ಮಂಗಳೂರು: ಚಲಿಸುತ್ತಿದ್ದ ಆಟೊ ನಿಗೂಢ ಸ್ಪೋಟ; ಅನುಮಾನಾಸ್ಪದ ವಸ್ತುಗಳು ಪತ್ತೆ

ಮಂಗಳೂರು: ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ಬಳಿ ಪ್ರಯಾಣದ ವೇಳೆಯಲ್ಲಿಯೇ ಆಟೋರಿಕ್ಷಾವೊಂದು ನಿಗೂಢ ಸ್ಪೋಟಗೊಂಡಿದೆ. ಪೊಲೀಸರು ಪರಿಶೀಲನೆ ವೇಳೆ ಆಟೋದಲ್ಲಿ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿವೆ.  ಎರಡು ಬ್ಯಾಟರಿ, ನಟ್ಟು​ ಬೋಲ್ಟ್​​, ಸರ್ಕ್ಯೂಟ್​​ ರೀತಿಯ ವೈರಿಂಗ್ ಮಾಡಿರುವ ವಸ್ತುಗಳು ಸಿಕ್ಕಿವೆ.

ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಬರುತ್ತಿದ್ದ ಆಟೋವನ್ನು ವ್ಯಕ್ತಿಯೊಬ್ಬ ನಾಗುರಿ ಬಳಿ ಆಟೋ ಹತ್ತಿದ ನಂತರ 1 ಕಿ.ಮೀ ದೂರದಲ್ಲಿ ಸ್ಪೋಟಗೊಂಡಿದೆ. ಘಟನೆಯು ಶನಿವಾರ ಸಂಜೆ 4.29ರ ಸುಮಾರಿಗೆ ಘಟನೆ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಭಾರಿ ಪ್ರಮಾಣದಲ್ಲಿ ಹೊಗೆ ಹಬ್ಬಿತ್ತು. ಆಟೋ ಚಾಲಕ ಸೇರಿದಂತೆ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ವಸ್ತುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯ ದೇಹದ ಅರ್ಧ ಭಾಗ ಸುಟ್ಟ ಗಾಯವಾಗಿದೆ. ಕೈ, ಎದೆ, ಮುಖದ ಭಾಗಕ್ಕೆ ಗಾಯವಾಗಿದ್ದು ಸದ್ಯ ಗಂಭೀರ ಸ್ಥಿತಿಯಲ್ಲಿರುವ ಪ್ರಯಾಣಿಕನಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಕರಣ ಸಂಬಂಧ ಮಂಗಳೂರು ಪೊಲೀಸರು ಪ್ರಯಾಣಿಕನನ್ನು ವಶಕ್ಕೆ ಪಡೆದಿದ್ದಾರೆ. ಪೂರ್ವನಿಗದಿಯಂತೆ ಸ್ಥಳಕ್ಕೆ ಸ್ಫೋಟಕ ವಸ್ತು ಸಾಗಿಸುತ್ತಿದ್ದಾಗ ಮಾರ್ಗಮಧ್ಯೆದಲ್ಲಿಯೇ ಸ್ಫೋಟಗೊಂಡಿದ್ದು, ವಸ್ತುಗಳನ್ನು ಸಾಗಿಸುತ್ತಿದ್ದವನು ಗಾಯಗೊಂಡಿದ್ದಾನೆ. ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಗಾಯಾಳು ಉತ್ತರ ಪ್ರದೇಶ ನಿವಾಸಿಯಾಗಿರುವ ಶಂಕೆ ವ್ಯಕ್ತವಾಗಿದ್ದು ಪ್ರೇಮ್​ ರಾಜ್​​ ಕನೋಗಿ ಎಂಬ ಹೆಸರಿನ ಗುರುತಿನ ಚೀಟಿ  ಪತ್ತೆಯಾಗಿದೆ. ಆತನ ಬಾಕ್ಸ್​​​, ಬ್ಯಾಗ್​​ನಿಂದಲೇ ಸ್ಫೋಟ ಸಂಭವಿಸಿರಬಹುದು ಎನ್ನಲಾಗಿದೆ.

ಹಿಂದಿ ಭಾಷೆ ಮಾತನಾಡುತ್ತಿದ್ದ ವ್ಯಕ್ತಿ ಎಂದು ಗುರುತಿಸಲಾಗಿದೆ. ಆದರೆ, ಆಟೋ ಪ್ರಯಾಣಿಕನ ತನಿಖೆ ವೇಳೆ ಅಸ್ಪಷ್ಟ ಮಾಹಿತಿ ಸಿಕ್ಕಿದೆ. ಈತ ಪೊಲೀಸರ ಎದುರು ಗೊಂದಲಕಾರಿ ಹೇಳಿಕೆ ನೀಡುತ್ತಿದ್ದಾನೆ. ಒಮ್ಮೆ ತಾನು ಮೈಸೂರಿನಿಂದ ಬಂದಿದ್ದಾಗಿ ಹೇಳಿದ್ದು ಅಣ್ಣ ಬಾಬುರಾವ್ ಗೆ ಕರೆ ಮಾಡಿ ಅಂತ ನಂಬರ್ ನೀಡಿದ್ದ. ಆ ನಂಬರ್​ಗೆ ಕರೆ ಮಾಡಿದಾಗ ಆತ ತನ್ನ ಸಂಬಂಧಿಕನೇ ಅಲ್ಲ, ಆತ ತನ್ನ ರೂಮ್ ನಲ್ಲಿದ್ದ, ಬೆಂಗಳೂರಿಗೆ ಹೋಗ್ತೇನೆಂದು ಹೋಗಿದ್ದ ಎಂದಿದ್ದಾನೆ. ಆತನ ಬಗ್ಗೆ ಬೇರೆ ಗೊತ್ತಿಲ್ಲ ಎಂದಿದ್ದಾನೆ. ಹೀಗಾಗಿ ಗಾಯಗೊಂಡ ಪ್ರಯಾಣಿಕನ ಬಗ್ಗೆ ಅನುಮಾನ ಹೆಚ್ಚಾಗಿದೆ.

