ಕೊಳ್ಳೇಗಾಲ: ಹಿಂದಿನ ಜೆಡಿ(ಎಸ್)-ಕಾಂಗ್ರೆಸ್ ಸಮ್ಮಿಶ್ರ ಸರಕಾರದ ಪಥನ ಮತ್ತು ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ರಚನೆಗೆ ಪರೋಕ್ಷವಾಗಿ ಸಹಕರಿಸಿದ ಕೊಳ್ಳೇಗಾಲ ಕ್ಷೇತ್ರ ಶಾಸಕ ಎನ್ ಮಹೇಶ್ ಶೀರ್ಘದಲ್ಲೇ ಬಿಜೆಪಿ ಪಕ್ಷ ಸೇರಲಿದ್ದಾರೆ ಎಂಬ ಮೇಲ್ನೋಟದ ಸುದ್ದಿಗಳು ಹರಿದಾಡುತ್ತಿದ್ದು, ಶೀಘ್ರದಲ್ಲೇ ಕಮಲ ಪಾಳಯಕ್ಕೆ ಹಾರುವುದು ಖಚಿತ ಎಂಬುದು ತಿಳಿದು ಬಂದಿದೆ.
ಬಿಎಸ್‌ಪಿ ಪಕ್ಷದಿಂದ ಕೊಳ್ಳೇಗಾಲ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಎನ್.ಮಹೇಶ್ ನಂತರದ ರಾಜಕೀಯ ಬೆಳವಣಿಗೆಯಿಂದಾಗಿ ಬಿಎಸ್‌ಪಿಯಿಂದ ಉಚ್ಛಾಟನೆಗೊಂಡರು. ಈಗ ಅವರು ಸದ್ಯ ಸ್ವತಂತ್ರ ಶಾಸಕರಾಗಿದ್ದಾರೆ. ಬಿಜೆಪಿ ಪಕ್ಷವನ್ನು ಸೇರುವ ಮೂಲಕ ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಎನ್ ಮಹೇಶ್ ಮುಂಬರುವ ಚುಣಾವಣೆಗೂ ಟಿಕೇಟ್ ಆಕಾಂಕ್ಷಿಯಾಗಿದ್ದಾರೆ.
ಇದನ್ನು ಓದಿ: ಜುಲೈ 26ಕ್ಕೆ ಸಿಎಂ ಸ್ಥಾನಕ್ಕೆ ಬಿಎಸ್‌ವೈ ರಾಜೀನಾಮೆ..? ಮುಂದಿನ ಸಿಎಂ ಯಾರು…??
ರಾಜ್ಯದಲ್ಲಿ ಬಿಎಸ್‌ಪಿ ಪಕ್ಷವನ್ನು ಹಲವು ವರ್ಷಗಳ ಕಾಲ ಸಂಘಟಿಸಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೊಳ್ಳೇಗಾಲ ಕ್ಷೇತ್ರದಿಂದ ಗೆಲುವು ಸಾಧಿಸಿದರು. ನಂತರದ ಬದಲಾದ ರಾಜಕೀಯ ಬೆಳವಣಿಗೆಯಿಂದಾಗಿ 2013ರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೊಂಡಿತು. ಈ ಸಂದರ್ಭದಲ್ಲಿ ಎನ್. ಮಹೇಶ್, ಕೆಲ ತಿಂಗಳ ಕಾಲ ಶಿಕ್ಷಣ ಸಚಿವರಾಗಿದ್ದರು. ಮತ್ತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮೌನಕ್ಕೆ ಶರಣಾಗಿದ್ದರು. ಆದರೂ, ಸಂದರ್ಭ ಬಂದಾಗಲೆಲ್ಲ ಬಿಜೆಪಿ ಪಕ್ಷದ ವಿರುದ್ಧ ಮಾತನಾಡುತ್ತಿದ್ದರು.
ಬಿಜೆಪಿ ಸರಕಾರ ರಚನೆಯಗೊಂಡ ನಂತರ ಹಲವು ಬಾರಿ ನನ್ನ ಪಾತ್ರವಿಲ್ಲವೆಂದು ಹೇಳುತ್ತಲೇ ಬಂದಿದ್ದ ಎನ್ ಮಹೇಶ್ ಹಿಂದಿನಿಂದಲೂ ಬಿಜೆಪಿ ಸಂಪರ್ಕದಲ್ಲಿದ್ದರು. ಬಿಜೆಪಿ ಸರಕಾರ ರಚನೆಯಲ್ಲಿ ಪ್ರಮುಖ ಸೂತ್ರಧಾರಿಗಳಲ್ಲಿ ಒಬ್ಬರಾದ ರಮೇಶ್ ಜಾರಕಿಹೊಳಿ ಒಮ್ಮೆ ಕೊಳ್ಳೇಗಾಲಕ್ಕೆ ಆಗಮಿಸಿದ ಸಂದರ್ಭದಲ್ಲಿ ಸಮ್ಮಿಶ್ರ ಸರ್ಕಾರ ರಚನೆ ವೇಳೆ ಎನ್ ಮಹೇಶ್ ಸಾಥ್ ನೀಡಿದ್ದರು ಎಂಬುದನ್ನ ಸ್ಪಷ್ಟನೆ ನೀಡಿದ್ದರು. ಇದಕ್ಕೂ ಮುನ್ನ ಬಿಜೆಪಿ ಕಾರ್ಯಕ್ರಮಕ್ಕೆ ಕೊಳ್ಳೇಗಾಲಕ್ಕೆ ಆಗಮಿಸಿದ್ದ ಬಿ.ವೈ.ವಿಜಯೇಂದ್ರ ಸಹಾ ಸರಕಾರ ರಚನೆ ವೇಳೆ ಶಾಸಕ ಎನ್. ಮಹೇಶ್ ಸಹಕಾರ ನೀಡಿದ್ದಾರೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾದ್ದರು.
