ನವದೆಹಲಿ: ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಭರವಸೆಗಳನ್ನು ಕಾಪಿ ಪೇಸ್ಟ್ ಮಾಡುವ ವಿಫಲ ಪ್ರಯತ್ನ ನಡೆಸಿದ್ದಾರೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಹೇಳಿದ್ದಾರೆ. ಇಂದು ಅವರು ರಾಜಸ್ಥಾನದಲ್ಲಿ ಎರಡು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಈ ಬಗ್ಗೆ ಮಾತನಾಡಿರುವ ಖರ್ಗೆ ಅವರು, “ಇಂದು ಭರತ್ಪುರ ಜಿಲ್ಲೆಯ ವೈರ್ ವಿಧಾನಸಭಾ ಕ್ಷೇತ್ರ ಮತ್ತು ತಿಜಾರಾದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದೇನೆ. ಬಿಜೆಪಿಗೆ ನೀಯತ್ತು ಇಲ್ಲ, ನೀತಿಯೂ ಇಲ್ಲ. ಕಾಂಗ್ರೆಸ್ ರಾಜಸ್ಥಾನ ಮತ್ತು ಇತರ ರಾಜ್ಯಗಳಲ್ಲಿ ಸಾರ್ವಜನಿಕ ಕಲ್ಯಾಣಕ್ಕಾಗಿ ಭರವಸೆಗಳ ರೂಪದಲ್ಲಿ ಗಟ್ಟಿಯಾದ ಕಾರ್ಯಕ್ರಮಗಳನ್ನು ನೀಡಿದೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ರಾಜ್ಯಪಾಲ ಹಿಂದಿರುಗಿಸಿದ ಎಲ್ಲಾ 10 ಮಸೂದೆಯನ್ನು ಪುನಃ ಅಂಗೀಕರಿಸಿದ ತಮಿಳುನಾಡು ಸರ್ಕಾರ
ಪ್ರಧಾನಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಖರ್ಗೆ, “ಮೋದಿ ಜಿ ಮತ್ತು ಬಿಜೆಪಿ ಅನೇಕ ಪ್ರಯತ್ನಗಳ ನಂತರ ನಮ್ಮ ನಿಜವಾದ ಭರವಸೆಗಳನ್ನು ನಕಲಿ ಮಾಡುವುದು ಉತ್ತಮ ಎಂದು ಭಾವಿಸಿದೆ. ಅವರು ಚುನಾವಣೆಯ ಮೊದಲು ಸುಳ್ಳು ಅಜೆಂಡಾವನ್ನು ಪೂರೈಸಲು ಆತುರದಿಂದ ಮತ್ತು ವಿಫಲ ಪ್ರಯತ್ನ ನಡೆಸಿದ್ದಾರೆ. ಕಾಂಗ್ರೆಸ್ ಕೆಲಸ ಮಾಡಿದೆ ಎಂದು ನಮಗೆ ತಿಳಿದಿದೆ ಮತ್ತು ನಮ್ಮ ಏಳು ಭರವಸೆಗಳು ತಳ ಮಟ್ಟಕ್ಕೆ ತಲುಪುವಂತೆ ನಾವು ಖಚಿತಪಡಿಸಿಕೊಳ್ಳುತ್ತೇವೆ” ಎಂದು ಖರ್ಗೆ ಹೇಳಿದ್ದಾರೆ.
200 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25 ರಂದು ಮತದಾನ ಮರು ನಿಗದಿಪಡಿಸಲಾಗಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ. ಪ್ರತಿ ಐದು ವರ್ಷಗಳ ನಂತರ ಪರ್ಯಾಯ ಪಕ್ಷದ ಸರ್ಕಾರದ ಸಂಪ್ರದಾಯವಿರುವ ರಾಜಸ್ಥಾನದಲ್ಲಿ ಕಾಂಗ್ರೆಸ್ ಸತತ ಎರಡನೇ ಅವಧಿಯಲ್ಲೂ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ.
ಶುಕ್ರವಾರ, ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರಾಜಸ್ಥಾನದಲ್ಲಿ ಎರಡು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಅವರ ಸಹೋದರ ಮತ್ತು ಪಕ್ಷದ ಪ್ರಮುಖ ನಾಯಕ ರಾಹುಲ್ ಗಾಂಧಿ ಅವರು ಅದಕ್ಕೂ ಹಿಂದಿನ ದಿನ ಮೂರ ದಿನಗಳ ಹಿಂದೆ ರಾಜ್ಯದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದರು. ಅಲ್ಲಿ ಕಾಂಗ್ರೆಸ್ ಈಗಾಗಲೆ ಏಳು ಭರವಸೆಗಳನ್ನು ಜನರಿಗೆ ನೀಡಿದ್ದು, ಅಧಿಕಾರ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ.
ವಿಡಿಯೊ ನೋಡಿ: ದಲಿತರ ಶೃಂಗಸಭೆ : ಸನಾತನಿ ಸರ್ಕಾರದಿಂದ ದಲಿತರ ಮೇಲೆ ನಿರಂತರ ದರ್ಜನ್ಯ – ಜನಾಕ್ರೋಶ Janashakthi Media