ಶಿವಮೊಗ್ಗ: ಮುಡಾ ಹಗರಣ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪಾದಯಾತ್ರೆ ಮಾಡುತ್ತಿರುವ ಬಿಜೆಪಿಗೆ ಟಾಂಗ್ ಕೊಟ್ಟಿರುವ ಬೃಹತ್ ಕೈಗಾರಿಕ ಸಚಿವ ಎಂ.ಬಿ ಪಾಟೀಲ್ , ಬಿಜೆಪಿಯವರು ಮೊದಲು ಯತ್ನಾಳ್ ಆರೋಪಕ್ಕೆ ಉತ್ತರ ಕೊಡಲಿ ಎಂದಿದ್ದಾರೆ
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್ , ಬಿಎಸ್ ಯಡಿಯೂರಪ್ಪ ವಿರುದ್ದ ಅವರ ಪಕ್ಷದ ಶಾಸಕರೇ ಆದ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಮಾಡಿದ್ದಾರೆ. ವಿಜಯೇಂದ್ರ ಮಾರಿಷಸ್ ಗೆ 10 ಸಾವಿರ ಕೋಟಿ ತೆಗೆದುಕೊಂಡು ಹೋಗಿದ್ದಾರೆ ಎಂದು ಆರೋಪ ಮಾಡ್ತಾರೆ. ಅಲ್ಲದೆ ಕೋವಿಡ್ ವೇಳೆ ಎರಡು ಸಾವಿರ ಕೋಟಿ ಹಗರಣ ಆಗಿದೆ. ಯಡಿಯೂರಪ್ಪ, ಸುಧಾಕರ್ ಹಗರಣ ಮಾಡಿದ್ದಾರೆ ಎಂದು ಯತ್ನಾಳ್ ಆರೋಪಿಸಿದ್ದಾರೆ. ಹೀಗಾಗಿ ಬಿಜೆಪಿ ಮೊದಲು ಯತ್ನಾಳ್ ಆರೋಪಕ್ಕೆ ಮೊದಲು ಉತ್ತರ ಕೊಡಲಿ ನಂತರ ಮುಡಾ ಹಗರಣದ ಬಗ್ಗೆ ಮಾತನಾಡಲಿ ಎಂದು ತಿರುಗೇಟು ಕೊಟ್ಟರು.
ಇದನ್ನೂ ಓದಿ: ಬೆಂಗಳೂರಿನಿಂದ ಕೋಲ್ಕತಾಗೆ ರೈಲು ಟಿಕೆಟ್ ದರ ಬರೋಬ್ಬರಿ 10,100 ರೂಪಾಯಿ; ಬೆಚ್ಚಿ ಬಿದ್ದ ಪ್ರಯಾಣಿಕ
ಮುಡಾ ಹಗರಣ ಬಿಜೆಪಿ ಪಾದಯಾತ್ರೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಹಗರಣ ಮಾಡಿಲ್ಲ. ಬಿಜೆಪಿಯವರು ವಿನಾ ಕಾರಣ ಹೋರಾಟ ಮಾಡುತ್ತಿದ್ದಾರೆ, 40 ವರ್ಷದ ರಾಜಕಾರಣದಲ್ಲಿ ಸಿದ್ದರಾಮಯ್ಯ ಮೇಲೆ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ದೇವರಾಜ್ ಅರಸು ನಂತರ ಒಬಿಸಿ ಸಮುದಾಯದ ಸಿದ್ಧರಾಮಯ್ಯ ಸಿಎಂ ಆಗಿದ್ದಾರೆ, ಬಿಜೆಪಿಯವರಿಗೆ ಇದು ಸಹಿಸಲಾಗುತ್ತಿಲ್ಲ, ರಾಜ್ಯಪಾಲರನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದರು.
ಭದ್ರಾವತಿ ವಿಐಎಸ್ ಎಲ್ ಕಾರ್ಖಾನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ವಿಎಸ್ ಐಎಲ್ ಕಾರ್ಖಾನೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಎಲ್ಲವೂ ಸರಿ ಹೋಗುವ ನಿರೀಕ್ಷೆಯಿದೆ ಎಂದರು.
ಇದನ್ನೂ ನೋಡಿ: ಕೆಲಸದ ಅವಧಿ ವಿಸ್ತರಣೆ ಪ್ರಸ್ತಾಪದ ವಿರುದ್ಧ ಐಟಿ ಉದ್ಯೋಗಿಗಳ ಪ್ರತಿಭಟನೆJanashakthi Media