ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಆಯ್ಕೆಯನ್ನು ಸದನದಲ್ಲಿ ಔಪಚಾರಿಕವಾಗಿ ಘೋಷಿಸಲಾಗಿದೆ. ನೂತನ ಸ್ಪೀಕರ್ ಆಗಿ ಬಿಜೆಪಿಯ ರಾಹುಲ್ ನಾರ್ವೇಕರ್ ಆಯ್ಕೆಯಾಗಿದ್ದಾರೆ.
ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ (ಎಂವಿಎ) ಪಕ್ಷಗಳು ನಾಮಪತ್ರ ಸಲ್ಲಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾದರು.
ಇದನ್ನೂ ಓದಿ: ಪ್ಯಾಲೆಸ್ಟೀನ್ ಮಕ್ಕಳು | ಕನ್ನಡಕ್ಕೆ ಬಂದ ಘಸ್ಸಾನ್ ಕನಫಾನಿ
ಮೂರು ದಿನಗಳ ವಿಶೇಷ ಅಧಿವೇಶನದ ಕೊನೆಯ ದಿನವಾದ ಇಂದು ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕ ಸ್ಥಾನ ಮತ್ತು ಉಪ ಸಭಾಪತಿ ಸ್ಥಾನವನ್ನು ಪ್ರತಿಪಕ್ಷ ಎಂವಿಎ ಕೋರಿದೆ.
ಈ ಮಧ್ಯೆ ದೇವೇಂದ್ರ ಫಡ್ನವೀಸ್ ನೇತೃತ್ವದ ಸರ್ಕಾರ ಡಿಸೆಂಬರ್ 11 ರಂದು ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆಯಿದೆ.
ಇದನ್ನೂ ನೋಡಿ: ಅಗ್ಘಣಿ ಮೀಸಲಾಗಬೇಕೆಂಬುದು ಶೀಲವೆ ? Janashakthi Media