ಬೆಳಗಾವಿ: ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಕೇಂದ್ರ ಸರ್ಕಾರ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸರ್ಕಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡುವಾಗ ಕಪ್ಪು ಪಟ್ಟಿ ಪ್ರದರ್ಶಿಸಿ, ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ವೇದಿಕೆ ಹತ್ತಿರ ನುಗ್ಗಲು ಯತ್ನಿಸಿದರು. ವಿರುದ್ಧ
ನಗರದ ಸಿಪಿಎಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದ ವೇಳೆ ವೇದಿಕೆ ಬಳಿ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತೆಯರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ಸಿದ್ದರಾಮಯ್ಯ ಗೋ ಬ್ಯಾಕ್ ಪಾಕಿಸ್ತಾನ್ ಎಂದು ಘೋಷಣೆ ಕೂಗುತ್ತ ಕಾರ್ಯಕ್ರಮದ ಕಡೆಗೆ ಕಾರ್ಯಕರ್ತೆಯರು ಬಂದಾಗ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಕೂಡಲೇ ಪೊಲೀಸರು ಐವರು ಮಹಿಳೆಯರನ್ನು ವಶಕ್ಕೆ ಪಡೆದುಕೊಂಡರು.
ಇದನ್ನೂ ಓದಿ: ಸರ್ಕಾರಿ ಗೌರವಗಳೊಂದಿಗೆ ಮುಖ್ಯಸ್ಥ ಡಾ. ಕೆ. ಕಸ್ತೂರಿರಂಗನ್ ರ ಅಂತ್ಯಕ್ರಿಯೆ
ಈ ವೇಳೆ ಭಾಷಣ ನಿಲ್ಲಿಸಿದ ಸಿದ್ದರಾಮಯ್ಯ, ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಂತರ ಭಾಷಣ ಮುಂದುವರಿಸಿ, ಇಂಥ ಬಿಜೆಪಿಯ ಪ್ರತಿಭಟನೆ, ಅಪಪ್ರಚಾರಕ್ಕೆ ನಾವು ಹೆದರುವುದಿಲ್ಲ ಎಂದು ತಿರುಗೇಟು ನೀಡಿದರು.
ಕೂಡಲೇ ವೇದಿಕೆಯಿಂದ ಕೆಳಗೆ ಇಳಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಹೋದರು. ಅಷ್ಟರೊಳಗೆ ಮಹಿಳಾ ಕಾರ್ಯಕರ್ತೆಯರನ್ನು ವಾಹನದಲ್ಲಿ ಕರೆದೊಯ್ಯಲಾಗಿತ್ತು. ಸಚಿವೆ ಹೆಬ್ಬಾಳಕರ, ಡಿಸಿಪಿ ರೋಹನ್ ಜಗದೀಶ ಸೇರಿದಂತೆ ಇತರೆ ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಇದನ್ನೂ ನೋಡಿ: ಪಹಲ್ಗಾಂಮ್ ಹತ್ಯಾಕಾಂಡ| ಕುಟುಂಬದವರನ್ನು ಕಳೆದುಕೊಂಡವರ ಪ್ರಶ್ನೆಗಳಿಗೆ ಉತ್ತರಿಸುವಿರಾ? Janashakthi Media