ಎಐಸಿಸಿಯಲ್ಲಿ ಬದಲಾವಣೆ; ಬಿ ಕೆ ಹರಿಪ್ರಸಾದ್ ಹರಿಯಾಣಕ್ಕೆ ನೇಮಕ

ನವದೆಹಲಿ: ಎಐಸಿಸಿ ರಾಜ್ಯ ಉಸ್ತುವಾರಿ ಕಾರ್ಯದರ್ಶಿಗಳನ್ನು ಬದಲಾಯಿಸಲಾಗಿದ್ದು, ವಿವಿಧ ರಾಜ್ಯಗಳ ಹೊಣೆಗಾರಿಕೆಯನ್ನು ಪ್ರಧಾನ ಕಾರ್ಯದರ್ಶಿಗಳಾದ ಬಿ ಕೆ ಹರಿಪ್ರಸಾದ್, ನಾಸೀರ್ ಹುಸೇನ್ ಸೇರಿದಂತೆ ಹಲವರಿಗೆ ನೀಡಲಾಗಿದೆ. ಎಐಸಿಸಿ

ಹರಿಯಾಣ ರಾಜ್ಯದ ಪಕ್ಷದ ಉಸ್ತುವಾರಿಯಾಗಿ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ರನ್ನು ನೇಮಿಸಲಾಗಿದೆ. ರಾಜ್ಯಸಭಾ ಸದಸ್ಯ ಸಯ್ಯದ್ ನಾಸಿ‌ರ್ ಹುಸೇನ್ ಅವರನ್ನು ಜಮ್ಮು ಮತ್ತು ಕಾಶ್ಮೀರದ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಪಕ್ಷದ ಸಂಘಟನೆಯ ಪುನರ್ ರಚನೆ ಪ್ರಕ್ರಿಯೆಗೆ ಪಕ್ಷ ಚಾಲನೆ ನೀಡಿದೆ. ಛತ್ತೀಸಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಫೇಲ್ ಅವರಿಗೂ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ.

ಇದನ್ನೂ ಓದಿ: ಬೀದರ್| ATM ದರೋಡೆಕೋರರ ಸುಳಿವು ಕೊಟ್ಟವರಿಗೆ ಭಾರೀ ಬಹುಮಾನ ಘೋಷಣೆ

ಮತ್ತೆ ರಾಷ್ಟ್ರ ರಾಜಕಾರಣಕ್ಕೆ ಹರಿಪ್ರಸಾದ್?

ಬಿ.ಕೆ. ಹರಿಪ್ರಸಾದ್ ಕಾಂಗ್ರೆಸ್ಸಿನ ಹಿರಿಯ ನಾಯಕರಾಗಿ ರಾಜ್ಯ ಸಚಿವ ಸಂಪುಟದ ಪ್ರಬಲ ಆಕಾಂಕ್ಷಿಗಳಲ್ಲಿ ಒಬ್ಬರಾಗಿದ್ದರು. ಕರ್ನಾಟಕದ ಮುಖ್ಯಮಂತ್ರಿ ಹುದ್ದೆಗೂ ಬಿ.ಕೆ. ಹರಿಪ್ರಸಾದ್ ಪೈಪೋಟಿಯಲ್ಲಿದ್ದಾರೆ.

ಹರಿಪ್ರಸಾದ್ ಅವರು ದಶಕಗಳ ಕಾಲ ರಾಷ್ಟ್ರ ರಾಜಕಾರಣದಲ್ಲಿದ್ದು ಹಲವು ರಾಜ್ಯಗಳ ಉಸ್ತುವಾರಿಗಳಾಗಿ ಕಾರ್ಯನಿರ್ವಹಿಸಿದ್ದರು. ಮೂರು ವರ್ಷಗಳ ಹಿಂದೆ ರಾಜ್ಯ ರಾಜಕಾರಣಕ್ಕೆ ಬಂದಿದ್ದರು. ರಾಷ್ಟ್ರ ರಾಜಕಾರಣದಲ್ಲಿ ಅವರ ಅನುಭವವನ್ನು ಮತ್ತೆ ಬಳಸಿಕೊಳ್ಳಲು ಪಕ್ಷ ತೀರ್ಮಾನಿಸಿದ್ದು, ಮತ್ತೆ ಅವರು ದೆಹಲಿಗೆ ವಾಪಸ್ಸಾಗುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.

ಇದನ್ನೂ ನೋಡಿ: ಎಲ್‌ಐಸಿಯಲ್ಲಿ ವಿದೇಶ ನೇರ ಬಂಡವಾಳ : ವಿಮಾ ಉದ್ದಿಮೆಯ ಮೇಲೆ ಯಾವ ಪರೀಣಾಮ ಬೀರಬಹುದು? Janashakthi Media

Donate Janashakthi Media

Leave a Reply

Your email address will not be published. Required fields are marked *