ಸ್ಥಳದಲ್ಲಿ ಸಿಕ್ಕ ವಸ್ತುಗಳನ್ನು ಎಫ್‌ಎಸ್‌ಎಲ್‌ ತಂಡ ಪರೀಕ್ಷೆಗೊಳಪಡಿಸಿವೆ ಹಾಗೂ ಲಘು ತೀವ್ರತೆಯ ಸ್ಫೋಟಕ ಬಳಸಿರುವ ಶಂಕೆ ವ್ಯಕ್ತವಾಗಿದೆ. ಪ್ರಯಾಣಿಕನ ಬಳಿ ಇದ್ದ ಕುಕ್ಕರ್‌ ನಿಂದ ಸ್ಪೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಆದರೂ ಈ ಸ್ಫೋಟಕ್ಕೆ ಕಾರಣವೇನೆಂಬುದ ಇನ್ನೂ ತಿಳಿದು ಬಂದಿಲ್ಲ. ವಿಧಿ ವಿಜ್ಞಾನ ತಜ್ಞರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರು ಭೇಟಿ ಬೆನ್ನಲ್ಲೇ ಸ್ಪೋಟವಾಗಿದ್ದು ಇದನ್ನು ರಾಜ್ಯ ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಬೆಂಗಳೂರಿನಿಂದ ಮತ್ತಷ್ಟು ಬಾಂಬ್ ತಜ್ಞರ ತಂಡವೂ ಮಂಗಳೂರಿಗೆ ಆಗಮಿಸಲಿದ್ದು, ಪೊಲೀಸರು ಇಡೀ ಘಟನೆ ಬಗ್ಗೆ ಕೂಲಂಕುಶ ತನಿಖೆಗೆ ಇಳಿದಿದ್ದಾರೆ.

ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿ

ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಡಿಜಿ-ಐಜಿಪಿ ಪ್ರವೀಣ್‌ ಸೂದ್​, ಗೃಹ ಸಚಿವ ಆರಗ ಜ್ಞಾನೇಂದ್ರರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಇದೊಂದು ಉಗ್ರ ಕೃತ್ಯ ಎಂದು ಡಿಜಿಪಿ ಪ್ರವೀಣ್ ಸೂದ್ ಟ್ವೀಟ್​​ ಮಾಡಿದ್ದು, ಇದು ಅನಿರೀಕ್ಷಿತವಾಗಿ ಸ್ಫೋಟಗೊಂಡಿರುವುದು ಅಲ್ಲ. ಉದ್ದೇಶಪೂರ್ವಕವಾಗಿ ಹಾನಿ ಉಂಟು ಮಾಡಲು ಪ್ಲ್ಯಾನ್​ ಮಾಡಲಾಗಿದೆ. ಸಾವು ನೋವು, ಹಾನಿ ಉಂಟು ಮಾಡಲು ಹೀಗೆ ಮಾಡಿದ್ದಾರೆ. ಕರ್ನಾಟಕ ಪೊಲೀಸರಿಂದ ಕೇಂದ್ರ ತನಿಖಾ ಸಂಸ್ಥೆಗಳ ಜತೆ ತನಿಖೆ ನಡೆಸಲಾಗುತ್ತಿದೆ ಎಂದು ಟ್ವೀಟ್​ ಮೂಲಕ ತಿಳಿಸಿದ್ದಾರೆ.

ಎನ್‌ಐಎ ತಂಡ ಭೇಟಿ

ಇಂದು ಬೆಳಿಗ್ಗೆ ಘಟನಾ ಸ್ಥಳಕ್ಕೆ ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ದ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದೆ. ಎನ್‌ಐಎ ತಂಡದ ನಾಲ್ವರು ಸದಸ್ಯರು, ಆಟೋ ಸ್ಫೋಟಗೊಂಡ ಸ್ಥಳ ಹಾಗೂ ರಸ್ತೆ ಬದಿಯಲ್ಲೇ ಇದ್ದ ಆಟೋ‌ ರಿಕ್ಷಾವನ್ನು ಪರಿಶೀಲನೆ ನಡೆಸಿದರು. ಸ್ಥಳದಲ್ಲಿ ಪೊಲೀಸರು ಬೀಡು ಬಿಟ್ಟಿದ್ದಾರೆ‌.

Donate Janashakthi Media

Leave a Reply

Your email address will not be published. Required fields are marked *