ವಲಸೆ ಕಾರ್ಮಿಕರ ಬಗ್ಗೆ ಸುಳ್ಳು ಹೇಳಿಕೆ; ತಮಿಳುನಾಡಿನಲ್ಲಿ ಬಿಜೆಪಿ ನಾಯಕನ ವಿರುದ್ಧ ಪ್ರಕರಣ

ಚೆನ್ನೈ: ಪ್ರದೇಶ ಮತ್ತು ಭಾಷೆಯ ಆಧಾರದ ಮೇಲೆ ಜನರ ನಡುವೆ ದ್ವೇಷವನ್ನು ಸೃಷ್ಟಿಸಿದ ಆರೋಪದ ಮೇಲೆ ತಮಿಳುನಾಡು ಪೊಲೀಸರು ಬಿಜೆಪಿ ನಾಯಕನ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ.

ಉತ್ತರ ಪ್ರದೇಶ ಬಿಜೆಪಿ ಘಟಕದ ವಕ್ತಾರ ಪ್ರಶಾಂತ್ ಉಮ್ರಾವ್ ಬಿಹಾರದ 12 ವಲಸಿಗರನ್ನು ತಮಿಳುನಾಡಿನಲ್ಲಿ ನೇಣು ಬಿಗಿದು ಹತ್ಯೆ ಮಾಡಲಾಗಿದೆ ಎಂದು ಸುಳ್ಳು ಆರೋಪ ಮಾಡಿ ವಿವಾದಕ್ಕೆ ಕಾರಣರಾಗಿದ್ದಾರೆ. ಇದೀಗ ಬಿಜೆಪಿ ನಾಯಕನ ವಿರುದ್ಧ ತಮಿಳುನಾಡು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರೊಂದಿಗೆ ಇರುವ ಫೋಟೋವನ್ನು ಹಂಚಿಕೊಂಡಿರುವ ಪ್ರಶಾಂತ್‌ ಉಮ್ರಾವ್‌

ಬಿಹಾರದ ವಲಸೆ ಕಾರ್ಮಿಕರ ಹತ್ಯೆ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ವದಂತಿಗಳನ್ನು ಹರಡಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ.

ವಲಸೆ ಕಾರ್ಮಿಕರು ಭಯಪಡಬೇಡಿ ಎಂದು ತಮಿಳುನಾಡಿನ ಜಿಲ್ಲಾಧಿಕಾರಿಗಳು ಹಿಂದಿಯಲ್ಲಿ ಮನವಿ ಮಾಡಿದ್ದಾರೆ. ವಲಸೆ ಕಾರ್ಮಿಕರ ಮೇಲಿನ ದಾಳಿಯ ಬಗ್ಗೆ ವದಂತಿಗಳನ್ನು ಪರಿಶೀಲಿಸಲು ಎರಡೂ ರಾಜ್ಯಗಳ ಪೊಲೀಸರು ಸಾಮಾಜಿಕ ಮಾಧ್ಯಮಗಳ ಮೇಲೆ ನಿಕಟವಾಗಿ ಕಣ್ಣಿಟ್ಟಿದ್ದಾರೆ.

ತಮಿಳುನಾಡಿನಲ್ಲಿ ಬಿಹಾರ ಮೂಲದ ಕಾರ್ಮಿಕರಿಗೆ ಥಳಿಸಿಲಾಗಿದೆ. ಈ ಪ್ರಕರಣದಲ್ಲಿ ಬಿಹಾರ ಸರ್ಕಾರ ತನಿಖೆ ನಡೆಸಲು ತಮಿಳುನಾಡಿಗೆ ತಂಡವನ್ನು ಕಳುಹಿಸಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಒಪ್ಪಿಗೆ ಸೂಚಿಸಿದ್ದಾರೆ, ಬಿಹಾರದಿಂದ ವಲಸೆ ಹೋಗಿರುವ ಕಾರ್ಮಿಕರಿಗೆ ತಮಿಳುನಾಡಿನಲ್ಲಿ ಥಳಿಸಿ, ಹತ್ಯೆ ಮಾಡಲಾಗಿದೆ ಎನ್ನುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ ಇದು ಸುಳ್ಳು ಸುದ್ದಿ ಎಂದು ತಮಿಳುನಾಡು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *