ನವದೆಹಲಿ: ಸದ್ಯದ ಮಾಹಿತಿಯಂತೆ ಸಮಾಜವಾದಿ ಪಕ್ಷವು 34 ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್ ಎಂಟು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ ಸದ್ಯ 35 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಅಮೇಥಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಗಿಂತ ಹಿನ್ನಡೆ ಅನುಭವಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಾರಣಾಸಿಯಲ್ಲಿ 23,635 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಅಯೋಧ್ಯೆ
ಇದನ್ನೂ ಓದಿ: ಅಯೋಧ್ಯೆಯಲ್ಲಿ ಹಿನ್ನಡೆ ಕಂಡ ಎನ್‌ಡಿಎ
ದೇಶದಲ್ಲಿಯೇ ಅತಿ ಹೆಚ್ಚು (80) ಕ್ಷೇತ್ರಗಳನ್ನು ಹೊಂದಿರುವ ರಾಜ್ಯ ಉತ್ತರ ಪ್ರದೇಶ. ಇಲ್ಲಿ ಗೆದ್ದವರು ಕೇಂದ್ರದಲ್ಲಿ ಆಡಳಿತ ಚುಕ್ಕಾಣಿ ಹಿಡಿಯುತ್ತಾರೆ ಎಂದೇ ಹೇಳಲಾಗುತ್ತದೆ. 2019ರ ಚುನಾವಣೆಯಲ್ಲಿ ರಾಜ್ಯದಲ್ಲಿ ಎನ್‌ಡಿಎ 62 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಆದರೆ, ಈ ಬಾರಿ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ ಕಳೆದುಕೊಂಡಂತಾಗಿದೆ.
ಹಿಂದಿನ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದಿದ್ದು ಕೇವಲ ಒಂದೇ ಒಂದು ಸ್ಥಾನ. ಕಾಂಗ್ರೆಸ್ ಭದ್ರಕೋಟೆ ರಾಯ್‌ಬರೇಲಿಯಲ್ಲಿ (2019) ಸೋನಿಯಾ ಗಾಂಧಿ ಗೆದ್ದಿದ್ದರು. ಪಕ್ಷದ ಮತ್ತೊಂದು ಭದ್ರಕೋಟೆಯಾಗಿದ್ದ ಅಮೇಠಿಯಲ್ಲಿ ರಾಹುಲ್ ಗಾಂಧಿಯನ್ನು ಬಿಜೆಪಿಯ ಸ್ಮೃತಿ ಇರಾನಿ ಸೋಲಿಸಿದ್ದರು. ಈ ಚುನಾವಣೆಯಲ್ಲಿ ರಾಯ್‌ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧಿಸಿದ್ದು ಮುನ್ನಡೆ ಕಾಯ್ದುಕೊಂಡಿದ್ದಾರೆ.
ಇದನ್ನೂ ನೋಡಿ: NDA ಮೈತ್ರಿಕೂಟ ಅಧಿಕಾರಕ್ಕೆ ಬರುತ್ತಾ? ಆಶಾಭಾವದತ್ತ ಇಂಡಿಯಾ ಒಕ್ಕೂಟ Janashakthi Media