ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಹೋರಾಟ ನಡೆಸಲು ಸಜ್ಜಾಗಿದ್ದು, ರಾಜ್ಯಾದ್ಯಂತ ಪ್ರತಿಭಟನೆ ಪ್ರಾರಂಭಿಸಲು ಯೋಜನೆ ರೂಪಿಸಿದೆ. ಬೆಂಗಳೂರು
ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾಹಿತಿ ನೀಡಿದ್ದು, ಏಪ್ರಿಲ್ 2ರಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಅಹೋರಾತರಿ ಧರಣಿ ಆರಂಭಿಸಲಿದೆ ಎಂದು ಹೇಳಿದರು.
ಇದನ್ನೂ ಓದಿ: ಬಿಬಿಎಂಪಿ ಬಜೆಟ್ – ಬಂಡವಾಳಪರ ಯೋಜನೆಗಳಿಗೆ ಅನುದಾನ
ಏ.2 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ನಡೆಸಲಿದೆ. ಬಿಜೆಪಿ ಶಾಸಕರು, ಸಂಸದರು, ಪರಾಜಿತ ಅಭ್ಯರ್ಥಿಗಳು, ಜಿಲ್ಲಾ ಘಟಕದ ಅಧ್ಯಕ್ಷರು ಧರಣಿಯಲ್ಲಿ ಭಾಗಿಯಾಗಲಿದ್ದಾರೆ. ಏ.5ರಿಂದ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿಯೂ ಧರಣಿ ನಡೆಸಲಾಗುವುದು. ರಾಅಜ್ಯ ಸರ್ಕಾರದ ವಿರುದ್ಧ ನಾಲ್ಕು ಹಂತಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಮೂಲಕ ಜನತೆಗೆ ದುಬಾರಿ ಜೀವನ ನಡೆಸುವ ದುಸ್ಥಿತಿಗೆ ತಂದಿದೆ. ಗಾಳಿಯನ್ನು ಬಿಟ್ಟು ಎಲ್ಲದಕ್ಕೂ ಬೆಲೆ ಏರಿಕೆ ಮಾಡಿದೆ. ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಜನಾಂದೋಲನ ನಡೆಸಲಾಗುವುದು ಎಂದು ಹೇಳಿದರು.
ಇದನ್ನೂ ನೋಡಿ: ರಂಗಭೂಮಿ ದಿನ| ಜಲಗಾರ ನಾಟಕ – ರಂಗ ವಿನ್ಯಾಸ ನಿರ್ದೇಶನ – ಮೈಕೋ ಶಿವಶಂಕರ್ Janashakthi Media