ಕಲಬುರಗಿ: ಕೊಲೆ ಯತ್ನ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ರನ್ನು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ಜೇವರ್ಗಿ ತಾಲೂಕಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ನೆಲೋಗಿ ಪೊಲೀಸರು ನವೆಂಬರ್ 20ರ ತಡರಾತ್ರಿ ಮಣಿಕಂಠ ರಾಠೋಡ್ ರನ್ನು ಬಂಧಿಸಿದ್ದಾರೆ. ಸದ್ಯ ಮಣಿಕಂಠ ರಾಠೋಡ್ನನ್ನು ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಾಟಿ ಔಷಧಿ ಕೊಡುತ್ತಿದ್ದ ರಶೀದ್ ಮತ್ಯಾ ಎಂಬಾತನ ಬಂಧನಕ್ಕೆ ಆಗ್ರಹಿಸಿ ಮಣಿಕಂಠ ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ರಶೀದ್ ಬೆಂಬಲಿಗರೊಂದಿಗೆ ವಾಗ್ವಾದ ನಡೆಸಿ ಹೈಡ್ರಾಮಾ ಕ್ರಿಯೇಟ್ ಮಾಡಿದ್ದ.
ಈ ವೇಳೆ ರಶೀದ್ ಮತ್ಯಾ ಕಾರು ಚಾಲಕನ ತಲೆಗೆ ಕಲ್ಲೇಟು ಬಿದ್ದಿತ್ತು. ಸದ್ಯ ರಶೀದ್ ಮತ್ಯಾ ಚಾಲಕನ ದೂರಿನ ಮೇರೆಗೆ ಕೊಲೆ ಯತ್ನ ಆರೋಪದಲ್ಲಿ ಮಣಿಕಂಠ ರಾಠೋಡ್ನನ್ನು ಬಂಧಿಸಲಾಗಿದೆ.
ಇದನ್ನೂ ನೋಡಿ: ದಿನಪೂರ್ತಿ ಕೆಲಸ ಕಮ್ಮಿ ವೇತನ : ಅಂಗನವಾಡಿ, ಬಿಸಿಯೂಟದವರ ಬದುಕಿನ ಕಥೆ Janashakthi Media
