ಬೆಂಗಳೂರು: ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆಮುಂದೆ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರುಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ.
ತಡರಾತ್ರಿ ಒಂದೂವರೆ ಗಂಟೆ ಸುಮಾರಿಗೆ ಘಟನೆ ನಡೆದಿದೆ. ಸತೀಶ್ ರೆಡ್ಡಿ ಅವರ ಫಾರ್ಚೂನರ್ ಕಾರು ಹಾಗೂ ಮಹೀಂದ್ರ ಥಾರ್ ಜೀಪ್ ಸುಟ್ಟು ಹೋಗಿದೆ. ಸಿಸಿಟಿವಿಯಲ್ಲಿ ಈ ದೃಶ್ಯ ದಾಖಲಾಗಿದ್ದು, ನಾಲ್ಕು ಮಂದಿ ದುಷ್ಕರ್ಮಿಗಳು ಪೆಟ್ರೋಲ್ ಕ್ಯಾನ್ ಗಳನ್ನ ತಂದು ಬೆಂಕಿ ಹಚ್ಚಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಘಟನೆಯ ಬಗ್ಗೆ ಶಾಸಕ ಸತೀಶ್ ರೆಡ್ಡಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ‘1:23ಕ್ಕೆ ದುಷ್ಕರ್ಮಿಗಳು ಬಂದಿದ್ದು, ಆ ಕಡೆ ಈ ಕಡೆ ನೋಡಿ ಎರಡು ಗಾಡಿಗಳಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚುತ್ತಾರೆ’, ಕೇವಲ ಮೂರ್ನಾಲ್ಕು ನಿಮಿಷದಲ್ಲಿ ಈ ದುಷ್ಕ್ರತ್ಯ ಎಸಗಿದ್ದಾರೆ. ಆ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.
1:30ಕ್ಕೆ ನಮಗೆ ಘಟನೆ ಬಗ್ಗೆ ಗೊತ್ತಾಗಿದೆ. ಬ್ಯಾಟರಿ ಸ್ಫೋಟಗೊಂಡಿದ್ದರಿಂದ ಶಬ್ದ ಬಂದು ನಮಗೆ ಎಚ್ಚರವಾಯಿತು. ಗೇಟ್ ಬಳಿ ಇದ್ದ ಪೊಲೀಸರು ಹಾಗೂ ನಮ್ಮ ವಾಚ್ಮ್ಯಾನ್ ಓಡಿ ಬಂದರು. ಅರ್ಧಗಂಟೆ ಕಾಲ ಬೆಂಕಿಯನ್ನ ಆರಿಸುವ ಕೆಲಸವನ್ನು ಮಾಡಿದ್ದಾರೆ. ಆದರೂ ಕಾರುಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ ಎಂದು ಮಾಹಿತಿ ನೀಡಿದ್ದಾರೆ.
ಘಟನೆ ಕುರಿತು ಆಗ್ನೇಯ ವಿಭಾಗ ಡಿಸಿಪಿ ಜೋಶಿ ಶ್ರೀನಾಥ್ ಮಹದೇವ್ ಸ್ಪಷ್ಟನೆ ನೀಡಿದ್ದು, ದುಷ್ಕರ್ಮಿಗಳು ಶಾಸಕರ ಮನೆಯ ಹಿಂಬದಿಯ ಗೇಟಿಂದ ಒಳಗೆ ನುಗ್ಗಿದ್ದಾರೆಂದು ವಿಶೇಷ ತಂಡಗಳ ಮೂಲಕ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಹೇಳಿದ್ದಾರೆ.
ಡಿಜಿ ಹಳ್ಳಿ ಘಟನೆಗೆ ವರಷ : ಒಂದು ವರ್ಷದ ಹಿಂದೆ ಕೆಜಿ ಹಳ್ಳಿ-ಡಿಜೆ ಹಳ್ಳಿ ಗಲಭೆ ಪ್ರಕರಣ ಜನರ ನಿದ್ದೆ ಕೆಡಿಸಿತ್ತು. ಒಂದು ಫೇಸ್ಬುಕ್ ಪೋಸ್ಟ್ನಿಂದ ಭಾರಿ ಅನಾಹುತ ನಡೆದಿತ್ತು. ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಬೆಂಕಿಗೆ ಆಹುತಿಯಾಗಿತ್ತು. ಸದ್ಯ ಇಂದು ಈ ಘಟನೆ ನಡೆದು ಒಂದು ವರ್ಷ ಕಳೆದಿದೆ. ಇದೇ ವೇಳೆ ಇಂತಹದ್ದೊಂದು ಘಟನೆ ಮತ್ತೆ ನಢದಿರುವುದು ಹಲವು ಚರ್ಚೆಗಳನ್ನು ಹುಟ್ಟು ಹಾಕಿದೆ. ಸಾಜಷ್ಟು ಸಾಕ್ಷಾಧಾರಗಳಿದ್ದರೂ ಇನ್ನೂ ಆರೋಪಿಗಳಿಗೆ ಶಿಕ್ಷೆಯಾಗಿಲ್ಲ, ಸುಪ್ರೀಂ ಕೋರ್ಟ್ ನಲ್ಲಿ ಕೇಸ್ ನಡೆಯುತ್ತದೆ.