ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅಧಿಕಾರ ಸ್ವೀಕಾರ| ಕೆಲವು ನಾಯಕರು ಗೈರು

ಬೆಂಗಳೂರು:ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ರಾಜ್ಯ ಬಿಜೆಪಿಯಲ್ಲಿ ಈಗ ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿಯ ಶಕ್ತಿ ಕೇಂದ್ರ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಜಗನ್ನಾಥ ಭವನದಲ್ಲಿ ಹಲವಾರು ಬಿಜೆಪಿ ಘಟನುಘಟಿ ನಾಯಕರ ಗೈರು ಹಾಜರಿಯೊಂದಿಗೆ ಬಿಜೆಪಿಯ ನೂತನ ರಾಜಾಧ್ಯಾಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಪುತ್ರ ಶಿಕಾರಿಪುರ ಕ್ಷೇತ್ರದ ಶಾಸಕ, ಯುವ ನಾಯಕ ಬಿ ವೈ ವಿಜಯೇಂದ್ರ ಅವರು ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ. ರಾಜ್ಯಾಧ್ಯಕ್ಷರಾಗಿ

ರಾಜ್ಯ ಬಿಜೆಪಿಯ ಹಿರಿಯ ನಾಯಕರು, ಸಂಸದರು, ಶಾಸಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿಜಯೇಂದ್ರ ಅವರಿಗೆ ಕೇಸರಿ ಶಾಲು ತೊಡಿಸಿ ಸನ್ಮಾನಿಸಿ ಅಧಿಕಾರ ಹಸ್ತಾಂತರ ಮಾಡಿದರು.

ಇದನ್ನೂ ಓದಿ:ಬಿ ವೈ ವಿಜಯೇಂದ್ರ ಅಧಿಕಾರ ಸ್ವೀಕಾರ ಸಮಾರಂಭ| ಕಮಲ ಪಾಳಯದಲ್ಲಿ ಸಂಭ್ರಮ, ಹಲವು ನಾಯಕರಿಗೆ ಆಹ್ವಾನ

ಇದಕ್ಕೂ ಮುನ್ನ ವಿಜಯೇಂದ್ರ ಅವರು ತಂದೆ ಯಡಿಯೂರಪ್ಪನವರ ಕಾಲಿಗೆ ನಮಸ್ಕರಿಸಿ ಬಿಜೆಪಿ ಕಚೇರಿಯಲ್ಲಿ ಹೋಮ,ಹವನ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿಯಾದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಕೆ ಎಸ್ ಈಶ್ವರಪ್ಪ, ಆರ್ ಅಶೋಕ್, ಬಸವರಾಜ ಬೊಮ್ಮಾಯಿ, ವಿ ಗೋಪಾಲಯ್ಯ, ಆದರ ಜ್ಞಾನೇಂದ್ರ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಯಡಿಯೂರಪ್ಪ ಬಣದವರಿಗೆ ಇಂದು ಹಬ್ಬದ ಸಂಭ್ರಮವಿದೆ.

ಪಕ್ಷ ಸಂಘಟನೆಗಾಗಿ ನಾವೆಲ್ಲ ವಿಜಯೇಂದ್ರ ಜತೆ ಇರುತ್ತೇವೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ಎಸ್​.ಆರ್.ವಿಶ್ವನಾಥ್​ ತಿಳಿಸಿದರು. ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳನ್ನೂ ಗೆಲ್ಲಲು ಸಿದ್ಧತೆ ನಡೆದಿದೆ. ಈಗಾಗಲೇ ಬಿ.ವೈ.ವಿಜಯೇಂದ್ರ ಪ್ರವಾಸ ಶುರು ಮಾಡಿದ್ದಾರೆ. ನಾವೆಲ್ಲ ಉತ್ಸಾಹದಿಂದ ಅವರ ಜತೆ ಕೆಲಸ ಮಾಡಲು ಸಿದ್ಧರಿದ್ದೇವೆ ಎಂದರು. ರಾಜ್ಯಾಧ್ಯಕ್ಷರಾಗಿ

ಕೆಲವರು ಗೈರು: ಬಿಜೆಪಿಯಲ್ಲಿ ಪ್ರಮುಖ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಅಸಮಾಧಾನಿತರು ಎಂದು ಗುರುತಿಸಿಕೊಂಡಿರುವ ವಿ ಸೋಮಣ್ಣ, ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ. ನೂತನ ಅಧ್ಯಕ್ಷರಾದ ಬಿವೈ ವಿಜಯೇಂದ್ರರ ಪದಗ್ರಹಣ ಕಾರ್ಯಕ್ರಮಕ್ಕೆ ಹಿರಿಯ ಬಿಜೆಪಿ ನಾಯಕರಾದ ಆರ್‌. ಅಶೋಕ್‌, ಅಶ್ವಥ್‌ ನಾರಾಯಣ, ಸಿಟಿ ರವಿ, ವಿ. ಸೋಮಣ್ಣ, ಅರವಿಂದ ಬೆಲ್ಲದ್‌, ಬಸನಗೌಡ ಪಾಟೀಲ್‌ ಯತ್ನಾಳ್‌, ಅರವಿಂದ ಲಿಂಬಾಳಿ, ಎಸ್‌ಟಿ ಸೋಮಶೇಖರ್‌, ಡಾ.ಕೆ. ಸುಧಾಕರ್‌ ಮುಂತಾದ ಹಿರಿಯ ನಾಯಕರು ಗೈರಾಗಿದ್ದರು. ಮಧ್ಯ ಪ್ರದೇಶ ಚುನಾವಣೆ ಪ್ರಚಾರದಲ್ಲಿರುವ ಸಿ ಟಿ ರವಿಯವರು ಅಲ್ಲಿಂದಲೇ ವಿಜಯೇಂದ್ರ ಅವರಿಗೆ ಶುಭಕೋರಿದ್ದಾರೆ. ರಾಜ್ಯಾಧ್ಯಕ್ಷರಾಗಿ

ವಿಡಿಯೋ ನೋಡಿ:ನ್ಯಾಯ ಕೇಳಿದ ಕಾರ್ಮಿಕರನ್ನು ಕೂಡಿ ಹಾಕಿದ ಬಾಲಾಜಿ ಗಾರ್ಮೆಂಟ್ಸ್ ವಿರುದ್ಧ ಆಕ್ರೋಶ Janashakthi Media

Donate Janashakthi Media

Leave a Reply

Your email address will not be published. Required fields are marked *