಮಾರ್‌ ಬಂಧಿಸಿದ್ದಾರೆ.

ಕವಿತಾ ಅವರು ತಮ್ಮ ಮೇಲಿನ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. ಅನಗತ್ಯವಾಗಿ ತಮ್ಮ ವಿರುದ್ಧ ಸುಳ್ಳು ಪ್ರಚಾರಗಳು ನಡೆಯುತ್ತಿವೆ ಎಂದು ದೂರಿದ್ದು, ನ್ಯಾಯಾಲಯದಿಂದ ತಡೆಯಾಜ್ಞೆ ತರುವ ಸೂಚನೆ ನೀಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *