ಬಿಜೆಪಿ ಗಂಭೀರವಾಗಿರುತ್ತಿದ್ದರೆ 2014 ರಲ್ಲೇ ಮಹಿಳಾ ಮೀಸಲಾತಿ ಮಸೂದೆ ಅಂಗೀಕರಿಸಬಹುದಿತ್ತು: ರಾಷ್ಟ್ರೀಯ ಮಹಿಳಾ ಸಂಘಟನೆಗಳು ಹೇಳಿಕೆ

ನವದೆಹಲಿ: ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ಬಿಜೆಪಿ ಸರ್ಕಾರವು ಗಂಭೀರವಾಗಿರುತ್ತಿದ್ದರೆ, 2014 ರಲ್ಲೇ ಅದನ್ನು ಅಂಗೀಕರಿಸಬಹುದಿತ್ತು ಎಂದು ರಾಷ್ಟ್ರೀಯ ಮಹಿಳಾ ಸಂಘಟನೆಗಳು ಮಂಗಳವಾರ ಹೇಳಿವೆ. ಈ ಬಗ್ಗೆ ಜಂಟಿ ಹೇಳಿಕೆ ನೀಡಿರುವ ಅಖಿಲ ಭಾರತ ಪ್ರಜಾಸತ್ತಾತ್ಮಕ ಮಹಿಳಾ ಸಂಘ(AIDWA), ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(AIMSS) ಮತ್ತು ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘ(AIPWA), ವಿಧೇಯಕಕ್ಕೆ ಮಹಿಳಾ ಸಂಘಟನೆಗಳ ಅಭಿಪ್ರಾಯವನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದೆ.

ಮಸೂದೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಹಿಳಾ ಸಂಘಟನೆಗಳು, ಕಳೆದ 25 ವರ್ಷಗಳಿಂದ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಬೇಕು ಎಂದು ಮಹಿಳಾ ಸಂಘಟನೆಗಳು ಒತ್ತಾಯಿಸುತ್ತಿವೆ ಎಂದು ಹೇಳಿವೆ. ಕೇಂದ್ರ ಸಚಿವ ಸಂಪುಟವು ಅಂಗೀಕರಿಸಿದ ಮಸೂದೆಯ ಕರಡು ಪ್ರಕಾರ, 2029 ರ ಸಂಸತ್ತಿನ ಚುನಾವಣೆಯ ವೇಳೆಗೆ ಮಾತ್ರ ಮೀಸಲಾತಿ ಜಾರಿಗೆ ಬರಲಿದೆ ಎಂಬ ಅಂಶದ ಬಗ್ಗೆ ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಬೊಮ್ಮಾಯಿ ಅವರದ್ದು ನಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವ ಸಲಹೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬಿಜೆಪಿ ಸರ್ಕಾರವು ಮಹಿಳಾ ಮೀಸಲಾತಿಯ ಬಗ್ಗೆ ಗಂಭೀರವಾಗಿರುತ್ತಿದ್ದರೆ, 2014 ರಲ್ಲೇ ಅದನ್ನು ಅಂಗೀಕರಿಸಬಹುದಿತ್ತು ಎಂದು ರಾಷ್ಟ್ರೀಯ ಮಹಿಳಾ ಸಂಘಟನೆಗಳು ಸ್ಪಷ್ಟವಾಗಿ ಭಾವಿಸುತ್ತವೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದು,”ವಿಧೇಯಕದ ಮೇಲಿನ ಚರ್ಚೆ ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಯುವಂತೆ ಸರ್ಕಾರ ನೋಡಿಕೊಳ್ಳಬೇಕು ಮತ್ತು ಮಹಿಳಾ ಸಂಘಟನೆಗಳ ಅಭಿಪ್ರಾಯವನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು” ಎಂದು ಜಂಟಿ ಹೇಳಿಕೆ ತಿಳಿಸಿದೆ.

ಮಂಗಳವಾರ ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮಹಿಳಾ ಮೀಸಲಾತಿಯನ್ನು ಅಂಗೀಕರಿಸಿದೆ. ಮಸೂದೆ ಮಂಡನೆಯಾದರೂ 2024ರ ಲೋಕಸಭೆ ಚುನಾವಣೆಯಲ್ಲಿ ಈ ಕಾಯ್ದೆ ಜಾರಿಯಾಗುವ ಸಾಧ್ಯತೆ ಇಲ್ಲ ಎಂದು ವರದಿಯಾಗಿದೆ. 2026ರ ಡಿಲಿಮಿಟೇಶನ್ ಪ್ರಕ್ರಿಯೆಯು ಮುಗಿದ ನಂತರ, ಬಹುಶಃ 2029 ರಲ್ಲಿ ಇದನ್ನು ಜಾರಿಗೆ ತರಲಾಗುವುದು ಎಂದು ವರದಿಯಾಗಿದೆ.

ವಿಡಿಯೊ ನೋಡಿ: “ಹೈದರಾಬಾದ್ ವಿಮೋಚನಾ ದಿನ” ಮರೆಮಾಚಿದ ಸತ್ಯಗಳೇನು? ಜಿ.ಎನ್.‌ ನಾಗರಾಜ್‌ ವಿಶ್ಲೇಷಣೆಯಲ್ಲಿ | Janashakthi Media

Donate Janashakthi Media

Leave a Reply

Your email address will not be published. Required fields are marked *