ಎಸ್‌ಸಿ ಸದಸ್ಯರನ್ನು ದಶಕಗಳಿಂದ ಮುಖ್ಯಮಂತ್ರಿಯನ್ನಾಗಿ ಮಾಡದಿದ್ದಕ್ಕಾಗಿ ಮತ್ತು ಅವರನ್ನು ರಾಜಕೀಯ ಲಾಭಕ್ಕಾಗಿ ಮಾತ್ರ ಬಳಸಿದ್ದಕ್ಕಾಗಿ ಅವರು ಇತ್ತೀಚೆಗೆ ಕಾಂಗ್ರೆಸ್ ಪಕ್ಷವನ್ನು ಟೀಕಿಸಿದ್ದರು. ಇತ್ತೀಚಿಗೆ ಎನ್ ಮಹೇಶ್ ತಮ್ಮ ಬೆಂಬಲಿಗರೊಂದಿಗೆ ಸಭೆಗಳನ್ನು ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೊಳ್ಳೇಗಾಲ, ಚಾಮರಾಜನಗರ ಮತ್ತು ಗುಂಡ್ಲುಪೇಟೆ ತಾಲ್ಲೂಕುಗಳಲ್ಲಿ ತಮ್ಮ ಆಪ್ತರೊಂದಿಗೆ ಮಾತುಕತೆ ನಡೆಸಿದರು.
ಕಳೆದ ಎರಡು ದಿನಗಳ ಹಿಂದೆ ಕೊಳ್ಳೇಗಾಲ ತಾಲ್ಲೂಕಿನ ಕುರುಬನ ಕಟ್ಟೆ ದೇವಸ್ಥಾನದ ಆವರಣದಲ್ಲಿ ಬೆಂಬಲಿಗರು, ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಸಭೆ ನಡೆದಿದ್ದು, 100ಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ. ಶಾಸಕರ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ಬೆಂಬಲಿಗರು ತಿಳಿಸಿದ್ದಾರೆ ಎಂದು ಅಂಶಗಳು ತಿಳಿದುಬಂದಿದೆ.
ರಾಜ್ಯದ ಪ್ರಸ್ತುತ ರಾಜಕೀಯ ಸನ್ನಿವೇಶಗಳ ಬಗ್ಗೆ ಹಾಗೂ ಎಸ್‌ಸಿಗಳು ಇತರ ರಾಜ್ಯಗಳಲ್ಲಿ ಬಿಜೆಪಿಗೆ ತಮ್ಮ ನಿಷ್ಠೆಯನ್ನು ಬದಲಾಯಿಸಿಕೊಳ್ಳುತ್ತಿದ್ದಾರೆ . ಎಸ್‌ಸಿಗಳನ್ನು ವಿಭಜಿಸಿದರೆ ಸ್ವತಂತ್ರವಾಗಿ ಚುನಾವಣೆಗಳನ್ನು ಗೆಲ್ಲುವುದು ಕಠಿಣ ಕೆಲಸ ಎಂದು ತಿಳಿದಿರುವ ಎನ್ ಮಹೇಶ್, ಅವರ ಕಲ್ಯಾಣದ ಸಂಬಂಧ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಶೀಘ್ರವೇ ಬಿಜೆಪಿಗೆ ಸೇರ್ಪಡೆಗೊಂಡು ತಾ.ಪಂ ಜಿ.ಪಂ ಚುನಾವಣೆ ವೇಳೆಗೆ ಕ್ಷೇತ್ರದಲ್ಲಿ ಪಕ್ಷವನ್ನು ಸಂಘಟಿಸುವುದರೊಂದಿಗೆ ಚುನಾವಣೆಗೆ ಬೇಕಾದ ಸಿದ್ಧತೆಗಳನ್ನು ಈಗಿನಿಂದಲೇ ಮಾಡಿಕೊಳ್ಳಲು ತಯಾರಿಗೆ ಮುಂದಾಗಿರುವುದು ಸ್ಪಷ್ಟಗೊಂಡಿದೆ.
ಶಾಸಕ ಮಹೇಶ್ ಮುಂದಿನ ವಿಧಾನಸಭಾ ಚುನಾವಣೆ ಟಿಕೆಟ್ ಬಯಸಿ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ. ಮುಂದೆ ಬಿಜೆಪಿ ನನಗೆ ಟಿಕೆಟ್ ನೀಡುವುದು ಶತಸಿದ್ಧ, ಮತದಾರರ ಆಶೀರ್ವಾದದಿಂದ ಮತ್ತೊಮ್ಮೆ ಆಯ್ಕೆಯಾಗಬಹುದೆಂಬ ವಿಶ್ವಾಸದಿಂದಲೇ ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎನ್ನಲಾಗುತ್ತಿದೆ.