ಬೆಂಗಳೂರು: ಬೇಸಿಗೆ ಶುರುವಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಅಭಾವ ಹೆಚ್ಚಾಗಿದೆ. ಇದೇ ಸಮಯದಲ್ಲಿ ಜನರಿಗೆ ಕುಡಿಯುವ ನೀರು ಕೊಡದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು ಖಾಲಿ ಕೊಡಗಳೊಂದಿಗೆ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿದೆ.
ಬೆಂಗಳೂರು ಮಹಾನಗರದ ಕುಡಿಯುವ ನೀರಿನ ಸರಬರಾಜಿನಲ್ಲಿ ವೈಫಲ್ಯವನ್ನು ಖಂಡಿಸಿ ಹಾಗೂ ರಾಜ್ಯದ ಜನರಿಗೆ ಕುಡಿಯುವ ನೀರು ಕೊಡದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಬೆಂಗಳೂರು ಮಹಾನಗರದ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು. ಸರಕಾರದ ವೈಫಲ್ಯವನ್ನು ಖಂಡಿಸಿ ಖಾಲಿ ಕೊಡಗಳ ಜೊತೆ ಪ್ರತಿಭಟನೆ ನಡೆಸಲಾಯಿತು.
ಇದನ್ನು ಓದಿ : ಪೌರತ್ವ ತಿದ್ದುಪಡಿ ಕಾಯ್ದೆ: ಅಧಿಸೂಚನೆ ಪ್ರಕಟಿಸಿದ ಕೇಂದ್ರ ಸರ್ಕಾರ
ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಬೆಂಗಳೂರು ಕೇಂದ್ರದ ಸಂಸದ ಪಿ.ಸಿ. ಮೋಹನ್, ವಿಧಾನ ಪರಿಷತ್ತಿನ ಮುಖ್ಯ ಸಚೇತಕ ರವಿಕುಮಾರ್, ಬಸವನಗುಡಿಯ ಶಾಸಕ ರವಿ ಸುಬ್ರಹ್ಮಣ್ಯ, ಜಯನಗರದ ಶಾಸಕ ಮತ್ತು ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷ ಸಿ.ಕೆ.ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಅಧ್ಯಕ್ಷ ಸಪ್ತಗಿರಿ ಗೌಡ, ರಾಜ್ಯದ ಮುಖ್ಯ ವಕ್ತಾರ ಅಶ್ವತ್ಥ್ ನಾರಾಯಣ ಗೌಡ, ಮಾಜಿ ಮಹಾಪೌರರು, ಮೋರ್ಚಾಗಳ ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಬೆಂಗಳೂರು ಮಹಾನಗರದ ಎಲ್ಲಾ ಮಂಡಲಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಇದನ್ನು ನೋಡಿ : ಹಿಂದುತ್ವವಾದಕ್ಕೆ ಇರುವುದೊಂದೇ ಪರ್ಯಾಯ ಮಾರ್ಗ ಅಂಬೇಡ್ಕರ್‌ವಾದ – ಸಂತೋಷ್ ಲಾಡ್ Janashakthi Media