ಬಳ್ಳಾರಿ: 7 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದ್ದು, ಬಿಜೆಪಿ ಯುವ ಮುಖಂಡನನ್ನು ಬಂಧಿಸಲಾಗಿದ್ದು, ಈ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನಲ್ಲಿ ನಡೆದಿದೆ. ಅಪ್ರಾಪ್ತ
ಇದನ್ನೂ ಓದಿ:ಮೇ 20ರಂದು ದೇಶವ್ಯಾಪಿ ಸಾರ್ವತ್ರಿಕ ಮುಷ್ಕರ – ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದು ಮಾಡಿ- ಐಎಲ್‍ಸಿ ಆಯೋಜಿಸಿ
ಬಿಜೆಪಿ ಯುವ ಮುಖಂಡ ದೇವು ನಾಯಕ, ಓರ್ವ ಮಹಿಳೆ ಸಹಾಯದಿಂದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಸದ್ಯ ಆತನನ್ನು ವಿಚಾರಣೆಗೊಳಪಡಿಸಲಾಗಿದೆ
ದೇವು ನಾಯಕ ಮುಂಬರುವ ಸ್ಥಳೀಯ ಚುನಾವಣೆಗಳಲ್ಲಿ ಜಿಲ್ಲಾ ಪಂಚಾಯಿತಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಈ ಬಗ್ಗೆ ರಾಜ್ಯದ ಹಿರಿಯ ನಾಯಕರನ್ನು ಸಂಪರ್ಕ ಮಾಡಿ ಟಿಕೆಟ್‌ಗಾಗಿ ಭಾರೀ ಲಾಬಿ ನಡೆಸುತ್ತಿದ್ದನು. ಜೊತೆಗೆ, ಬಿಜೆಪಿ ಸೋಷಿಯಲ್ ಮೀಡಿಯಾ ಹ್ಯಾಂಡಲ್ ಮಾಡುತ್ತಿದ್ದಾರೆ. ಆರೋಪಿ ದೇವು ನಾಯಕ ತನ್ನ ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ಮುಖಂಡರ ಜೊತೆಗೆ ಇರೋ ಪೋಟೋ ಹಂಚಿಕೊಂಡಿದ್ದು, ತಾನೊಬ್ಬ ದೊಡ್ಡ ನಾಯಕ ಎಂದು ಬಿಂಬಿಸಿಕೊಳ್ಳುತ್ತಿದ್ದನು.
ಇನ್ನು ಘಟನೆಯ ಬೆನ್ನಲ್ಲಿಯೇ ಸಂತ್ರಸ್ತ ಬಾಲಕಿಯ ಕುಟುಂಬಸ್ಥರು ಸಿರಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ದಾಖಲಾದ ಬೆನ್ನಲ್ಲಿಯೇ ಸಿರಿಗೇರಿ ಠಾಣೆ ಪೊಲೀಸರು ಬಿಜೆಪಿ ಮುಖಂಡನನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಜೊತೆಗೆ, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ತನಿಖೆ ಮುಂದುವರೆಸಿದ್ದಾರೆ.