ಅಹಮದಾಬಾದ್: ಗುಜರಾತ್ ಬಿಜೆಪಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಮನ್ಸುಖ್ ವಾಸವ ಪಕ್ಷಕ್ಕೆ ರಾಜೀನಾಮೇ ನೀಡಿದ್ದಾರೆ. ಅಲ್ಲದೆ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಲೋಕಸಭೆ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಹೇಳಿರುವುದು ಗುಜರಾತಿನಲ್ಲಿ ಬಿಜೆಪಿಗೆ ಶಾಕ್ ನೀಡಿದ್ದಾರೆ.
ನರ್ಮದಾ ಜಿಲ್ಲೆಯ 121 ಗ್ರಾಮಗಳನ್ನು “ಪರಿಸರ ಸೂಕ್ಷ್ಮ ವಲಯ” ಎಂದು ಘೋಷಿಸುವ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಇತ್ತೀಚೆಗೆ ಅಧಿಸೂಚನೆ ಹೊರಡಿಸಿದ್ದು, ಅಧಿಸೂಚನೆಯನ್ನು ಹಿಂಪಡೆಯಬೇಕೆಂದು ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳೆದ ವಾರ ಪತ್ರ ಬರೆದಿದ್ದರು.
ಬಿಜೆಪಿ ಅಧ್ಯಕ್ಷ ಸಿ.ಆರ್.ಪಾಟೀಲ್ ಅವರಿಗೆ ಬರೆದ ಪತ್ರದಲ್ಲಿ, ಮನ್ಸುಖ್ ಅವರು ‘ನಾನು ನಿಭಾಯಿಸಲ್ಲದಿಕ್ಕಿಂತ ಹೆಚ್ಚಿನದನ್ನು ಹೆಚ್ಚಿನದನ್ನು ಪಕ್ಷವು ನೀಡಿತ್ತು, ಪಕ್ಷದ ವರ್ಚಸ್ಸಿಗೆ ಹಾನಿಯಾಗಬಾರದೆಂದು ನಾನು ಪಕ್ಷಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ, ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ, ನನ್ನನು ಕ್ಷಮಿಸಿ’ ಎಂದು ಮನವಿ ಮಾಡಿದ್ದಾರೆ.
ಜೊತೆಗೆ ಮುಂಬರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಲೋಕಸಭಾ ಸ್ಪೀಕರ್ ಅವರನ್ನು ಭೇಟಿಯಾದ ನಂತರ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮನ್ಸುಖ್ ವಾಸವ ಪತ್ರದಲ್ಲಿ ಹೇಳಿದ್ದಾರೆ.