ಅನೇಕಲ್ | ಫೇಸ್​ಬುಕ್‌ನಲ್ಲಿ ವಿಡಿಯೋ ಪೋಸ್ಟ್‌ ಮಾಡಿ ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತ

Please follow and like us:
ಆನೇಕಲ್‌ :  ಬಿಜೆಪಿ ಕಾರ್ಯಕರ್ತನೊಬ್ಬ ಫೇಸ್ಬುಕ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್  ಪಟ್ಟಣದ ಖಾಸಗಿ ಶಾಲೆ ಬಳಿ ನಡೆದಿದೆ. ಅನೇಕಲ್

ಆನೇಕಲ್ ಸಮಂದೂರು ಮೂಲದ ಪ್ರವೀಣ್ ಬೇಲೂರು ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತ. ಫೇಸ್ಬುಕ್‌ನಲ್ಲಿ ವಿಡಿಯೋ ಪೋಸ್ಟ್ ಮಾಡುವ ಮೂಲಕ ಸಾವಿಗೆ ಕಾರಣ ಏನು ಅನ್ನೋದನ್ನ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಕಳೆದ ಎರಡು ತಿಂಗಳಿನಿಂದ ಮಾನಸಿಕವಾಗಿ ನೊಂದಿದ್ದೇನೆ. ನನ್ನ ಸಾವಿಗೆ ಕೆಲವರು ನೇರ ಕಾರಣರಾಗಿದ್ದಾರೆ. ಸಮಂದರ್ ಕಿರಣ್, ಗೋಕುಲ್ ಫ್ಯಾಷನ್ ಹರೀಶ್, ಭಾಸ್ಕರ್ ನಾರಾಯಣಪ್ಪ, ದೊಡ್ಡಹಾಗಡೆ ಮಧುಗೌಡ ಜೊತೆಗೆ ಸರವಣ ಇವರೆಲ್ಲಾ ನನ್ನ ಸಾವಿಗೆ ಕಾರಣಕರ್ತರು ಎಂದು ವೀಡಿಯೋದಲ್ಲಿ ಆರೋಪಿಸಿದ್ದಾರೆ.

ಪೊಲೀಸರು, ಯಾರನ್ನೂ ಬಿಟ್ಟರೂ ಕಿರಣ್ ಗೌಡನನ್ನು ದಯವಿಟ್ಟು ಬಿಡಬೇಡಿ. ಕಿರಣ್ ತುಂಬಾ ಹೆಣ್ಣುಮಕ್ಕಳಿಗೆ ಫೋನ್ ಮಾಡಿ ಟಾರ್ಚರ್ ಕೊಡುತ್ತಾನೆ. ಇವನು ಮಾಡಿರುವ ಇಂತಹ ಕೆಲಸಗಳೆಲ್ಲಾ ನನ್ನ ಮೇಲೆ ಬಂದಿದೆ ಎಂದಿದ್ದಾರೆ.

ಇದನ್ನೂ ಓದಿ : ಮಂಜೂರಾದ ಹುದ್ದೆಯಲ್ಲಿ 10 ವರ್ಷ ನಿರಂತರ ಕೆಲಸ ; ಕಾರ್ಯನಿರ್ವಹಿಸಿದ ಉದ್ಯೋಗಿ ಕಾಯಂಗೆ ಅರ್ಹ: ಹೈಕೋರ್ಟ್‌ ಬಿಜೆಪಿ ಕಾರ್ಯಕರ್ತ

ಹಣದ ಮಾತುಕತೆಗೆ ಕರೆದು ಹಲ್ಲೆ ನಡೆಸಿರುವ ಬಗ್ಗೆಯೂ ವಿಡಿಯೋದಲ್ಲಿ ಆರೋಪಿಸಿದ್ದಾರೆ. ಆನೇಕಲ್ ಬಿಜೆಪಿ ಮಂಡಲದ ಅಧ್ಯಕ್ಷ ನಾಯನಹಳ್ಳಿ ಮುನಿರಾಜು ಗೌಡ ಅವರು ಹಣದ ಮಾತುಕತೆಗೆ ಮನೆ ಕರೆದಿದ್ದರು. ಆ ವೇಳೆ ಅಲ್ಲಿ ಆನೇಕಲ್ ಕೌನ್ಸಿಲರ್ ಭಾಗ್ಯಮ್ಮ ಮತ್ತು ಅವರ ಪತಿ ಶ್ರೀನಿವಾಸ್ ಸಹ ಇದ್ದರು. ಭಾಗ್ಯಮ್ಮ ಶ್ರೀನಿವಾಸ್ ಏಕಾಏಕಿ ಹತ್ತಾರು ಮಂದಿಯನ್ನ ಕರೆಸಿ, ಮೊಬೈಲ್ ಕಿತ್ತುಕೊಂಡು 2 ಗಂಟೆಗಳ ಕಾಲ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ನಾನು ಸತ್ತ ಮೇಲೆ ನನ್ನ ದೇಹದ ಮೇಲಿರುವ ಗಾಯದ ಗುರುತನ್ನ ಪರಿಶೀಲಿಸಬೇಕು. ಪೊಲೀಸರು ನ್ಯಾಯ ದೊರಕಿಸಿ ಕೊಡಬೇಕೆಂದು ಮನವಿ ಮಾಡಿಕೊಂಡು, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ವಿಡಿಯೋವನ್ನ ಫೇಸ್ಬುಕ್‌ನಲ್ಲಿ ಪೋಸ್ಟ್ ಮಾಡಿ, ನೇಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ನೋಡಿ : “ಛಾವಾ” ಸಿನಿಮಾದಲ್ಲಿನ ಸುಳ್ಳುಗಳು! Janashakthi Mediaಅನೇಕಲ್ 

 

Please follow and like us:
Donate Janashakthi Media

Leave a Reply

Your email address will not be published. Required fields are marked *