ಮಡಿಕೇರಿ: ಸೆಪ್ಟೆಂಬರ್ 22ರಂದು ಬಿಜೆಪಿಯ ಕೊಡಗು ಜಿಲ್ಲಾ ಘಟಕದ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಅಪ್ರು ರವೀಂದ್ರ ಹಾಗೂ ಇತರ ಕಾರ್ಯಕರ್ತರು ಇಲ್ಲಿನ ಬಾಲಭವನದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಇದನ್ನೂ ಓದಿ: ಉದ್ಯಮಿ ಗೌತಮ್ ಅದಾನಿಗೆ ಕ್ಲೀನ್ ಚಿಟ್; ತನಿಖೆಯನ್ನು ಮುಂದುವರಿಸುವುದು ಅಗತ್ಯ: ಕಾಂಗ್ರೆಸ್ ಕಿಡಿ
ಈ ಹಿಂದೆ ಕಾಂಗ್ರೆಸ್ ನಲ್ಲಿದ್ದ ಅಪ್ರು ರವೀಂದ್ರ ನಂತರ ಬಿಜೆಪಿಗೆ ಸೇರಿ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರಾಗಿದ್ದರು. ಈಗ ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಗೆ ಮರು ಸೇರ್ಪಡೆಗೊಂಡಿದ್ದಾರೆ.
ಇದನ್ನೂ ನೋಡಿ: ಸೌಹಾರ್ದ ವಾತಾವರಣ ನೆಲೆಸುವಲ್ಲಿ ಸಮುದಾಯದ ಕೊಡುಗೆ ಅಪಾರ – ಜಸ್ಟೀಸ್ ನಾಗಮೋಹನ್ ದಾಸ್ Janashakthi Media
