ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಚುನಾವಣಾ ಗ್ಯಾರೆಂಟಿಗಳನ್ನು ಜಾರಿಗೆ ತರುವಂತೆ ಒತ್ತಾಯಿಸಿ ವಿಧಾನಸೌಧದ ಅಧಿವೇಶನದ ವೇಳೆ ವಿಧಾನಸಭೆಯ ಒಳಗೆ ಮತ್ತು ಹೊರಗೆ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಜುಲೈ 4 ರಿಂದ ಪಕ್ಷದ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಧರಣಿ ನಡೆಯಲಿದೆ.
2024 ರ ಲೋಕಸಭೆ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ಸಿದ್ಧರಾಗಿ ಮತ್ತುಬಿಜೆಪಿ ಗೆಲ್ಲುವುದನ್ನು ಖಚಿತಪಡಿಸಿಕೊಳ್ಳಲು ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭಾನುವಾರ ಕರೆ ನೀಡಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ ಮಾಜಿ ಸಚಿವ ಆರ್. ಅಶೋಕ್, ಎಂಎಲ್ ಸಿ ರವಿಕುಮಾರ್ ಪೊಲೀಸರ ವಶಕ್ಕೆ.
ಕರ್ನಾಟಕ ಚುನಾವಣೆಯಲ್ಲಿ ಜನರು ತಮ್ಮ ಕಾಂಗ್ರೆಸ್ ಗ್ಯಾರೆಂಟಿ ಕಾರ್ಡನ್ನು ನಂಬಿದರು. ಈಗ ಅವರು ಮೋಸ ಹೋಗಿದ್ದಾರೆ. ಅದರ ಪರಿಣಾಮವಾಗಿ ನಾವು (ಬಿಜೆಪಿ) 100 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲು ಸಾಧ್ಯವಾಗಲಿಲ್ಲ. ಈ ಸರ್ಕಾರದ ರೈತ ವಿರೋಧಿ, ಜನವಿರೋಧಿ ನೀತಿಗಳು ಮತ್ತು ಭರವಸೆ ನೀಡಿದಂತೆ 24 ಗಂಟೆಗಳಲ್ಲಿ ಐದು ಗ್ಯಾರೆಂಟಿಗಳನ್ನು ಜಾರಿಗೊಳಿಸುವಲ್ಲಿ ವಿಫಲವಾಗಿರುವ ಕಾರಣ ವಿಧಾನಸಭೆಯ ಒಳಗೆ ಮತ್ತು ಹೊರಗೆ ನಾವು ಪ್ರತಿಭಟನೆ ಮಾಡುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.ಪಕ್ಷದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರವು ಇಲ್ಲಿಯವರೆಗೆ ಸಾರ್ವಜನಿಕ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಒಂದೇ ಒಂದು ಗ್ಯಾರೆಂಟಿಯನ್ನು ಜಾರಿಗೆ . ಇದಕ್ಕೂ ಸಾಕಷ್ಟು ಷರತ್ತುಗಳನ್ನು ವಿಧಿಸಿದೆ. ಇದು ಮಹಿಳೆಯರಿಗೆ ಮಾಡಿದ ಅವಮಾನವಾಗಿದೆ.
ಜನತೆಗೆ ದ್ರೋಹ ಬಗೆದಿರುವ ಕಾಂಗ್ರೆಸ್ ಸರ್ಕಾರದ ವಿರುದ್ದ ಪ್ರತಿ ಹಂತದಲ್ಲೂ ಪ್ರತಿಭಟನೆ ಅಥವಾ ಆಂದೋಲನಗಳನ್ನು ಹಮ್ಮಿಕೊಂಡು ತಕ್ಕ ಪಾಠ ಕಲಿಸಬೇಕು ಎಂದಿದ್ದಾರೆ. ವಿಧಾನಸಭೆಯಲ್ಲಿ 66 ಸದಸ್ಯರಿದ್ದಾರೆ, ಅದೇನು ಕಡಿಮೆಯಿಲ್ಲ ಹೀಗಾಗಿ ಸದನದೊಳಗೆ ಹೋರಾಟ ನಡೆಸಬೇಕಿದೆ ಎಂದು ಯಡಿಯೂರಪ್ಪ ಹೇಳಿದ್ದು, ಈ ಹಿಂದೆ ಬಿಜೆಪಿಯೆ ಏಕೈಕೆ ಶಾಸಕನಾಗಿದ್ದಾಗ ಸರ್ಕಾರದ ನೀತಿಗಳ ವಿರುದ್ಧ ಏಕಾಂಗಿಯಾಗಿ ಹೋರಾಟ ಮಾಡಿದ್ದನ್ನು ನೆನಪಿಸಿಕೊಂಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿ ಬಿಬಿಎಂಪಿ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿ ಬಿಬಿಎಂಪಿ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವಂತೆ ಪಕ್ಷದ ಮುಖಂಡರು ಮತ್ತು ಕಾರ್ತಕರ್ತರಿಗೆ ಕರೆ ನೀಡಿದ ಅವರು, ಕಾಂಗ್ರೆಸ್ ಸರ್ಕಾರ ತಮ್ಮ ಗ್ಯಾರೆಂಟಿ ಕಾರ್ಡ್ ಅನ್ನು ಸಂಪೂರ್ಣವಾಗಿ ಜಾರಿಗೆ ತರಲು ಒತ್ತಾಯಿಸಲಿ ಬೀದಿಯಲ್ಲಿ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದಾರೆ. ” ಅಧಿಕಾರಕ್ಕೆ ಬಂದು ಒಂದೂವರೆ ತಿಂಗಳಾಗಿದೆ, ನೀವು (ಕಾಂಗ್ರೆಸ್) ಇನ್ನೂ ದಡ್ಡತನ ಮಾಡುತ್ತಿದ್ದೀರಿ. ಮನೆಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸಲು ನಾನು ನಮ್ಮ ಕಾರ್ಯಕರ್ತರಿಗೆ ಕರೆ ನೀಡುತ್ತೇನೆ” ಎಂದು ತಿಳಿಸಿದ್ದಾರೆ.