ನಿಯಾಮವಳಿ ಉಲ್ಲಂಘನೆ; ಯತ್ನಾಳ್ ಮಾಲೀಕತ್ವದ ಕಾರ್ಖಾನೆ ಮುಚ್ಚುವಂತೆ ನೋಟಿಸ್

ಬೆಂಗಳೂರು :ನಿಯಾಮವಳಿ ಉಲಲಂಘಿಸಿದ ಆರೋಪದ ಮೇಲೆ ಬಿಜೆಪಿ ಶಾಸಕ ಬಸನ್​ಗೌಡ ಪಾಟೀಲ್​ ಒಡೆತನದ ಸಕ್ಕರೆ ಕಾರ್ಖಾನೆ ಮುಚ್ಚುವಂತೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್​ ಜಾರಿ ಮಾಡಿದೆ. ಯತ್ನಾಳ್ 

ಕಲಬುರಗಿ ಜಿಲ್ಲೆ ಚಿಂಚೋಳಿ ತಾಲ್ಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ ಇರುವ ಸಿದ್ದಶ್ರೀ ಸಕ್ಕರೆ ಕಾರ್ಖಾನೆ ವಿರುದ್ಧ ಕಲುಷಿತ ನೀರು ಮುಲ್ಲಾಮಾರಿ ಜಲಾಶಯಕ್ಕೆ ಬಿಡಲಾಗುತ್ತಿತ್ತು ಎನ್ನೋ ಆರೋಪ ಕೇಳಿ ಬಂದಿದೆ. ಅಲ್ಲದೇ ವಾಯು, ಜಲ ಕಾಯ್ದೆ ಉಲ್ಲಂಘನೆ ಆರೋಪ ಕೂಡ ಕೇಳಿ ಬಂದಿತ್ತು. ಇತ್ತೀಚೆಗೆ ಕರ್ನಾಟಕ ಪ್ರಾಂತರೈತ ಸಂಘ ಪ್ರತಿಭಟನೆ ನಡೆಸಿ ಕ್ರಮಕ್ಕೆ ಆಗ್ರಹಿಸಿತ್ತು, ಆ ಹಿ‌ನ್ನೆಲೆಯಲ್ಲಿ ಫ್ಯಾಕ್ಟರಿ ಬಂದ್​ಗೆ ಆದೇಶ ನೀಡಲಾಗಿದೆ.

ಇದಲ್ಲದೆ ಕಾರ್ಖಾನೆಯ ನೊಂದಣಿಗೆ ಸಹಕರಿಸಿದ ಅಧಿಕಾರಿಗಳ ವಿರುದ್ಧವೂ ಕ್ರಿಮಿನಲ್​ ಮೊಕದ್ದಮೆ ದಾಖಲಿಸುವಂತೆ ಕೆಎಸ್‌ಪಿಸಿಬಿ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಕಾರ್ಖಾನೆ ಪರಿಶೀಲನೆ ವೇಳೆ ಅವೈಜ್ಞಾನಿಕ ನಿರ್ವಹಣೆ ಸೇರಿದಂತೆ ಹಲವು ಗಂಭೀರ ಲೋಪಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿಫ್ಯಾಕ್ಟ್‌ಚೆಕ್ | ಮುಸ್ಲಿಂ ಆಧ್ಯಾತ್ಮಿಕ ನಾಯಕನನ್ನು ಭಯೋತ್ಪಾದಕ ಬೆಂಬಲಿಗ ಎಂದು ಸುಳ್ಳು ಹೇಳಿದ ಬಿಜೆಪಿ ಶಾಸಕ ಯತ್ನಾಳ್

ಕೆಎಸ್‌ಪಿಸಿಬಿಯು ಸಕ್ಕರೆ ಕಾರ್ಖಾನೆಗೆ ಕೆಲವು ಷರತ್ತು ವಿಧಿಸಿ ಅನುಮತಿ ನೀಡಿತ್ತು. ಆದರೆ, ಕಳೆದ ವರ್ಷ ಮಂಡಳಿ ಪ್ರಾದೇಶಿಕ ವಿಭಾಗದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದಾಗ ಅನುಮತಿ ಪಡೆಯದೇ ಬಾಯ್ಲರ್ ಆರಂಭ, ಕಬ್ಬು ಅರೆಯುವಿಕೆ, ತ್ಯಾಜ್ಯ ಸಂಸ್ಕರಣಾ ಘಟಕವು ನಿರ್ಮಾಣ ಹಂತದಲ್ಲಿದ್ದರೂ ಅನುಮತಿ ಪಡೆಯದೇ ಡಿಸ್ಟಿಲರಿ ಘಟಕವನ್ನು ಸ್ಥಾಪಿಸಿರುವುದು ಕಂಡುಬಂದಿದೆ.

