ಬಿಜೆಪಿಯವರಿಂದ ರೆಮ್ಡೆಸಿವಿರ್ ದಾಸ್ತಾನು: ಪ್ರಿಯಾಂಕಾ ಆರೋಪ

ನವದೆಹಲಿ: ‘ಕೊರೊನಾ ಸೋಂಕಿತರಿಗೆ ವಿತರಿಸಬೇಕಾದ ಔಷಧಿಗಳನ್ನು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಚಿಕಿತ್ಸೆಗೆ ಬೇಕಾದ ರೆಮ್ಡೆಸಿವಿರ್ ಚುಚ್ಚುಮದ್ದನ್ನು ಅಕ್ರಮವಾಗಿ ಸಂಗ್ರಹಿಸಿಟ್ಟುಕೊಳ್ಳುವ ಮೂಲಕ ಅಮಾನವೀಯವಾಗಿ ನಡೆದುಕೊಳ್ಳುತ್ತಿದ್ದಾರೆ‘ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು ʻʻರೆಮ್ಡೆಸಿವಿರ್ ಔಷಧಿಯ ಸಾವಿರಾರು ಶೀಶೆಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದಕ್ಕೆ ಸಂಧಿಸಿದಂತೆ ಫಾರ್ಮಾ ಕಂಪನಿಯ ನಿರ್ದೇಶಕರೊಬ್ಬರನ್ನು ಪೊಲೀಸರು ವಿಚಾರಣೆ ನಡೆಸುತ್ತಿರುವ ವೇಳೆ ದೇವೇಂದ್ರ ಫಡಣವೀಸ್ ಮತ್ತಿತರ ಬಿಜೆಪಿ ನಾಯಕರು ಪೊಲೀಸರೊಂದಿಗೆ ವಾಗ್ವಾದ ನಡೆಸುತ್ತಿರುವ ವಿಡಿಯೊವನ್ನು ಪ್ರಿಯಾಂಕಾ ಗಾಂಧಿ ತಮ್ಮ ಟ್ವಿಟರ್‌ ಪೋಸ್ಟ್‌ಗೆ ಟ್ಯಾಗ್ ಮಾಡಿದ್ದಾರೆ.

ಇದನ್ನು ಓದಿ : ಇಂದಿನಿಂದ ಒಂದು ವಾರ ದೆಹಲಿಯಲ್ಲಿ ಲಾಕ್‌ಡೌನ್‌

‘ದೇಶದ ಮೂಲೆ ಮೂಲೆಗಳಿಂದ ಏಕಕಾಲಕ್ಕೆ ಜನರು ರೆಮ್ಡೆಸಿವಿರ್ ಔಷಧಕ್ಕಾಗಿ ಬೇಡಿಕೆ ಸಲ್ಲಿಸುತ್ತಿದ್ದಾರೆ. ಕೆಲವರು ತಮ್ಮ ಜೀವ ಉಳಿಸಿಕೊಳ್ಳಲು ರೆಮ್ಡಿಸಿವಿರ್ ಔಷಧ ಖರೀದಿಗೆ ಪರದಾಡುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಜ‌ವಾಬ್ದಾರಿಯುತ ಸ್ಥಾನದಲ್ಲಿರುವ ಬಿಜೆಪಿ ನಾಯಕರು, ರೆಮ್ಡೆಸಿವಿರ್ ಔಷಧಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟುಕೊಂಡಿರುವುದು ಮಾನವೀಯತೆ ಮೇಲೆ ನಡೆಸುತ್ತಿರುವ ಅಪರಾಧವಾಗಿದೆ‘ ಎಂದು ಪ್ರಿಯಾಂಕಾ ದೂರಿದ್ದಾರೆ.

ಯೋಗಿ ಆದಿತ್ಯನಾಥ್‌ ಅವರಿಗೆ ಪತ್ರ: ಕೊರೊನಾ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಸುಲಭವಾಗಿ ಪ್ರವೇಶ ಪಡೆಯುವಂತೆ ನೋಡಿಕೊಳ್ಳಬೇಕು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಇಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಒತ್ತಾಯಿಸಿದ್ದಾರೆ.

ಇದನ್ನು ಓದಿ: ಕೊರೊನಾ ಎದುರಿಸಲು ಸರಕಾರ ಏನು ಮಾಡಿದೆ? ಶ್ವೇತಪತ್ರ ಹೊರಡಿಸಲು ಸಿದ್ಧರಾಮಯ್ಯ ಆಗ್ರಹ

ಮುಖ್ಯ ವೈದ್ಯಕೀಯ ಅಧಿಕಾರಿ (ಸಿಎಂಒ) ಅವರು ಲಿಖಿತ ಪತ್ರವಿಲ್ಲದೆ ಯುಪಿಯಲ್ಲಿ ಅನೇಕ ಗಂಭೀರ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸುತ್ತಿಲ್ಲ ಎಂಬ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪತ್ರವನ್ನು ಬರೆದಿದ್ದಾರೆ.

‘ಸಿಎಂಒ ಅವರ ಪತ್ರವಿಲ್ಲದೆ ಅನೇಕ ಗಂಭೀರ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳನ್ನು ದಾಖಲಿಸಿಕೊಳ್ಳಲಾಗುವುದಿಲ್ಲ ಎಂಬ ಮಾಹಿತಿಯು ಅನೇಕ ಮೂಲಗಳಿಂದ ಕೇಳಿಬರುತ್ತಿದೆ. ಸಿಎಮ್ಒ ಪತ್ರಕ್ಕಾಗಿ ಕಾಯುತ್ತಿರುವಾಗ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳೇ, ದಯವಿಟ್ಟು ಅಂತಹ ನಿಯಮಗಳನ್ನು ಕೊನೆಗೊಳಿಸಿ, ಜನರ ಜೀವವನ್ನು ಉಳಿಸಿ’ ಎಂದು ಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *