ಚನ್ನಪಟ್ಟಣ ಉಪಚುನಾವಣೆ: ಕಾಂಗ್ರೆಸ್ ಪ್ರಚಾರದಲ್ಲಿ ಬಿಜೆಪಿ ಶಾಸಕ ಪ್ರತ್ಯಕ್ಷ

Please follow and like us:
ರಾಮನಗರ: ಚನ್ನಪಟ್ಟಣ ಉಪಚುನಾವಣಾ ಕ್ಷೇತ್ರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರು ಗೆಲ್ಲಲೇಬೇಕೆಂದು ಹಠಕ್ಕೆ ಬಿದ್ದಿದ್ದಾರೆ. ಇದರ ನಡುವೆ ಕಾಂಗ್ರೆಸ್ ಪ್ರಚಾರದಲ್ಲಿ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ದಿಢೀರ್ ಪ್ರತ್ಯಕ್ಷವಾಗಿದ್ದಾರೆ.

ಒಂದೆಡೆ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ, ಹೆಚ್‌ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ರನ್ನು ಗೆಲ್ಲಿಸಲೇಬೇಕು ಎಂದು ಪಣ ತೊಟ್ಟು ಅಖಾಡಕ್ಕಿಳಿದು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಇತ್ತ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್‌ ಪರವಾಗಿ ಡಿಕೆ ಬ್ರದರ್ಸ್ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಈ ಮಧ್ಯೆ ಅಚ್ಚರಿಯ ಬೆಳವಣಿಗೆ ಎನ್ನುವಂತೆ ಕಾಂಗ್ರೆಸ್ ನಾಯಕರ ಜೊತೆ ಬಿಜೆಪಿ ಶಾಸಕ ಬಹಿರಂಗವಾಗಿ ಪ್ರಚಾರಕ್ಕಿಳಿದಿದ್ದಾರೆ.

ಇದನ್ನೂ ಓದಿ: ನಾನು ಬಿಸಿನೆಸ್ ವಿರೋಧಿ ಅಲ್ಲ, ಆದರೆ ಉದ್ಯಮ ಕೆಲವೇ ವ್ಯಕ್ತಿಗಳ ಹಿಡಿತದಲ್ಲಿರೋದನ್ನು ವಿರೋಧಿಸುತ್ತೇನೆ – ರಾಹುಲ್ ಗಾಂಧಿ

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಪರ ಕಾಂಗ್ರೆಸ್ ನಾಯಕರು ಚಕ್ಕರೆ ಗ್ರಾಮದಲ್ಲಿ ಬೃಹತ್‌ ಬಹಿರಂಗ ಸಭೆ ನಡೆಸಿದರು. ಈ ವೇಳೆ, ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಪ್ರತ್ಯಕ್ಷವಾಗಿದ್ದಾರೆ. ಚನ್ನಪಟ್ಟಣದಲ್ಲಿ ನಿನ್ನೆ ಕಾಂಗ್ರೆಸ್ ಸಭೆಗೆ ಬಂದು ಹೋಗಿದ್ದ ಸೋಮಶೇಖರ್, ಇಂದು ಡಿಸಿಎಂ ಡಿಕೆಶಿ ಜೊತೆಗಿನ ಸಭೆಯಲ್ಲಿ ಬಹಿರಂಗವಾಗಿಯೇ ಹಾಜರಾಗಿದ್ದಾರೆ.

ಸಿಪಿ ಯೋಗೇಶ್ವರ್ ಅವರ ಪರವಾಗಿ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿಯಾಗಿರುವ ಸೋಮಶೇಖರ್ ಅವರು, ರಾಮನಗರದ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿ ಉಪಚುನಾವಣೆಯಲ್ಲಿ ಯೋಗೇಶ್ವರ್ ಅವರನ್ನು ಬೆಂಬಲಿಸುವಂತೆ ಎಸ್‌ಟಿ ಸೋಮಶೇಖರ್ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ನೋಡಿ: ನೈಸ್ ಕಂಪನಿ ಪರ ನಿಂತ ಡಿಕೆ ಶಿವಕುಮಾರ್ ವಿರುದ್ಧ ರೈತರ ಪ್ರತಿಭಟನೆ Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *