ಬೆಂಗಳೂರು: ಬಿಜೆಪಿಗರು ಪ್ರಧಾನಿ ನರೇಂದ್ರ ಮೋದಿ ಜಾತಿಗಣತಿ ನಡೆಸುವ ಘೋಷಣೆಯನ್ನು ಮಾಸ್ಟರ್ ಸ್ಟ್ರೋಕ್ ಎಂದು ಬಣ್ಣಿಸಲು ಆರಂಭಿಸಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಘೋಷಣೆ
ವಿಪರ್ಯಾಸವೆಂದರೆ ಇದೇ ಬಿಜೆಪಿ ನಾಯಕರು ಈವರೆಗೂ ಕಾಂಗ್ರೆಸ್ ಪ್ರತಿಪಾದಿಸುತ್ತಾ ಬಂದಿರುವ ಜಾತಿಗಣತಿ ವಿರುದ್ಧ ಟೀಕೆಗಳನ್ನು ಮಾಡುತ್ತಿದ್ದರು. ಈಗ ಅವರು ತಮ್ಮ ವರಸೆಯನ್ನು ಬದಲಿಸುವ ಅನಿವಾರ್ಯತೆಗೆ ಸಿಲುಕಿದ್ದಾರೆ.
ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: 8 ಮಂದಿ ಬಂಧನ
ಪಹಲ್ಗಾಮ್ ದಾಳಿ ಬಳಿಕ ಮೋದಿ ರನ್ನು ಜನಸಾಮಾನ್ಯರು ಪ್ರಶ್ನಿಸುತ್ತಿದ್ದಾರೆ. ಇವುಗಳಿಗೆ ಉತ್ತರ ನೀಡುವ ಸಾಮರ್ಥ್ಯ ಅವರಿಗೆ ಇಲ್ಲ. ಹೀಗಾಗಿ ಜನರು ಮತ್ತು ಮಾಧ್ಯಮದ ಗಮನವನ್ನು ಬೇರೆಡೆಗೆ ತಿರುಗಿಸಲು ಜಾತಿಗಣತಿ ಅಸ್ತ್ರ ಪ್ರಯೋಗಿಸಿದ್ದಾರೆ.
ಭಯೋತ್ಪಾದನೆ ದಾಳಿಗೆ ಪ್ರತಿಕ್ರಿಯೆಯಾಗಿ ಸರ್ಜಿಕಲ್ ಸ್ಟ್ರೈಕ್ ಮಾಡುತ್ತಾರೆ ಎಂದು ನಿರೀಕ್ಷಿಸಿದ್ದರೆ, ಇವರು ಪಾಕಿಸ್ತಾನದ ಯೂಟ್ಯೂಬ್ ಚಾನೆಲ್ಗಳನ್ನು ಬ್ಯಾನ್ ಮಾಡಿದ್ದಾರೆ. ಪ್ರಧಾನಿ ಮೋದಿ ಅವರ ವರ್ತನೆ ಜನರಲ್ಲಿ ಬೇಸರ ಮೂಡಿಸಿದೆ ಎಂದರು.
ಇದನ್ನೂ ನೋಡಿ: ಮೇ ದಿನ | ಸ್ವದೇಶಿ ಎನ್ನುವ ಸರ್ಕಾರ ವಿದೇಶಿ ಬಂಡವಾಳಿಗರಿಗೆ ರತ್ನಗಂಬಳಿ ಹಾಸುತ್ತಿರುವುದೇಕೆ? – ಡಾ. ಕೆ.ಪ್ರಕಾಶ್