ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಲೆಕ್ಕ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಖಂಡಿಸಿ ಇಂದು ಬಿಜೆಪಿ ಕಾರ್ಯಕರ್ತರು ಸಿಎಂ ಮನೆ ಮುಕ್ತಿ ಹಾಕಿ ಪ್ರತಿಭಟಿಸಲು ಮುಂದಾಗಿದ್ದರು. ಆದರೆ ಸಿಎಂ ದೆಹಲಿ (CM SIDDU) ಪ್ರವಾಸದಲ್ಲಿರುವ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಮುಂದೂಡಿದ್ದಾರೆ.
ವಾಲ್ಮೀಕಿ ನಿಗಮದ ಅವ್ಯವಹಾರದ ಕುರಿತು ಡೆತ್‌ನೋಟ್‌ನಲ್ಲಿ ವಿವರವಾಗಿ ಚಂದ್ರಶೇಖರ್ ಬರೆದಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಹಾಗೂ ತಪ್ಪಿಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಇಂದು ಸಿಎಂ ನಿವಾಸಕ್ಕೆ ಮುಕ್ತಿಗೆ ಹಾಕಲು ತೀರ್ಮಾನಿಸಿದ್ದರು.
ಇದನ್ನೂ ಓದಿ: ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕತ್ತು ಕತ್ತರಿಸಿ ಕೊಂದ ಪತಿ; ಕುಣಿಗಲ್‌ನಲ್ಲಿ ಘಟನೆ
ಆದರೆ ಸಿಎಂ ಸಿದ್ದರಾಮಯ್ಯ ಎಂಎಲ್‌ಸಿ ಅಭ್ಯರ್ಥಿಗಳನ್ನು ಫೈನಲ್ ಮಾಡಲು ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ದೆಹಲಿಗೆ ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಕೈಗೊಂಡಿದ್ದು ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.
ಇದನ್ನೂ ನೋಡಿ: ಏನಿದು ಸಿದ್ರಾಮಯ್ಯನವರೆ ಅನ್ಯಾಯದ ಕಡೆ ವಾಲುತ್ತಿದ್ದೀರಿ!?Janashakthi Media