ಬಿಜೆಪಿಯ ಆರೋಪ ರಾಜಕೀಯ ಪ್ರೇರಿತ ಹಾಗೂ ಆಧಾರರಹಿತ| ಸಿಎಂ ಸಿದ್ದರಾಮಯ್ಯ

ಮೈಸೂರು: ಬಿಜೆಪಿಯ ಆರೋಪ ರಾಜಕೀಯ ಪ್ರೇರಿತ ಹಾಗೂ ಆಧಾರರಹಿತವಾಗಿದ್ದು,ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸೋಮವಾರ ಅಕ್ಟೋಬರ್-16‌  ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರ ಮನೆಯಲ್ಲಿ ಹಣಪತ್ತೆಯಾಗಿರುವ ಹಿನ್ನೆಲೆ ಕಾಂಗ್ರೆಸ್ ಸರ್ಕಾರ ದುಡ್ಡು ವಸೂಲಿ ಮಾಡುತ್ತಿದೆ ಎಂಬ ಬಿಜೆಪಿಯ ಆರೋಪಕ್ಕೆ ಮುಖ್ಯಮಂತ್ರಿತಗಳು ಉತ್ತರ ನೀಡುತ್ತಾ, ಆದಾಯ ತೆರಿಗೆ ಇಲಾಖೆ ತನ್ನ ಕೆಲಸ ಮಾಡಿದೆ ಎಂದರು.

ಇದನ್ನೂ ಓದಿ:ಸರ್ಕಾರ ರೈತರ, ನಾಡಿನ ಜನತೆಯ ಕೈ ಹಿಡಿಯಲಿದೆ| ಸಿಎಂ ಸಿದ್ದರಾಮಯ್ಯ ಭರವಸೆ

ಯಾರದೋ ಮನೆಯಲ್ಲಿ ಹಣ ಪತ್ತೆಯಾಗಿದ್ದು, ಇದಕ್ಕೆ ರಾಜಕೀಯ ನಂಟು ಹಾಕುವುದು ಸರಿಯಲ್ಲ. ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ. ಲೋಕಸಭೆ ಚುನಾವಣೆ ಹಾಗೂ ರಾಜಕೀಯ ಉದ್ದೇಶದಿಂದ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಯಾವುದೇ ತನಿಖೆಯ ಅವಶ್ಯಕತೆಯಿಲ್ಲ. ಪಂಚರಾಜ್ಯಗಳ ಚುನಾವಣೆ ಇರುವುದರಿಂದ ಕಾಂಗ್ರೆಸ್‍ನ ಮೇಲೆ ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ಬೇರೆ ರಾಜ್ಯದಲ್ಲಿ ಚುನಾವಣೆ ನಡೆಯುವುದಕ್ಕೂ ನಮ್ಮ ರಾಜ್ಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದರು.

ಸುಳ್ಳು ಹೇಳಿಕೆ :

ಕಾಂಗ್ರೆಸ್ ನಾಯಕರಿಗೆ ದುಡ್ಡು ಸಂಗ್ರಹಿಸುವ ಗುರಿ ನೀಡಿರುವುದಾಗಿ ಬಿಜೆಪಿಯ ಸಿ.ಟಿ.ರವಿಯವರು ಮಾಡಿರುವ ಆರೋಪಕ್ಕೆ ಪ್ರತಿಕ್ರಯಿಸುತ್ತಾ, ಸಿ.ಟಿ.ರವಿಯವರ ಹೇಳಿಕೆಗಳು ಸದಾ ಸುಳ್ಳಿನಿಂದ ಕೂಡಿರುತ್ತದೆ. ಅವರ ಸುಳ್ಳು ಹೇಳಿಕೆಗೆ ಪ್ರತಿಕ್ರಿಯೆ ನೀಡುವ ಅವಶ್ಯಕತೆ ಇಲ್ಲ. ಈ ರೀತಿಯ ಎಲ್ಲ ಆರೋಪಗಳು ಸುಳ್ಳು ಮತ್ತು ಆಧಾರರಹಿತವಾಗಿದೆ ಎಂದರು.

ವಿಡಿಯೋ ನೋಡಿ:DYFI ದ.ಕ ಜಿಲ್ಲಾ ಸಮ್ಮೇಳನದ ಉದ್ಘಾಟನಾ ಸಮಾರಂಭ

Donate Janashakthi Media

Leave a Reply

Your email address will not be published. Required fields are marked *