ಬೆಂಗಳೂರು: ಲೋಕಸಭಾ ಚುನಾವಣೆಯ ಕಾವಿನ ಹೊತ್ತಿನಲ್ಲಿಯೇ ಇನ್ನಷ್ಟು ಝಳ ಮೂಡಿಸಿ ಎಲ್ಲೆಡೆ ವ್ಯಾಪಕ ಟೀಕೆ, ಪ್ರತಿಭಟನೆಗೆ ಮುಂದಾಗಿರುವ, ಎಫ್‌ಐಆರ್ ದಾಖಲಾಗಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದ ಕುರಿತು ಇನ್ನೂ ಬಿಜೆಪಿ ಪಾಳಯ ತನ್ನ ಮೌನ ಮುರಿದಿಲ್ಲ.
ಮೊನ್ನೆಯಷ್ಟೇ ಜಿಲ್ಲೆಯ ಹೆಸರನ್ನಾಗಲೀ, ಪ್ರಕರಣದ ಪ್ರಸ್ತಾಪವನ್ನಾಗಲೀ ಮಾಡದೇ, ಆರೋಪಿಯ ಹೆಸರನ್ನೂ ಸಹ ಉಲ್ಲೇಖಿಸದೇ ಮೇಲ್ನೋಟಕ್ಕೆ “ಉಪ್ಪು ತಿಂದವರು ನೀರು ಕುಡಿಯಲೇಬೇಕೆಂಬ” ಎನ್ಡಿಎ ಒಕ್ಕೂಟಕ್ಕೆ ಸೇರಿರುವ ಜೆಡಿಎಸ್‌ನ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆಯನ್ನೇ ಸದ್ಯಕ್ಕೆ ಕಮಲ ಸಮರ್ಥಿಸಿಕೊಂಡಂತಿದೆ.
ಇದನ್ನೂ ಓದಿ: ಬೆಂಗಳೂರು ಕುದಿಯುತ್ತಲೇ ಇದೆ: ನಗರದಲ್ಲಿ 38 ಡಿಗ್ರಿ ಸೆಲ್ಸಿಯಸ್ ತಾಪಮಾನ
ಹೌದು, ಪ್ರಜ್ವಲ್ ರೇವಣ್ಣ ಪ್ರಕರಣ ಕುರಿತು ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವ ಪ್ರತಿಪಕ್ಷ ನಾಯಕ ಆರ್. ಅಶೋಕ್, ಈ ಕುರಿತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟ ಹೇಳಿಕೆ ನೀಡಿದ್ದಾರೆ. ಕಾನೂನಿನಡಿ ಎಲ್ಲರೂ ಸಮಾನರು. ಸರ್ಕಾರ ತನಿಖೆ ಮಾಡಲು ತಂಡ ರಚಿಸಿದ್ದು, ತೀರ್ಪು ಬಂದ ನಂತರ ಸರ್ಕಾರ ಕ್ರಮ ವಹಿಸಲಿದೆ ಎಂದಷ್ಟೇ ಹೇಳಿಕೆಯನ್ನು ನೀಡಿದ್ದಾರೆ. ಇನ್ನು ಪ್ರಜ್ವಲ್ ರೇವಣ್ಣ ನಮ್ಮ ಕುಟುಂಬಕ್ಕೆ ಸೇರಿದವನಲ್ಲ ಎಂದಿದ್ದಾರೆ.
ಇದನ್ನೂ ನೋಡಿ: ಶಿವಮೊಗ್ಗ ಲೋಕಸಭಾ ಕ್ಷೇತ್ರ : ಬಿಜೆಪಿ ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ, ಯಾರ ಮತಬುಟ್ಟಿಗೆ ಕೈ ಹಾಕ್ತಾರೆ ಈಶ್ವರಪ್ಪ?