ಬೆಂಗಳೂರು : ಕರ್ನಾಟಕ ವಿಧಾನಸಭೆ ಚುಣಾವಣೆಗೆ ಈ ಬಾರಿ ಬಿಜೆಪಿ ಜನರ ಹೆಸರಿನಲ್ಲಿ ‘ಪ್ರಜಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಇಂದು ಮೇ 01 ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.
ಬಿಜೆಪಿ ಪ್ರಣಾಳಿಕೆಯ ಪ್ರಮುಖ ಅಂಶಗಳಿವು :
ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ವಾರ್ಷಿಕ ಮೂರು ಉಚಿತ ಸಿಲಿಂಡರ್ ಗ್ಯಾಸ್ ವಿತರಣೆ (ಯುಗಾದಿ, ಗಣೇಶ ಚತುರ್ಥಿ, ದೀಪಾವಳಿ)
ಪ್ರತಿ ವಾರ್ಡ್‌ಗಳಲ್ಲಿ ಅಟಲ್ ಆಹಾರ ಕೇಂದ್ರ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಉಚಿತ ಹಾಲು, ಪ್ರತಿ ತಿಂಗಳು 5 ಕೆಜಿ ಸಿರಿ ಅನ್ನ, ಸಿರಿ ಧಾನ್ಯ ವಿತರಣೆ ಏಕರೂಪ ನಾಗರಿಕ ಸಹಿತೆ ಜಾರಿ ಮಾಡುತ್ತೇವೆ ಸರ್ವರಿಗೆ ಸೂರು ಯೋಜನೆ, ಒನಕೆ ಓಬವ್ವ ಸಾಮಾಜಿಕ ನ್ಯಾಯನಿಧಿ ಯೋಜನೆ, ವಿಶ್ವೇಶ್ವರಯ್ಯ ವಿದ್ಯಾ ಯೋಜನೆ – ಸರ್ಕಾರಿ ಶಾಲೆಗಳ ಅಭಿವೃದ್ಧಿ, ಮೇಲ್ದರ್ಜೆ ಸಮನ್ವಯ ಯೋಜನೆ -ಎಸ್‌ಎಂಇ ಮತ್ತು ಐಟಿಐ ನಡುವೆ ಸಮನ್ವಯ, ಐಎಎಸ್/ಕೆಎಎಸ್/ಬ್ಯಾಂಕಿಂಗ್/ಸರ್ಕಾರಿ ಉದ್ಯೋಗಕ್ಕಾಗಿ ತರಬೇತಿ ಪಡೆಯುವ ವಿದ್ಯಾರ್ಥಿಗಳಿಗೆ ಧನಸಹಾಯ
ಮಿಷನ್ ಸ್ವಾಸ್ತ್ಯ ಕರ್ನಾಟಕದ ಅಡಿಯಲ್ಲಿ ಆರೋಗ್ಯ ಕ್ಷೇತ್ರದ ಅಭಿವೃದ್ಧಿ, ಹಿರಿಯ ನಾಗರೀಕರಿಗೆ ವಾರ್ಷಿಕ ಉಚಿತ ಮಾಸ್ಟರ್ ಹೆಲ್ತ್ ಚೆಕಪ್, ಮುಂದಿನ ತಲೆಮಾರಿಗೆ ಬೆಂಗಳೂರಿನ ಅಭಿವೃದ್ಧಿ, ವಿದ್ಯುನ್ಮಾನ ವಾಹನಗಳ ಹಬ್ ಆಗಿ ಕರ್ನಾಟಕ ಪರಿವರ್ತನೆ, 30 ಸಾವಿರ ಕೋಟಿ ರೂ. ಕೆ ಅಗ್ರಿ ಫಂಡ್ ಸ್ಥಾಪನೆ
ಕಲ್ಯಾಣ ಸರ್ಕ್ಯೂಟ್, ಬನವಾಸಿ ಸರ್ಕ್ಯೂಟ್, ಪರಶುರಾಮ ಸರ್ಕ್ಯೂಟ್, ಕಾವೇರಿ ಸರ್ಕ್ಯೂಟ್, ಗಂಗಾಪುರ ಕಾರಿಡಾರ್ ನಿರ್ಮಾಣಕ್ಕೆ 1500 ಕೋಟಿ ರೂ.
ಬೆಂಗಳೂರು ಹೊರತು ಪಡಿಸಿ 10 ಲಕ್ಷ ಉದ್ಯೋಗಗಳ ಸೃಷ್ಟಿ ಅಪಾರ್ಟ್‌ಮೆಂಟ್ ಓನರ್‌ಶಿಫ್ ಆಕ್ಟ್ ತಿದ್ದುಪಡಿಭ ರವಸೆ