ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನನನ್ನು ಎಸ್ಐಟಿ ವಶಕ್ಕೆ ನೀಡಲಾಗಿತ್ತು.
ಎಸ್ಐಟಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ ಇಂದು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು, ವಿಚಾರಣೆ ನಡೆಸಿದ ಕೋರ್ಟ್ ಮುನಿರತ್ನಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಯ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ
ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಬಂಧಿಸಲ್ಪಟ್ಟ ಶಾಸಕ ಜೈಲು ಸೇರುತ್ತಿದ್ದಂತೆ ಮುನಿರತ್ನ ವಿರುದ್ಧ ಅತ್ಯಾಚಾರ, ಬ್ಲ್ಯಾಕ್ ಮೇಲ್, ಹನಿಟ್ರ್ಯಾಪ್ ಪ್ರಕರಣ ದಾಖಲಾಗಿತ್ತು.
ಜೈಲಿನಿಂದ ಬಿಡುಗಡೆಯಾಗಿ ಹೊರ ಬರುತ್ತಿದ್ದಂತೆ ಮುನಿರತ್ನ ರನ್ನು ಅತ್ಯಾಚಾರ ಆರೋಪ ಪ್ರಕರಣದಲ್ಲಿ ಪೊಲೀಸರು ಮತ್ತೆ ಬಂಧಿಸಿದ್ದರು. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುನಿರತ್ನ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇದರ ನಡುವೆ ಅವರು ಜಾಮೀನಿಗೆ ಕೂಡ ಅರ್ಜಿ ಸಲ್ಲಿಸಿದ್ದರು.
ಇದನ್ನೂ ನೋಡಿ: ಗಾಂಧಿವಾದ ಗೆಲ್ಲಬೇಕು – ಗೋಡ್ಸೆವಾದ ಸೋಲಬೇಕು – ಎ. ನಾರಾಯಣ Janashakthi Media