ನಿಯಮ ಉಲ್ಲಂಘನೆ ಸಂಬಂಧ ವಿವರ ಪಡೆಯಲು ಮಂಡಳಿ, ಕಳೆದ ಮಾರ್ಚ್‌ನಲ್ಲಿ ಕಾರ್ಖಾನೆಗೆ ನೋಟಿಸ್ ಜಾರಿಗೊಳಿಸಿತ್ತು. ನಿಯಮ ಉಲ್ಲಂಘಿಸಿದ್ದರೂ ಒಂದು ವರ್ಷದಿಂದ ಕಾರ್ಖಾನೆ ವಿರುದ್ಧ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಪರಿಸರ ಮಾಲಿನ್ಯ ಮಾಡುತ್ತಿರುವುದಕ್ಕೆ ಸಂಬಂಧಿಸಿದಂತೆ ಸಕ್ಕರೆ ಕಾರ್ಖಾನೆಗೆ ಕೇಂದ್ರ ಪರಿಸರ ಸಚಿವಾಲಯ‌ವು ಕಳೆದ ವರ್ಷ ₹1.58 ಕೋಟಿ ದಂಡ ಸಹ ವಿಧಿಸಿತ್ತು. ಯತ್ನಾಳ್

ಯತ್ನಾಳ ಪ್ರತಿಕ್ರಿಯೆ : ಕಾರ್ಖಾನೆ ಮುಚ್ಚುವ ಆದೇಶಕ್ಕೆ  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯಿಸಿದ್ದಾರೆ. ಈ ಸಂಬಂಧ ಎಕ್ಸ್ (ಟ್ವಿಟರ್)ನಲ್ಲಿ ಟ್ವೀಟ್ ಮಾಡುವ ಮೂಲಕ ಯತ್ನಾಳ್ ಸರ್ಕಾರದ ನಡೆಯನ್ನು ವಿರೋಧಿಸಿ ತೀಕ್ಷ್ಣವಾಗಿ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಸರ್ಕಾರ ರಾಜಕೀಯವಾಗಿ ಎದುರಿಸಲಾಗದೆ ನಮ್ಮ ಎಥನಾಲ್ ಕಾರ್ಖಾನೆಗೆ ನೋಟಿಸ್ ಕೊಡಿಸಿದೆ. ಈ ನೋಟಿಸ್, ಆದೇಶಗಳಿಗೆ ಹೆದರುವ ಜಾಯಮಾನ ನನ್ನದಲ್ಲ ಕಾಂಗ್ರೆಸ್ ಆಡಳಿತದ ವಿರುದ್ಧ ಹೋರಾಟ ಮಾಡಲು ಶಕ್ತಿ ಇಮ್ಮಡಿಯಾಗಿದೆ. ‘ಕೈ’ಲಾಗದವರ ಕೊನೆಯ ಅಸ್ತ್ರವೇ ಅಪಪ್ರಚಾರ ಎಂಬುದು ಗೊತ್ತಿರುವ ವಿಷಯ ಎಂದು ಯತ್ನಾಳ್ ಟ್ವೀಟ್ ಮಾಡುವ ಮೂಲಕ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ವಿಡಿಯೋ ನೋಡಿ : ಕೆಮಿಕಲ್​ ಮಿಶ್ರಿತ ನೀರು ಹೊರಹಾಕುತ್ತಿರುವ ಯತ್ನಾಳ ಸಕ್ಕರೆ ಕಾರ್ಖಾನೆ : ಜನರ ಹೊಟ್ಟೆ ಸೇರುತ್ತಿದೆ ವಿಷಕಾರಿ ನೀರು

 

Donate Janashakthi Media

Leave a Reply

Your email address will not be published. Required fields are marked *